ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗುಜ್ಜಾಡಿ-ಕೊಡಪಾಡಿ ರಸ್ತೆಯಲ್ಲಿ ರವಿವಾರ ಎರಡು ಬೈಕ್‌ಗಳು ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ಸವಾರರು ಗಾಯಗೊಂಡಿದ್ದಾರೆ. ಕರಾವಳಿ ಕಾವಲು ಪಡೆ ಪೊಲೀಸ್ ಸಿಬ್ಬಂದಿ ಚೇತನ್ ಮತ್ತು ಕೊಡಪಾಡಿ ನಿವಾಸಿ ಮಂಜಾಯ್ ಪ್ರಸಾದ್ ಗಾಯಗೊಂಡ ಸವಾರರು.
ಚೇತನ್ ಅವರು ಗುಹೇಶ್ವರ ದೇವಸ್ಥಾನದ ಕಡೆಯಿಂದ ಕೊಡಪಾಡಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಎದುರಿನಿಂದ ಬರುತ್ತಿದ್ದ ಮಂಜಾಯ್ ಪ್ರಸಾದ್ ಅವರು ಸ್ಕೂಟರ್ ಅನ್ನು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಢಿಕ್ಕಿ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.











