Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » 16ನೇ ಆವೃತ್ತಿಯ ಆಳ್ವಾಸ್ ಪ್ರಗತಿ ಯಶಸ್ವಿಗೊಳಿಸಲು ಯುವ ನಾಯಕರು ಅಧಿಕೃತ ಪಾಲುದಾರರಾಗಲಿ: ವಿವೇಕ್ ಆಳ್ವ
    alvas nudisiri

    16ನೇ ಆವೃತ್ತಿಯ ಆಳ್ವಾಸ್ ಪ್ರಗತಿ ಯಶಸ್ವಿಗೊಳಿಸಲು ಯುವ ನಾಯಕರು ಅಧಿಕೃತ ಪಾಲುದಾರರಾಗಲಿ: ವಿವೇಕ್ ಆಳ್ವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ಬೃಹತ್ ಉದ್ಯೋಗ ಮೇಳದ ಯಶಸ್ವಿ ಆಯೋಜನೆಗಾಗಿ ಯುವ ಸಮುದಾಯದ ಸಕ್ರಿಯ ಭಾಗವಹಿಸುವಿಕೆ ಅತ್ಯಗತ್ಯವಾಗಿದ್ದು, ಯುವ ನಾಯಕರು ಈ  ಉದ್ಯೋಗ ಮೇಳದ ಅಧಿಕೃತ ಪಾಲುದಾರರಾಗಿ ಕಾರ್ಯನಿರ್ವಹಿಸಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಕರೆ ನೀಡಿದರು.

    ಅವರು ಆಳ್ವಾಸ್ ಪ್ರಗತಿ ಹಿನ್ನೆಲೆಯಲ್ಲಿ ಭಾನುವಾರ ಮಿಜಾರಿನಲ್ಲಿ ಆಯೋಜಿಸಲಾದ ಯುವ ನಾಯಕರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ  ಎರಡು ದಶಕಗಳಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಯಾವುದೇ ಲಾಭದ ಉದ್ದೇಶವಿಲ್ಲದೆ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಮಹತ್ವದ ಕಾರ್ಯವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ ಎಂದರು.

    Click Here

    Call us

    Click Here

    ಈ ಬಾರಿ 343ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಈಗಾಗಲೇ ನೋಂದಾಯಿಸಿಕೊಂಡಿದ್ದು, ಡಿಗ್ರಿ, ಬಿ.ಕಾಂ., ಡಿಪ್ಲೊಮಾ, ಐಟಿಐ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ13ಕ್ಕೂ ಹೆಚ್ಚು ಉದ್ಯೋಗ ವಲಯಗಳಲ್ಲಿ ಸಾವಿರಾರು ಉದ್ಯೋಗಾವಕಾಶಗಳು ಲಭ್ಯವಿವೆ. ಅನುಭವ ಹೊಂದಿದವರಿಗೂ ಸೂಕ್ತ ಉದ್ಯೋಗಗಳಿವೆ ಎಂದರು.

    ಇಂದಿನ ಉದ್ಯೋಗ ಜಗತ್ತಿನಲ್ಲಿ ಕೇವಲ ಪ್ರಮಾಣಪತ್ರಗಳಿಗೆ ಮಾತ್ರ ಮಹತ್ವವಿಲ್ಲ. ಕೌಶಲ್ಯ, ಆತ್ಮವಿಶ್ವಾಸ ಹಾಗೂ ಕಾರ್ಯಸಾಮರ್ಥ್ಯಕ್ಕೆ ಹೆಚ್ಚಿನ ಮೌಲ್ಯ ಸಿಗುತ್ತಿದೆ. ಆದ್ದರಿಂದ ಗ್ರಾಮೀಣ ಭಾಗದ ಯುವಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಮೇಳಕ್ಕೆ ಕರೆತರಬೇಕು. ಪೂರ್ವ ತಯಾರಿಯೊಂದಿಗೆ, ಆತ್ಮವಿಶ್ವಾಸದಿಂದ ಉದ್ಯೋಗ ಸಂದರ್ಶನಕ್ಕೆ ಹಾಜರಾಗುವಂತೆ ಅವರನ್ನು ಪ್ರೇರೇಪಿಸುವ ಜವಾಬ್ದಾರಿ ಯುವ ನಾಯಕರ ಮೇಲಿದೆ ಎಂದು ಹೇಳಿದರು.

    ನಮ್ಮ ವ್ಯವಸ್ಥೆ ಸಂಪೂರ್ಣ ಪಾರದರ್ಶಕವಾಗಿದೆ. ಯಾವುದೇ ಶಿಫಾರಸು ಅಥವಾ ಮಧ್ಯವರ್ತಿಗಳಿಗೆ ಇಲ್ಲಿ ಅವಕಾಶವಿಲ್ಲ. ಪ್ರತಿಯೊಬ್ಬ ಅಭ್ಯರ್ಥಿಗೂ ಅವರ ಅರ್ಹತೆ ಹಾಗೂ ಕೌಶಲ್ಯದ ಆಧಾರದ ಮೇಲೆಯೇ ಅವಕಾಶ ದೊರೆಯುತ್ತದೆ. ಈ ನಂಬಿಕೆಯನ್ನು ಸಮಾಜದ ಪ್ರತಿಯೊಂದು ಯುವಕರಿಗೂ ತಲುಪಿಸುವ ಕಾರ್ಯವನ್ನು ನೀವು ಮಾಡಬೇಕು ಎಂದು ಮನವಿ ಮಾಡಿದರು.

    ಯುವಕರಲ್ಲಿ ಅಪಾರ ಶಕ್ತಿ, ಸೃಜನಶೀಲತೆ ಮತ್ತು ಹೊಸತನದ ಚಿಂತನೆ ಅಡಗಿದೆ. ಜೆನ್-ಝಿ ಪೀಳಿಗೆಯ ಉತ್ಸಾಹ ಹಾಗೂ ಹಿರಿಯರ ಮೌಲ್ಯಾಧಾರಿತ ಜೀವನದೃಷ್ಟಿ ಒಂದಾದಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಹಿರಿಯರ ಅನುಭವ ಮತ್ತು ಕಿರಿಯರ ಚೈತನ್ಯ ಎರಡೂ ಸಮಾಜಕ್ಕೆ ಸಮಾನವಾಗಿ ಅಗತ್ಯವೆಂದು ಅಭಿಪ್ರಾಯಪಟ್ಟರು.

    Click here

    Click here

    Click here

    Call us

    Call us

    ಆಳ್ವಾಸ್ ಪ್ರಗತಿ ಕೇವಲ ಉದ್ಯೋಗ ಮೇಳವಲ್ಲ. ಇದು ಸಾವಿರಾರು ಯುವಕರ ಜೀವನಕ್ಕೆ ಹೊಸ ದಿಕ್ಕು ನೀಡುವ ಸಾಮಾಜಿಕ ಚಳವಳಿಯಾಗಿದೆ. ಸಮಾನ ಅವಕಾಶಗಳನ್ನು ಸೃಷ್ಟಿಸುವ, ಯುವಕರ ಜೀವನದಲ್ಲಿ ಉದ್ದೇಶವನ್ನು ಮೂಡಿಸುವ ವೇದಿಕೆಯಾಗಿದೆ. ನಿಮ್ಮಂತಹ ಯುವ ನಾಯಕರು ಜೊತೆಯಾದಾಗ ನಮ್ಮ ಕಾರ್ಯ ಇನ್ನಷ್ಟು ಬಲಿಷ್ಠವಾಗುತ್ತದೆ ಎಂದರು.

    ಈ ಬಾರಿಯ ಉದ್ಯೋಗ ಮೇಳದ ಸಿದ್ಧತೆಗಾಗಿ ಕಳೆದ ಮೂರು ತಿಂಗಳಿಂದ 70ಕ್ಕೂ ಹೆಚ್ಚು ಸಿಬ್ಬಂದಿ ನಿರಂತರವಾಗಿ ಶ್ರಮಿಸುತ್ತಿದ್ದು,  ಮೇಳದ ದಿನದಂದು ಸುಮಾರು 2,500 ಸ್ವಯಂಸೇವಕರು ಕಾರ್ಯಕ್ರಮದ ಯಶಸ್ಸಿಗಾಗಿ ಕೈಜೋಡಿಸಲಿದ್ದಾರೆ.  ಭಾನುವಾರವಾದರೂ ಸೇವಾ ಮನೋಭಾವದಿಂದ ಸಭೆಗೆ ಆಗಮಿಸಿರುವ ಯುವ ನಾಯಕರ ಬದ್ಧತೆಯೇ ಈ ಅಭಿಯಾನದ ದೊಡ್ಡ ಶಕ್ತಿ ಎಂದು ಶ್ಲಾಘಿಸಿದರು.

    ಹೊರ ಜಿಲ್ಲೆಗಳಿಂದ ಕನಿಷ್ಠ 2,500ಕ್ಕೂ ಹೆಚ್ಚು:
    ಉದ್ಯೋಗಾಕಾಂಕ್ಷಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿದರೆ, ಗ್ರಾಮೀಣ ಯುವಕರನ್ನು ತಲುಪುವ ನಮ್ಮ ಉದ್ದೇಶ ಸಾರ್ಥಕವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬ ಯುವ ನಾಯಕರು ತಮ್ಮ ವ್ಯಾಪ್ತಿಯ ಹೆಚ್ಚಿನ ಯುವಕರಿಗೆ ನೋಂದಣಿ ಮಾಡಿಸಿ ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ಪ್ರೇರೇಪಿಸಬೇಕು ಎಂದು ಕರೆ ನೀಡಿದರು.

    ವಿಶ್ವ ಕಬ್ಬಡ್ಡಿ ಚಾಂಪಿಯನ್‌ಶಿಪ್ ವಿಜೇತ ಭಾರತ ತಂಡದ ಆಟಗಾರ್ತಿ ಹಾಗೂ ಆಳ್ವಾಸ್‌ನ ವಿದ್ಯಾರ್ಥಿನಿ ಧನಲಕ್ಷ್ಮೀ ಪೂಜಾರಿಯವರು ಗುಜರಾತ್ ಆದಾಯ ತೆರಿಗೆ ಇಲಾಖೆಯಲ್ಲಿ ಉದ್ಯೋಗ ಪಡೆದ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಅವರನ್ನು ಸನ್ಮಾನಿಸಲಾಯಿತು

    ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಯುವ ಮುಖಂಡರು,  ಸಂಘ ಸಂಸ್ಥೆಗಳನ್ನು ಪ್ರತಿನಿಧಿಸುವ ಯುವ ನಾಯಕರುಗಳು ಭಾಗವಹಿಸಿ, ಆಳ್ವಾಸ್ ಪ್ರಗತಿ ಕುರಿತು ತಮ್ಮ ಅಭಿಪ್ರಾಯಗಳು, ಸಲಹೆಗಳು ಮತ್ತು ಸೂಚನೆಗಳನ್ನು ಹಂಚಿಕೊಂಡರು. ಉಪನ್ಯಾಸಕ ಡಾ. ವಿನಾಯಕ ಭಟ್ ಗಾಳಿಮನೆ ಕಾರುಕ್ರಮ ನಿರೂಪಿಸಿದರು. 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಚದುರಂಗ ಸ್ಪರ್ಧೆ: ಜನತಾ ನ್ಯೂ ಇಂಗ್ಲೀಷ್ ಮಿಡಿಯಂ ಶಾಲೆಯ 3 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

    03/08/2026

    ಕ್ರಿಯೇಟಿವ್ ಕಾಲೇಜಿನಲ್ಲಿ ಕ್ರಿಯೇಟಿವ್ ಪ್ರತಿಭಾ ಪರ್ವ ಕಾರ್ಯಕ್ರಮ – ನೀಟ್ ಸಾಧಕರಿಗೆ ಸನ್ಮಾನ

    03/08/2026

    ನಿರಂತರ ಪರಿಶ್ರಮ ಇದ್ದರೆ ಸಿ.ಎ ಮತ್ತು ಸಿ.ಎಸ್. ಸುಲಭ ಸಾಧ್ಯ: ಸಿಎ ಗೋಪಾಲ ಕೃಷ್ಣ ಭಟ್ ಅಭಿಮತ

    03/08/2026
    Leave A Reply Cancel Reply

    3 + six =

    Call us

    Click Here

    Call us

    Call us

    Call us
    Highest Viewed Recently
    • 16ನೇ ಆವೃತ್ತಿಯ ಆಳ್ವಾಸ್ ಪ್ರಗತಿ ಯಶಸ್ವಿಗೊಳಿಸಲು ಯುವ ನಾಯಕರು ಅಧಿಕೃತ ಪಾಲುದಾರರಾಗಲಿ: ವಿವೇಕ್ ಆಳ್ವ
    • ಗಂಗೊಳ್ಳಿ: ಕೋಳಿ ಅಂಕಕ್ಕೆ ಪೊಲೀಸರ ದಾಳಿ – ಇಬ್ಬರು ಬಂಧನ
    • ಜೆಸಿಐ ಶಿರೂರು ಘಟಕ – ರಾಘವೇಂದ್ರ ಪಡುವರಿ ಅವರಿಗೆ ಸನ್ಮಾನ
    • ಜಿಲ್ಲಾ ಇಂಟರಾಕ್ಟ್ ಪ್ರತಿನಿಧಿಯಾಗಿ ಸೃಷ್ಟಿ ಆರ್ ಆಯ್ಕೆ
    • ಚದುರಂಗ ಸ್ಪರ್ಧೆ: ಜನತಾ ನ್ಯೂ ಇಂಗ್ಲೀಷ್ ಮಿಡಿಯಂ ಶಾಲೆಯ 3 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.