ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಇಂಗ್ಲೀಷ್ ವಿಭಾಗದ ವತಿಯಿಂದ ವಿಸ್ತರಣಾ ಚಟುವಟಿಕೆಯ ಭಾಗವಾಗಿ ಚಿಕನ್‌ಸಾಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಲಾಯಿತು.
ಶಾಲೆಯ ವಿದ್ಯಾರ್ಥಿಗಳಿಗೆ ನಾನಾ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಮತ್ತು ಸ್ವಚ್ಛತೆಯ ಅರಿವು ನೀಡುವುದರೊಂದಿಗೆ ಬಹುಮಾನವಾಗಿ ಬರಹದ ವಸ್ತುಗಳನ್ನು ನೀಡಲಾಯಿತು. ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ದೀಪಿಕಾ ಜಿ., ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಸ್ವಾತಿ ಜಿ. ರಾವ್, ಸುರೇಖಾ ಆಚಾರ್, ರೋಹಿತ್ ಕುಮಾರ್ ಶೆಟ್ಟಿ, ಶಾಲೆಯ ಮುಖ್ಯೋಪಾಧ್ಯಾಯರು ಪ್ರೇಮಾ ಕುಮಾರಿ ಹಾಗೂ ಇತರ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.











