ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ವಲಯ ಇವರ ವತಿಯಿಂದ ಬೈಂದೂರಿನಲ್ಲಿ ನಡೆದ ಶಿಕ್ಷಣ ಇಲಾಖೆಯ ತಾಲ್ಲೂಕು ಮಟ್ಟದ 14ರ ವಯೋಮಾನದ ಒಳಗಿನ ಕ್ರೀಡಾಕೂಟದ 42 ಕೆಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಗುಜ್ಜಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಆದ್ವಿತಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಈಕೆಯನ್ನು ಶಾಲೆಯ ಮುಖ್ಯಶಿಕ್ಷಕ, ಶಿಕ್ಷಕರು, ಎಸ್‌ಡಿಎಂಸಿ ಮತ್ತು ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಅಭಿನಂದಿಸಿದ್ದಾರೆ.











