Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಿಜೆಪಿ ಶಾಸಕರು ಅಭಿವೃದ್ಧಿ ಬಗ್ಗೆ ಸುಳ್ಳು ಪ್ರಚಾರ ನಿಲ್ಲಿಸಲಿ: ಕೇಶವ ಭಟ್
    ಊರ್ಮನೆ ಸಮಾಚಾರ

    ಬಿಜೆಪಿ ಶಾಸಕರು ಅಭಿವೃದ್ಧಿ ಬಗ್ಗೆ ಸುಳ್ಳು ಪ್ರಚಾರ ನಿಲ್ಲಿಸಲಿ: ಕೇಶವ ಭಟ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರಿರುವ ಕ್ಷೇತ್ರಗಳಿಗೆ ಯಾವುದೇ ಅನುದಾನ ಬರುತ್ತಿಲ್ಲ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಬಿಜೆಪಿ ಸಂಸದರ ಮೂಲಕ ಅನುದಾನ ತಂದು ಅಭಿವೃದ್ಧಿ ಕಾಮಗಾರಿಗಳನ್ನು ಮಾಡುತ್ತಿದ್ದೇವೆ” ಎಂದು ಯೂಟ್ಯೂಬ್ ವಾಹಿನಿಯೊಂದಕ್ಕೆ ನೀಡಿರುವ ಕೆಲ ಬಿಜೆಪಿ ಪರ ನಾಯಕರ ಹೇಳಿಕೆ ಸಂಪೂರ್ಣ ದಿಕ್ಕು ತಪ್ಪಿಸುವಂತಿದ್ದು, ಇದು ಅವರ ಅಜ್ಞಾನವೋ ಅಥವಾ ಜನರನ್ನು ಉದ್ದೇಶಪೂರ್ವಕವಾಗಿ ದಾರಿ ತಪ್ಪಿಸುವ ಪ್ರಯತ್ನವೋ ಎಂಬ ಅನುಮಾನ ಮೂಡಿಸುತ್ತದೆ ಎಂದು ಕಾಂಗ್ರೆಸ್ ಯುವ ನಾಯಕ ಹಾಗೂ ಪುರಸಭೆಯ ಮಾಜಿ ಸದಸ್ಯ ಕೇಶವ ಭಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

    Click Here

    Call us

    Click Here

    ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ವಿಶೇಷವಾಗಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಜನರಿಗೆ ತಪ್ಪು ಮಾಹಿತಿ ನೀಡುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

    ಒಂದು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗುವ ಪ್ರಕ್ರಿಯೆಯ ಬಗ್ಗೆ ಕನಿಷ್ಠ ಆಡಳಿತಾತ್ಮಕ ಅರಿವು ಇದ್ದವರು ಇಂತಹ ಹೇಳಿಕೆಗಳನ್ನು ನೀಡುವುದಿಲ್ಲ. ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕುಡಿಯುವ ನೀರು, ಆರೋಗ್ಯ, ಶಿಕ್ಷಣ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ರಾಜ್ಯ ಸರ್ಕಾರ ಯೋಜನಾವಾರು ಮತ್ತು ಅಗತ್ಯಕ್ಕೆ ಅನುಗುಣವಾಗಿ ಅನುದಾನ ಮಂಜೂರು ಮಾಡುತ್ತದೆ. ಕೇಂದ್ರ ಸರ್ಕಾರ ಯಾವುದೇ ವಿಧಾನಸಭಾ ಕ್ಷೇತ್ರಕ್ಕೆ ನೇರವಾಗಿ ಹಣ ವರ್ಗಾಯಿಸಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸುವ ವ್ಯವಸ್ಥೆ ಇಲ್ಲ. ಕೇಂದ್ರ ಪ್ರಾಯೋಜಿತ ಯೋಜನೆಗಳಿಗೂ ನಿಗದಿತ ನಿಯಮಗಳಿದ್ದು, ಅವು ಸಂಬಂಧಿತ ಇಲಾಖೆಗಳ ಮೂಲಕವೇ ಜಾರಿಯಾಗುತ್ತವೆ ಎಂದರು.

    ಸಂಸದರ ನಿಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವವರು ಅದರ ವಾಸ್ತವಿಕತೆ ಏನೆಂಬುದನ್ನು ಮೊದಲು ತಿಳಿದುಕೊಳ್ಳಬೇಕು. ಒಬ್ಬ ಲೋಕಸಭಾ ಸದಸ್ಯರಿಗೆ ದೊರೆಯುವ ವಾರ್ಷಿಕ ₹5 ಕೋಟಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯನ್ನು (MPLADS) ಉಡುಪಿ ಜಿಲ್ಲೆಯ ಐದು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಹಂಚಿಕೆ ಮಾಡಬೇಕಾಗುತ್ತದೆ. ಅಂದರೆ ಸರಾಸರಿ ಲೆಕ್ಕದಲ್ಲಿ ಒಂದು ವಿಧಾನಸಭಾ ಕ್ಷೇತ್ರಕ್ಕೆ ಬರುವ ಪಾಲು ₹40 ಲಕ್ಷಕ್ಕೂ ಕಡಿಮೆ. ಇಂತಹ ಸೀಮಿತ ಮೊತ್ತವನ್ನೇ ಇಡೀ ಕ್ಷೇತ್ರದ ಅಭಿವೃದ್ಧಿಗೆ ಕಾರಣ ಎಂದು ಹೇಳುವುದು ಜನರ ಕಣ್ಣಿಗೆ ಮಣ್ಣೆರಚುವ ಪ್ರಯತ್ನವಾಗಿದೆ ಎಂದು ಅವರು ಟೀಕಿಸಿದರು.

    ಕುಂದಾಪುರ ಸೇರಿದಂತೆ ಉಡುಪಿ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಮಾತನಾಡುವ ಬಿಜೆಪಿ ನಾಯಕರು ಭಾವನಾತ್ಮಕ ರಾಜಕೀಯ ಭಾಷಣಗಳನ್ನು ಮಾಡುವ ಬದಲು, ಯಾವ ಇಲಾಖೆಯಿಂದ ಎಷ್ಟು ಅನುದಾನ ಬಂದಿದೆ, ಯಾವ ಕಾಮಗಾರಿಗೆ ಎಷ್ಟು ಹಣ ಬಿಡುಗಡೆಯಾಗಿದೆ, ಯಾವ ಯೋಜನೆ ಯಾವ ಹಂತದಲ್ಲಿದೆ ಎಂಬ ವಾಸ್ತವಾಂಶಗಳನ್ನು ಜನರ ಮುಂದೆ ಇಡಲಿ. ಸುಳ್ಳು ಪ್ರಚಾರದಿಂದ ಅಭಿವೃದ್ಧಿಯನ್ನು ಸಾಬೀತುಪಡಿಸಲು ಸಾಧ್ಯವಿಲ್ಲ ಎಂದರು.

    Click here

    Click here

    Click here

    Call us

    Call us

    ಸಾರ್ವಜನಿಕ ಜೀವನದಲ್ಲಿರುವವರು ರಾಜಕೀಯ ಲಾಭಕ್ಕಾಗಿ ಜನರಿಗೆ ತಪ್ಪು ಮಾಹಿತಿ ನೀಡುವುದನ್ನು ಬಿಟ್ಟು, ಆಡಳಿತ ವ್ಯವಸ್ಥೆ ಮತ್ತು ಅಭಿವೃದ್ಧಿ ಪ್ರಕ್ರಿಯೆಗಳ ಬಗ್ಗೆ ಸರಿಯಾದ ತಿಳುವಳಿಕೆಯನ್ನು ನೀಡಬೇಕು. ಜನರು ಈಗ ಪ್ರಚಾರಕ್ಕಿಂತ ದಾಖಲೆಗಳನ್ನು ನಂಬುವ ಕಾಲ ಬಂದಿದೆ ಎಂಬುದನ್ನು ಬಿಜೆಪಿ ನಾಯಕರು ಅರಿತುಕೊಳ್ಳಬೇಕು ಎಂದು ಕೇಶವ ಭಟ್ ಹೇಳಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ‘ಶಿಕ್ಷಣ ಸುಧಾರಣೆ’ ವಿಚಾರ ವಿನಿಮಯ ಕಾರ್ಯಕ್ರಮ

    05/08/2026

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು  ಚೆಸ್‌ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ                    

    05/08/2026

    ಹೊಸಂಗಡಿ ಸ.ಪ.ಪೂ ಕಾಲೇಜು: ವಿವಿಧ ಕ್ಲಬ್‌ಗಳ ಉದ್ಘಾಟನೆ, ವಿದ್ಯಾರ್ಥಿನಿಯರ ಸುಸಜ್ಜಿತ ಶೌಚಾಲಯ ಕೀ ಹಸ್ತಾಂತರ

    05/08/2026
    Leave A Reply Cancel Reply

    15 − twelve =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ‘ಶಿಕ್ಷಣ ಸುಧಾರಣೆ’ ವಿಚಾರ ವಿನಿಮಯ ಕಾರ್ಯಕ್ರಮ
    • ಕಳಪೆ ಆಮದು ಅಡಿಕೆಯ ಸಮಸ್ಯೆ; ರಾಜ್ಯದ ಅಡಿಕೆ ಬೆಳೆಗಾರರ ನೆರವಿಗೆ ಬರಲು ಕೇಂದ್ರಕ್ಕೆ ಸಂಸದ ಕೋಟ ಒತ್ತಾಯ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು  ಚೆಸ್‌ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ                    
    • ಬಿಜೆಪಿ ಶಾಸಕರು ಅಭಿವೃದ್ಧಿ ಬಗ್ಗೆ ಸುಳ್ಳು ಪ್ರಚಾರ ನಿಲ್ಲಿಸಲಿ: ಕೇಶವ ಭಟ್
    • ಹೊಸಂಗಡಿ ಸ.ಪ.ಪೂ ಕಾಲೇಜು: ವಿವಿಧ ಕ್ಲಬ್‌ಗಳ ಉದ್ಘಾಟನೆ, ವಿದ್ಯಾರ್ಥಿನಿಯರ ಸುಸಜ್ಜಿತ ಶೌಚಾಲಯ ಕೀ ಹಸ್ತಾಂತರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.