ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ಸಂಘ ರತ್ನ ಹಾಗೂ ಭಾರತ ಸಂಘ ಸಿರಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಫ್ರೆಂಡ್ಸ್ ಸರ್ಕಲ್ ರಿ. ಮೀನು ಮಾರ್ಕೆಟ್ ರಸ್ತೆ ಕುಂದಾಪುರ ಇದರ 36ನೇ ವರ್ಷದ ಪುರಸಭಾ ವ್ಯಾಪ್ತಿಯ ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮವು ಕುಂದಾಪುರದ ಬಿಆರ್ ರಾಯರ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿನಡೆಯಿತು.
ಸಂಸ್ಥೆಯ ಅಧ್ಯಕ್ಷರಾದ ಗಣೇಶ್ ನಾಯ್ಕ್ ಸಭಾಧ್ಯಕ್ಷತೆ ವಹಿಸಿ ಫ್ರೆಂಡ್ಸ್ ಸರ್ಕಲ್ ಸಂಸ್ಥೆಯು ಕಳೆದ 35 ವರ್ಷಗಳಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸುತ್ತಿದ್ದು ಮುಂದಿನ ದಿನಗಳಲ್ಲಿ ಈ ಯೋಜನೆಯನ್ನು ಪದವಿಪೂರ್ವ ವಿದ್ಯಾರ್ಥಿಗಳಿಗೂ ವಿಸ್ತರಿಸಲಿದೆ ಎಂದು ನುಡಿದರು .
ಮುಖ್ಯ ಅತಿಥಿಯಾದ ಚೇತನಾ ಕಿರಣ್ ಮಕ್ಕಳಿಗೆ ಜೀವನ ಮೌಲ್ಯ , ಉತ್ತಮ ಸಂಸ್ಕಾರ ಹಾಗೂ ಆದರ್ಶ ಜೀವನ ಶೈಲಿ ಬಗ್ಗೆ ನುಡಿದರು . ಇನ್ನೋರ್ವ ಮುಖ್ಯ ಅತಿಥಿಯಾದ ಡಾ. ಅಶೋಕ್ ವಿದ್ಯಾರ್ಥಿಗಳಿಗೆ ಉತ್ತಮ ಆರೋಗ್ಯ, ಆಹಾರ ಸೇವನೆ ದೈಹಿಕ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.
ಮತ್ತೋರ್ವ ಮುಖ್ಯ ಅತಿಥಿಯಾಗಿ ಬಿ.ಆರ್ ರಾಯರ ಹಿಂದೂ ಶಾಲೆಯ ಮುಖ್ಯೋಪಾಧ್ಯಾಯ ನಿಂಗಪ್ಪ ಎಂ. ಸಂಸ್ಥೆಯು ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದ್ದು, ಕಳೆದ 35 ವರ್ಷಗಳಿಂದ ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣೆ ಮಾಡುತ್ತಾ ಮಕ್ಕಳಿಗೆ ಉತ್ತೇಜನ ನೀಡುತ್ತಾ ಬಂದಿದ್ದಾರೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಸಂಚಾಲಕರಾದ ಸುಕುಮಾರ ನಾಯ್ಕ್ ಉಪಸ್ಥಿತರಿದ್ದರು. ಸಂಸ್ಥೆಯ ಸದಸ್ಯರಾದ ಮಂಜುನಾಥ ಪೂಜಾರಿ, ಮನೋಹರ್ ಪುತ್ರನ್, ಧನಪಾಲ ಪುತ್ರನ್, ಶರತ್ ಎಸ್ ಖಾರ್ವಿ, ನಾಗರಾಜ್ ಖಾರ್ವಿ ಗಣೇಶ ಆಚಾರ್, ಸುರೇಶ್ ಪುತ್ರನ್, ವಿಜೇತ್, ರವಿನಾಥ ಶೆಣೈ , ಹರ್ಷಿತ್ ಹಾಗೂ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಭಾಗವಹಿಸಿದ್ದರು.
ಶೇಖರ್ ಜಿ. ಖಾರ್ವಿ ಸ್ವಾಗತಿಸಿ, ನಿರೂಪಣೆ ಮಾಡಿದರು. ಪ್ರಧಾನ ಕಾರ್ಯದರ್ಶಿ ಚೇತನ್ ದೇವಾಡಿಗ ವಂದಿಸಿದರು.
















