Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ‘ಶಿಕ್ಷಣ ಸುಧಾರಣೆ’ ವಿಚಾರ ವಿನಿಮಯ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ‘ಶಿಕ್ಷಣ ಸುಧಾರಣೆ’ ವಿಚಾರ ವಿನಿಮಯ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಶಿಕ್ಷಣ ಸಂಸ್ಥೆಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಬಹುದೊಡ್ಡದು ಎಂದು ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಕಾರ್ಯದರ್ಶಿಗಳಾದ ಡಾ. ನಾರಾಯಣ ಸಭಾಹಿತ್ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಣಿಪಾಲದ ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್  ಅವರು ಆಯೋಜಿಸಿದ ‘ಶಿಕ್ಷಣ ಸುಧಾರಣೆ’ ವಿಚಾರ ವಿನಿಮಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶಿಕ್ಷಕರು ಶಿಕ್ಷಣ ಸಂಸ್ಥೆಯಲ್ಲಿರುವ ಉತ್ತಮ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪ್ರೋತ್ಸಾಹ ನೀಡಬೇಕು ಎಂದರು.

    ಶಿಕ್ಷಕರು ಆಧುನಿಕ ಶಿಕ್ಷಣ ವ್ಯವಸ್ಥೆಯನ್ನು ಅರಿತು ಅದಕ್ಕೆ ಪೂರಕವಾಗಿ ತಮ್ಮ ಶೈಕ್ಷಣಿಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ಸಂಶೋಧನಾ ಪ್ರವೃತ್ತಿಯ ಜೊತೆಗೆ, ವಿಮರ್ಶಾತ್ಮಕತೆಯ ಬರಹಗಳನ್ನು  ಉತ್ತಮ ಗುಣಮಟ್ಟದ ಜರ್ನಲ್ ಗಳಲ್ಲಿ ಪ್ರಕಟಿಸಬೇಕು. ಅಲ್ಲದೇ ಸಂಸ್ಥೆಗೆ ವಿದ್ಯಾರ್ಥಿಗಳ ದಾಖಲಾತಿಯಾಗುವಲ್ಲಿ ಶಿಕ್ಷಕರ ಪಾತ್ರವಿದೆ. ಉತ್ತಮ ಶೈಕ್ಷಣಿಕ ಮತ್ತು ಜ್ಞಾನ ಪಡೆಯುವ ವಾತಾವರಣವನ್ನು ಶಿಕ್ಷಕರು ಸೃಷ್ಟಿಸಬೇಕು. ಹಾಗಿದ್ದಾಗ ವಿದ್ಯಾರ್ಥಿಗಳ ದಾಖಲಾತಿಯು ಸಹ ಹೆಚ್ಚುತ್ತದೆ ಎಂದು ಅಭಿಪ್ರಾಯಪಟ್ಟರು.

    ಇನ್ನೋರ್ವ ಅತಿಥಿ ಮಣಿಪಾಲದ ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಆಡಳಿತಾಧಿಕಾರಿಕಾರಿಗಳಾದ ಡಾ. ಕೆ. ಶ್ರೀಧರ ರಂಗನಾಥ ಪೈ ಮಾತನಾಡಿ, ಸಂಶೋಧನಾ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು. ಏಕೆಂದರೆ ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ವಿಷಯ ಜ್ಞಾನಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಹಾಗಾಗಿ ವಿಮರ್ಶಾತ್ಮಕ ಲೇಖನಗಳನ್ನು ಹೆಚ್ಚು ಪ್ರಕಟಿಸಬೇಕು ಎಂದು ಹೇಳಿದರು.

    ಮತ್ತೋರ್ವ ಅತಿಥಿ ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಶಿಕ್ಷಣಾಧಿಕಾರಿಗಳಾದ ನಾಗೇಶ್ ಪೈ ಮಾತನಾಡಿ, ಕಲಿಸುವ  ಮೊದಲು ಶಿಕ್ಷಕರ ವಿಶೇಷ ಅಧ್ಯಯನದ ತಯಾರಿಯ ಕುರಿತು ಸಂವಾದ ನಡೆಸಿದರು.

    Click here

    Click here

    Click here

    Call us

    Call us

    ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ್ ಟಿ. ಸೋನ್ಸ್ ಮಾತನಾಡಿ, ಶಿಕ್ಷಕರ ಹಿತಾಸಕ್ತಿಯನ್ನು ಕಾಪಾಡಲು ವಿಶ್ವಸ್ಥ ಮಂಡಳಿ ಹಾಗೂ ಆಡಳಿತ ಮಂಡಳಿ ಸಿದ್ಧವಿದೆ. ಆದರೆ ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡುವ ಅಗತ್ಯತೆ ಇದೆ ಎಂದು ಹೇಳಿದರು

    ಕಾರ್ಯದರ್ಶಿ ಯು.ಎಸ್.ಶೆಣೈ ಮಾತನಾಡಿ, ಕಳೆದ ಆರು ದಶಕಗಳ ಶ್ರೇಷ್ಠ ಶಿಕ್ಷಕರು ಈ ಕಾಲೇಜಿನಲ್ಲಿ ಸೇವೆ ಸಲ್ಲಿಸಿ ಕೀರ್ತಿ ತಂದಿದ್ದಾರೆ. ಅವರಿಂದ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಬೇರೆ ಬೇರೆ ಕ್ಷೇತ್ರಗಳಲ್ಲಿ ಸಾಧನೆಗೈದಿದ್ದಾರೆ. ಇಂದೂ ಸಹ ಶಿಕ್ಷಕರನ್ನು ಸ್ಮರಿಸುತ್ತಾ ಇದ್ದಾರೆ. ವಿದ್ಯಾರ್ಥಿಗಳು ನೆನಪಿಸುವಂತಹ ಸೇವೆ ಶಿಕ್ಷಕರು ನೀಡಬೇಕು ಎಂದು ಹೇಳಿದರು.

    ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷ ಕೆ.ಶಾಂತಾರಾಮ ಪ್ರಭು ಅತಿಥಿಗಳನ್ನು ಗೌರವಿಸಿದರು. ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಸ್ವಾಗತಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರೋಜ ಎಮ್. ವಂದಿಸಿದರು. ಕಂಪ್ಯೂಟರ್ ಉಪನ್ಯಾಸಕಿ ವಿಜಯಲಕ್ಷ್ಮಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು  ಚೆಸ್‌ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ                    

    05/08/2026

    ಬಿಜೆಪಿ ಶಾಸಕರು ಅಭಿವೃದ್ಧಿ ಬಗ್ಗೆ ಸುಳ್ಳು ಪ್ರಚಾರ ನಿಲ್ಲಿಸಲಿ: ಕೇಶವ ಭಟ್

    05/08/2026

    ಹೊಸಂಗಡಿ ಸ.ಪ.ಪೂ ಕಾಲೇಜು: ವಿವಿಧ ಕ್ಲಬ್‌ಗಳ ಉದ್ಘಾಟನೆ, ವಿದ್ಯಾರ್ಥಿನಿಯರ ಸುಸಜ್ಜಿತ ಶೌಚಾಲಯ ಕೀ ಹಸ್ತಾಂತರ

    05/08/2026
    Leave A Reply Cancel Reply

    15 + twelve =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ‘ಶಿಕ್ಷಣ ಸುಧಾರಣೆ’ ವಿಚಾರ ವಿನಿಮಯ ಕಾರ್ಯಕ್ರಮ
    • ಕಳಪೆ ಆಮದು ಅಡಿಕೆಯ ಸಮಸ್ಯೆ; ರಾಜ್ಯದ ಅಡಿಕೆ ಬೆಳೆಗಾರರ ನೆರವಿಗೆ ಬರಲು ಕೇಂದ್ರಕ್ಕೆ ಸಂಸದ ಕೋಟ ಒತ್ತಾಯ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು  ಚೆಸ್‌ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ                    
    • ಬಿಜೆಪಿ ಶಾಸಕರು ಅಭಿವೃದ್ಧಿ ಬಗ್ಗೆ ಸುಳ್ಳು ಪ್ರಚಾರ ನಿಲ್ಲಿಸಲಿ: ಕೇಶವ ಭಟ್
    • ಹೊಸಂಗಡಿ ಸ.ಪ.ಪೂ ಕಾಲೇಜು: ವಿವಿಧ ಕ್ಲಬ್‌ಗಳ ಉದ್ಘಾಟನೆ, ವಿದ್ಯಾರ್ಥಿನಿಯರ ಸುಸಜ್ಜಿತ ಶೌಚಾಲಯ ಕೀ ಹಸ್ತಾಂತರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.