ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಲ್ಲಿ ಕ್ಯಾನ್ ಫಿನ್ ಹೋಮ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಿಎಸ್ಆರ್ ನಿಧಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸಾಡು ಇಲ್ಲಿ ಸುಮಾರು 10 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಬಾಲಕ ಮತ್ತು ಬಾಲಕಿಯರ ಶೌಚಾಲಯದ ಭೂಮಿ ಪೂಜೆಯನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ನೆರವೇರಿಸಿದರು.

ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜಾ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕರು, ಸಮಾಜದ ಒಗ್ಗೂಡುವಿಕೆಯಿಂದ ನಮ್ಮ ಊರಿನ ಸರಕಾರಿ ಶಾಲೆಗಳನ್ನು ಇನ್ನಷ್ಟು ಬಲಪಡಿಸಲು ಹಾಗೂ ಸಮಾಜದ ಪ್ರತಿಯೊಬ್ಬ ವಿದ್ಯಾರ್ಥಿಗೂ ಉತ್ತಮ ಶಿಕ್ಷಣ ನೀಡಲು ಸಹಕಾರಿ ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಶಾಸಕರು ಸೌಲಭ್ಯವನ್ನು ಒದಗಿಸಿದ ಕ್ಯಾನ್ ಫಿನ್ ಹೋಂಮ್ಸ್ ಸಂಸ್ಥೆಗೆ ಅಭಿನಂದನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ರೇಖಾ ಗಣೇಶ್, ಉಪಾಧ್ಯಕ್ಷರಾದ ರಾಘವೇಂದ್ರ ಆಚಾರ್ಯ ಹಾಗೂ ಸರ್ವ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಚಂದ್ರ ಶೇಖರ ಪೂಜಾರಿ ಅರಾಟೆ ಹಾಗೂ ಪದಾಧಿಕಾರಿಗಳು, ಬೈಂದೂರು ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾಗಿರವ ವಿಜಯ ಕುಮಾರ್ ಶೆಟ್ಟಿ ಹಾಗೂ ಹಳೆ ವಿದ್ಯಾರ್ಥಿಗಳಾದ ವಿಶ್ವನಾಥ ಶೆಟ್ಟಿ ಕೋಟೆಮಕ್ಕಿ, ಗುರುಕಿರಣ್, ಸಂತೋಷ್ ಮೊಗವೀರ, ಶಾಂತರಾಮ ಶೆಟ್ಟಿ,ಅರುಣ್ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.
ನಿವೃತ್ತ ಶಿಕ್ಷಕರಾದ ಸದಾಶಿವ ಶೆಟ್ಟಿ, ತೇಜಪ್ಪ ಶೆಟ್ಟಿ ಹಾಗೂ ನಿವೃತ್ತ ಬ್ಯಾಂಕ್ ಉದ್ಯೋಗಿ ರಾಜೀವ ಶೆಟ್ಟಿ ಕಡ್ಲೇರ ಮನೆ ಹಾಗೂ ಶಾಲಾ ಶಿಕ್ಷಕ ವರ್ಗ,ಹಾಗೂ ಅಡುಗೆ ಸಿಬ್ಬಂದಿಗಳು ಸಹಕರಿಸಿದರು.
ಶಾಲಾ ಮುಖ್ಯ ಶಿಕ್ಷಕಿ ಗೀತಾ ಅವರು ಶಾಸಕರ 300 ಟ್ರೀಸ್ ಯೋಜನೆಯಿಂದ ಇಂದು ಬೈಂದೂರು ಕ್ಷೇತ್ರದ ಹಲವಾರು ಸರ್ಕಾರಿ ಶಾಲೆಗಳು ಭೌತಿಕ ಸೌಲಭ್ಯಗಳು ಹಾಗೂ ಗುಣಮಟ್ಟದ ಶಿಕ್ಷಣ ನೀಡಲು ಸಹಕಾರಿಯಾಗಿದೆ, ಶಿಕ್ಷಣ ಕ್ಷೇತ್ರಕ್ಕೆ ಅವರು ಕಾಳಜಿ ಅಭಿನಂದನಾರ್ಹ ಎಂದರು. ಸಹ ಶಿಕ್ಷಕಿ ಪ್ರತಿಮಾ ಜಿ. ನಿರೂಪಿಸಿ, ವಂದಿಸಿದರು
















