ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಚೇತನಾ ಪ್ರೌಢಶಾಲೆ ಹಂಗಾರಕಟ್ಟೆ ಇಲ್ಲಿ ರೋಟರಿ ಕ್ಲಬ್ ಹಂಗಾರಕಟ್ಟೆ- ಸಾಸ್ತಾನ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಉಡುಪಿ ಇವರ ಸಹಯೋಗದಲ್ಲಿ ಕಾನೂನು ಅರಿವು ಕಾರ್ಯಕ್ರಮ ಜರುಗಿತು.

ಬ್ರಹ್ಮಾವರ ಪೋಲಿಸ್ ಠಾಣಾ ಉಪ ನಿರೀಕ್ಷಕಿ ಮುಕ್ತ ಬಾಯಿ ಹಾಗೂ ಪ್ರೊಫೆಷನರಿ ಪೊಲೀಸ್ ಉಪನಿರೀಕ್ಷಕಿ ಆಶ್ರೀತಾ ಎ. ಶೆಟ್ಟಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಪೋಕ್ಸೋ, ಸೈಬರ್ ಕ್ರೈಂಸ್, ಮಕ್ಕಳ ಕಳ್ಳ ಸಾಗಣಿಕೆ, ಮಾದಕ ದ್ರವ್ಯ ವ್ಯಸನ, ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಹಾಗೂ ಕಾನೂನಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ನೀಡಿದರು.
ರೋಟರಿ ಕ್ಲಬ್ ಅಧ್ಯಕ್ಷೆ ಕುಸುಮ ಮನೋಜ್ ದೀಪ ಪ್ರಜ್ವಲನದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಪೋಷಕ ಪ್ರತಿನಿದಿಗಳಾದ ರೇಖಾ ಉಡುಪ, ರಕ್ಷಿತ್ ಕುಮಾರ್ ಶೆಟ್ಟಿ, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ರೋಟರಿ ಕ್ಲಬ್‌ನ ಸದಸ್ಯರಾದ ಮನೋಜ್ ಕುಮಾರ್, ಅರವಿಂದ್ ಶರ್ಮಾ, ಲಕ್ಷ್ಮೀನಾರಾಯಣ, ಲೀಲಾವತಿ, ಸುಲತಾ ಹೆಗ್ಡೆ, ಜ್ಯೋತಿ ಉದಯ್ ಕುಮಾರ್, ಅಮಿತಾ, ಮಮತಾ ಶೆಟ್ಟಿ, ಶಾಲಾ ವಿದ್ಯಾರ್ಥಿ ನಾಯಕಿ ಕು. ವರ್ಷ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಕಲ್ಪನಾ ಶೆಟ್ಟಿ ಪ್ರಸ್ತಾವಿಕ ನುಡಿಗಳನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಶಿಕ್ಷಕ ಹರ್ಷವರ್ಧನ ಶೆಟ್ಟಿ ಕಾರ್ಯಕ್ರಮ ನಿರೂಪಣೆ ಮಾಡಿದರು.
















