ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಮ್ಮ ಜೀವನದ ಯಶಸ್ಸು ಪಡೆಯಬೇಕಾದರೆ ಕಷ್ಟಪಟ್ಟು ಕೆಲಸ ಮಾಡಬೇಕು. ಪ್ರಾಮಾಣಿಕ ಪ್ರಯತ್ನ ಇದ್ದರೆ ಅದಕ್ಕೆ ಪ್ರತಿಫಲ ಸಿಗುತ್ತದೆ.ಸಿ . ಎ ಮತ್ತು ಸಿ.ಎಸ್. ಪೂರ್ಣಗೊಳಿಸುವುದು ಕಷ್ಟ ಅಂತ ಭಾವಿಸುವುದು ತಪ್ಪು ಕಲ್ಪನೆ. ನಿರಂತರ ಪರಿಶ್ರಮ ಇದ್ದರೆ ಸಿ.ಎ. ಮತ್ತು ಸಿ.ಎಸ್. ಸುಲಭವಾಗಿ ಪೂರ್ಣಗೊಳಿಸಬಹುದು. ವಿದ್ಯಾರ್ಥಿಗಳು ಪ್ರತಿ ದಿನ ಪ್ರತಿ ಕ್ಷಣ ಶಿಕ್ಷಣದ ಅಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕು ಎಂದು ತ್ರಿಷಾ ಸಮೂಹ ಸಂಸ್ಥೆಗಳು ಸಂಸ್ಥಾಪಕರಾದ ಸಿಎ ಗೋಪಾಲಕೃಷ್ಣ ಭಟ್ ಅಭಿಪ್ರಾಯಪಟ್ಟರು.
ಅವರು ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯು ವಿಭಾಗದ ಸಿ.ಇ., ಸಿ.ಎಸ್. ವಾಣಿಜ್ಯಿಕ ಓರಿಯೋಟೇಷನ್ ಕಾರ್ಯಕ್ರಮದಲ್ಲಿ ಮಾತನಾಡಿದರು. ವಾಣಿಜ್ಯ ವಿಭಾಗದಲ್ಲಿ ಸಾಕಷ್ಟು ಉದ್ಯೋಗ ಅವಕಾಶಗಳು ಮುಂದಿನವು ದಿನಗಳಲ್ಲಿ ಸಿ.ಎ, ಸಿ.ಎಸ್. ಜೊತೆಗೆ ವಿಪುಲ ಅವಕಾಶಗಳು ಗ್ರಾಮೀಣ ಭಾಗದಲ್ಲಿರುವ ಜನತಾ ಪಿಯು ಕಾಲೇಜಿನಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ರಾಜ್ಯ ರಾಷ್ಟ್ರ ಮಟ್ಟದಲ್ಲಿ ಶೈಕ್ಷಣಿಕ ಸಾಧನೆಗಳು ಸಿಗುವ ಅವಕಾಶ ಉತ್ತಮ ವ್ಯಕ್ತಿಗಳಾಗಿ ಎಂದು ಅರಿವು ಮೂಡಿಸಿದರು.
ವೇದಿಕೆಯಲ್ಲಿ ಜನತಾ ಸಮೂಹ ಸಂಸ್ಥೆಯ ಕಾರ್ಯದರ್ಶಿ ಶ್ಯಾಮಲಾ ಗಣೇಶ್, ಜನತಾ ಪಿಯು ಕಾಲೇಜು ಉಪ ಪ್ರಾಂಶುಪಾಲರಾದ ರಮೇಶ್ ಪೂಜಾರಿ, ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಪ್ರತಾಪ್ ಉಪಸ್ಥಿತರಿದ್ದರು.
ಉಪ ಪ್ರಾಂಶುಪಾಲರಾದ ರಮೇಶ್ ಪೂಜಾರಿ ಸ್ವಾಗತಿಸಿ, ಉಪನ್ಯಾಸಕರಾದ ಅಭಿಜಿತ್ ನಿರೂಪಿಸಿ, ವಂದಿಸಿದರು.
















