Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭಾರತ್ ಜೋಡೋ – ಯುವ ಸಂಘಗಳ ರಚನೆಗೆ ಮುಂದಾಗಲು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ
    ಉಡುಪಿ ಜಿಲ್ಲೆ

    ಭಾರತ್ ಜೋಡೋ – ಯುವ ಸಂಘಗಳ ರಚನೆಗೆ ಮುಂದಾಗಲು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಯುವ ಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು, ಸಮಾಜಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಹಾಗೂ ರಾಷ್ಟ್ರ ನಿರ್ಮಾಣ ಕಾರ್ಯಗಳಲ್ಲಿ ಸಕ್ರೀಯವಾಗಿ ಭಾಗವಹಿಸುವಂತೆ ಪ್ರೋತ್ಸಾಹಿಸುವ ಉದ್ದೇಶದಿಂದ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ರಾಜ್ಯ ಸರಕಾರ ಆದೇಶಿಸಿದ್ದು, ಸರಕಾರದ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಮಾರ್ಗಸೂಚಿಯನ್ವಯ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. 

    Click Here

    Call us

    Click Here

    ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸುವ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯುವಜನತೆಯಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ, ಸಾಮಾಜಿಕ ಸಾಮರಸ್ಯ, ಸಂವಿಧಾನದ ಮೌಲ್ಯಗಳು ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯತ್ ಹಾಗೂ ನಗರ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹತ್ತು ಸಾವಿರ ಭಾರತ್ ಜೋಡೋ ಯುವಕ ಸಂಘಗಳನ್ನು ಸ್ಥಾಪಿಸಲು ಸರ್ಕಾರ ಮುಂದಾಗಿದ್ದು, ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಈ ಸಂಘಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

    ವಿಕಾಸಶೀಲ ಮತ್ತು ಸೌಹಾರ್ದಶೀಲ ರಾಜ್ಯ ನಿರ್ಮಾಣಕ್ಕಾಗಿ, ಸಮುದಾಯ ಅಭಿವೃದ್ಧಿ, ಸಾಮಾಜಿಕ ಸಾಮರಸ್ಯ, ಕ್ರೀಡೆ, ಫಿಟ್‌ನೆಸ್ ಮತ್ತು ಕೌಶಲ್ಯಾಭಿವೃದ್ಧಿಯ ಮೂಲಕ ಯುವಜನರನ್ನು ಸಬಲೀಕರಣಗೊಳಿಸಿ, ತಳಮಟ್ಟದ ಆಡಳಿತದಲ್ಲಿ ಸಕ್ರೀಯ ಪಾಲುದಾರರನ್ನಾಗಿ ಮಾಡಲು ಸಶಕ್ತ ಯುವಜನರನ್ನೊಳಗೊಂಡ ಭಾರತ್ ಜೋಡೋ ಯುವ ಸಂಘಗಳನ್ನು ರಚಿಸಲಾಗುತ್ತಿದೆ ಎಂದರು.

    ಜಿಲ್ಲೆಯ ಎಲ್ಲಾ 155 ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ತಲಾ ಒಂದರAತೆ ಭಾರತ್ ಜೋಡೋ ಯುವಕ ಸಂಘಗಳನ್ನು ಸ್ಥಾಪಿಸಲಾಗಿದ್ದು, ಅದೇ ರೀತಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸರಾಸರಿ 4000 ಜನಸಂಖ್ಯೆಗೆ ಒಂದರಂತೆ, ಪುರಸಭೆ ವ್ಯಾಪ್ತಿಯಲ್ಲಿ ಸರಾಸರಿ 6000 ಜನಸಂಖ್ಯೆಗೆ ಒಂದರಂತೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಸರಾಸರಿ 8000 ಜನಸಂಖ್ಯೆಗೆ ಒಂದು ಸಂಘವನ್ನು ಸ್ಥಾಪಿಸುವಂತೆ ತಿಳಿಸಿದ ಅವರು, ಪ್ರತಿ ಸಂಘಕ್ಕೆ ಸರ್ಕಾರದಿಂದ ಹಂತಹಂತವಾಗಿ ಅನುದಾನವನ್ನು ನೀಡಲಾಗುವುದು ಎಂದರು.

     ಕನಿಷ್ಟ 16 ರಿಂದ ಗರಿಷ್ಟ 35 ವರ್ಷದೊಳಗಿನ ಯುವಕ – ಯುವತಿಯರು ಈ ಸಂಘಗಳಲ್ಲಿ ಸದಸ್ಯರಾಗಬಹುದು. ಪ್ರತಿ ಸಂಘದಲ್ಲಿ ಕನಿಷ್ಟ 100 ಜನ ಯುವ ಸದಸ್ಯರು ಇರುವುದು ಕಡ್ಡಾಯ ಎಂದ ಅವರು, ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಸಂಬAಧಿಸಿದAತೆ ಆಗಸ್ಟ್ 6 ರಿಂದ ಬಿ.ಜೆ.ವೈ.ಎಸ್ ವೆಬ್‌ಸೈಟ್‌ನಲ್ಲಿ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಯುವಜನರು ಅದರಲ್ಲಿ ನೋಂದಣಿ ಮಾಡಿಕೊಂಡು ಸದಸ್ಯತ್ವ ಪಡೆಯಬಹುದಾಗಿದೆ ಎಂದರು. 

    Click here

    Click here

    Click here

    Call us

    Call us

    ಪ್ರತಿ ಸಂಘವು ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ 15 ಜನ ಸದಸ್ಯರನ್ನು ಒಳಗೊಂಡ ಆಂತರಿಕ ಕಾರ್ಯಕಾರಿ ಸಮಿತಿಯನ್ನು ಹೊಂದಿರಲಿದೆ. ಇದರಲ್ಲಿ ಅಧ್ಯಕ್ಷ, ಉಪಾಧ್ಯಕ್ಷ, ಖಜಾಂಜಿ ಹಾಗೂ 12 ಜನರ ಕಾರ್ಯಕಾರಿ ಸದಸ್ಯರು ಇರಲಿದ್ದಾರೆ ಎಂದ ಅವರು, ಮಹಿಳಾ ಪ್ರಾತಿನಿಧ್ಯ, ಮೀಸಲಾತಿಯನ್ನು ಕಡ್ಡಾಯವಾಗಿ ಮಾಡಬೇಕು ಎಂದರು.

    ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಯುವಜನರ ಸಕ್ರೀಯ ಭಾಗವಹಿಸುವಿಕೆಯನ್ನು ಖಚಿತಪಡಿಸಿ, ಸಂಘಗಳ ರಚನೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮವಹಿಸುವಂತೆ ಸೂಚನೆ ನೀಡಿದ ಅವರು, ಭಾರತ್ ಜೋಡೋ ಕಾರ್ಯಕ್ರಮದ ಕುರಿತು ಜನಸಾಮಾನ್ಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಜಿಂಗಲ್ಸ್ ಸೇರಿದಂತೆ ಮತ್ತಿತರ ಪ್ರಚಾರ ಕಾರ್ಯಕ್ರಮಗಳನ್ನು ಕೈಗೊಂಡು ಹೆಚ್ಚು ಯುವಜನರು ನೋಂದಣಿ ಆಗುವಂತೆ ನೋಡಿಕೊಳ್ಳಬೇಕು ಎಂದರು.

    ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ ಹಾಗೂ ಶಿಕ್ಷಣ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ.ಉದಯ್ ಶೆಟ್ಟಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆಗಸ್ಟ್ 6 ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

    04/08/2026

    ಜಿಲ್ಲೆಯಲ್ಲಿ 9,97,032 ಗಣತಿ ನಮೂನೆ ಡಿಜಿಟಲೀಕರಣ

    03/08/2026

    ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿ ಮೇವಿನ ಕೊರತೆಯನ್ನು ನೀಗಿಸಲು ಈಗಿನಿಂದಲೇ ಕಾರ್ಯಪ್ರವೃತ್ತರಾಗಿ: ಜಿಲ್ಲಾಧಿಕಾರಿ

    03/08/2026
    Leave A Reply Cancel Reply

    twenty − 18 =

    Call us

    Click Here

    Call us

    Call us

    Call us
    Highest Viewed Recently
    • ಗುಜ್ಜಾಡಿ: ಬೈಕ್‌ಗಳ ನಡುವೆ ಡಿಕ್ಕಿ  – ಸವಾರರರಿಗೆ ಗಾಯ
    • ಮೊಗೆಬೆಟ್ಟು ಅಂಗನವಾಡಿಗೆ ರೋಟರಿ ಕ್ಲಬ್ ತೆಕ್ಕಟ್ಟೆಯಿಂದ ಕಚೇರಿ ಮೇಜು ವಿತರಣೆ
    • ಉಪ್ಪುಂದ: ಉಸಿರಾಟದ ತೊಂದರೆಯಿಂದ ವ್ಯಕ್ತಿ ಸಾವು
    • ಕುಂದಾಪುರ: ವ್ಯಕ್ತಿ ನಾಪತ್ತೆ, ಪ್ರಕರಣ ದಾಖಲು
    • ಆಗಸ್ಟ್ 6 ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.