ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಅ.01: ನಗರದ ಚರ್ಚ್ ರಸ್ತೆಯಲ್ಲಿ ವ್ಯಕ್ತಿಯೊರ್ವನನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದ ಘಟನೆಗೆ ಸಂಬಂಧಿಸಿದಂತೆ ಆರೋಪಿ ಡೇರಿಕ್ ಕ್ರಾಸ್ಟಾ ಎಂಬಾತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಭಟ್ಕಳ ತಾಲೂಕು ಬೆಳಕೆ ಗ್ರಾಮದ ಹೇರಬುಡಿಕೆ ಎಂಬಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.
ಕುಂದಾಪುರ ಚರ್ಚ್ ಎದುರಿಗೆ ಶುಕ್ರವಾರ ಬೆಳಗಿನ ಜಾವ 03:30ರ ಸುಮಾರಿಗೆ ಪಿಸ್ತೂಲ್ ಮೂಲಕ ಆರೋಪಿ ಗುಂಡು ಹೊಡೆದು ಪರಾರಿಯಾಗಿದ್ದು ತೀವ್ರ ರಕ್ತಸ್ರಾವದಿಂದ ಬಾರ್ಕೂರು ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಸ್ಥಳದಲ್ಲೇ ಮೃತಪಟ್ಟಿದ್ದರು. ಈ ವೇಳೆ ಐವನ್ ಅವರೊಂದಿಗಿದ್ದ ಎರಡನೇ ಪತ್ನಿ ಎನ್ನಲಾದ ಮಹಿಳೆ ಆರೋಪಿಯನ್ನು ಗುರುತು ಹಚ್ಚಿದ್ದರು. ಆರೋಪಿಯ ಪತ್ತೆಗೆ ಪೊಲೀಸರು ಮೂರು ವಿಶೇಷ ತಂಡವನ್ನು ರಚಿಸಿದ್ದರು.
ಕುಂದಾಪುರ ಚರ್ಚ್ ರಸ್ತೆಯ ನಿವಾಸಿಯಾದ ಡೇರಿಕ್ ಕ್ರಾಸ್ತಾ, ಹಣಕಾಸು ಅಥವಾ ಬೇರೆ ಯಾವುದೇ ವ್ಯವಹಾರದಿಂದ ಈ ಕೊಲೆ ನಡೆದಿರಬಹುದೆಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಶನಿವಾರ ಆರೋಪಿಯನ್ನು ಬಂಧಿಸಲಾಗಿದ್ದು, ತನಿಕೆ ಪ್ರಗತಿಯಲ್ಲಿದೆ.
ಇದನ್ನೂ ಓದಿ: ಕುಂದಾಪುರ: ನಡು ರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಕೊಲೆ. ಆರೋಪಿ ಪರಾರಿ – https://kundapraa.com/?p=100278











