ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಾರದಾ ಅಂಗ್ಲ ಮಾಧ್ಯಮ ಶಾಲೆ ಬಸ್ರೂರು ಇವರ ಜಂಟಿ ಆಶ್ರಯದಲ್ಲಿ ನಡೆದಂತಹ ತಾಲ್ಲೂಕು ಮಟ್ಟದ 14 ಮತ್ತು 17 ರ ವಯೋಮಿತಿಯೊಳಗಿನ ಕರಾಟೆ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸ್ಟೆಲ್ಲಾ ಮಾರಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಗೈದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ .

8ನೇ ತರಗತಿಯ ವಿದ್ಯಾರ್ಥಿ ಮಹಮ್ಮದ್ ಮಾಝ್ ಸ್ಪರ್ಧಿಸಿ ಪ್ರಥಮ ಸ್ಥಾನ ಪಡೆದು ಸ್ವರ್ಣ ಪದಕವನ್ನು ಹಾಗೂ 10ನೇ ತರಗತಿಯ ವಿದ್ಯಾರ್ಥಿ ಮಹಮದ್ ಅಫ್ಸಾನ್ ದ್ವಿತೀಯ ಸ್ಥಾನ ಪಡೆದು ಬೆಳ್ಳಿಯ ಪದಕವನ್ನು ಪಡೆಯುವುದರ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ .
ವಿಜೇತ ವಿದ್ಯಾರ್ಥಿಗಳಿಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ ಧರ್ಮಭಗಿನಿ ವಿಜಯ ಕ್ರಾಸ್ತಾ , ಶಿಕ್ಷಕ -ಶಿಕ್ಷಕೇತರ ವೃಂದದವರು, ಪೋಷಕರು ಹಾಗೂ ವಿದ್ಯಾರ್ಥಿ ಗಳು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.











