Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಾರ್ದಳ್ಳಿ ಮಂಡಳ್ಳಿ ಸಂಜೀವಿನಿ ಒಕ್ಕೂಟದ 33.50 ಲಕ್ಷ ರೂ. ದುರುಪಯೋಗ – ಪ್ರಕರಣ ದಾಖಲು
    ಊರ್ಮನೆ ಸಮಾಚಾರ

    ಹಾರ್ದಳ್ಳಿ ಮಂಡಳ್ಳಿ ಸಂಜೀವಿನಿ ಒಕ್ಕೂಟದ 33.50 ಲಕ್ಷ ರೂ. ದುರುಪಯೋಗ – ಪ್ರಕರಣ ದಾಖಲು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟಕ್ಕೆ ಸರ್ಕಾರದಿಂದ ಬಂದಿದ್ದ ಲಕ್ಷಾಂತರ ರೂಪಾಯಿ ಅನುದಾನವನ್ನು ನಕಲಿ ಸಹಿ ಹಾಗೂ ಸೀಲು ಬಳಸಿ ಸ್ವಂತಕ್ಕೆ ಉಪಯೋಗಿಸಿಕೊಂಡು ಸುಮಾರು 33.50 ಲಕ್ಷ ರೂ. ವಂಚನೆ ಎಸಗಿದ ಆರೋಪದಡಿ ಮಹಿಳೆಯೊಬ್ಬರ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click Here

    Call us

    Click Here

    ಹಾರ್ದಳ್ಳಿ ಮಂಡಳ್ಳಿ ಗ್ರಾಮದ ಅಶ್ವಿನಿ (33)ಈ ಪ್ರಕರಣದ ಆರೋಪಿಯಾಗಿದ್ದಾರೆ. ಅವರು 2022 ರಿಂದ ‘ಸಮೃದ್ಧಿ ಸಂಜೀವಿನಿ’ ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದಲ್ಲಿ ಮುಖ್ಯ ಬರಹಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಒಕ್ಕೂಟದ ವ್ಯಾಪ್ತಿಯಲ್ಲಿ ಒಟ್ಟು 54 ಸ್ವಸಹಾಯ ಸಂಘಗಳು ಒಳಪಟ್ಟಿದ್ದವು.

    ಸರಕಾರದಿಂದ 2022 ರಿಂದ ಈ ಒಕ್ಕೂಟದ ಕೆನರಾ ಬ್ಯಾಂಕ್ ಬಿಡ್ಕಲ್‌ಕಟ್ಟೆ ಶಾಖೆಯ ಖಾತೆಗೆ ಒಟ್ಟು 752,50,000 ಅನುದಾನ ಬಿಡುಗಡೆಯಾಗಿತ್ತು. ಈ ಹಣವನ್ನು ಅಗತ್ಯಕ್ಕೆ ತಕ್ಕಂತೆ ವಿವಿಧ ಸ್ವಸಹಾಯ ಸಂಘಗಳಿಗೆ ನಿಯಮಾನುಸಾರ ಹಂಚಿಕೆ ಮಾಡುವ ಜವಾಬ್ದಾರಿ ಆರೋಪಿ ಅಶ್ವಿನಿ ಅವರದ್ದಾಗಿತ್ತು.

    ಆದರೆ, ಆರೋಪಿತೆಯು ಸರಕಾರದ ಹಣವನ್ನು ಸ್ವಸಹಾಯ ಸಂಘಗಳಿಗೆ ಸರಿಯಾಗಿ ಹಂಚಿಕೆ ಮಾಡದೇ, ಒಕ್ಕೂಟದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಕೋಶಾಧಿಕಾರಿಯವರ ಸಹಿ ಮತ್ತು ಸೀಲನ್ನು ನಕಲಿ ಮಾಡಿದ್ದಾರೆ. ಜೊತೆಗೆ ತಾವು ಅಧ್ಯಕ್ಷರಾಗಿರುವ ‘ಮಂದಾರ ಸ್ವಸಹಾಯ ಸಂಘ’ದ ಹೆಸರಿನಲ್ಲಿ ಹಾಗೂ ಕೆಲವು ಸಂಘದ ಸದಸ್ಯರ ನಕಲಿ ಸಹಿಗಳನ್ನು ಮಾಡಿ, ಒಟ್ಟು ₹33,50,000 ಹಣವನ್ನು ತಮ್ಮ ಸ್ವಂತ ಲಾಭಕ್ಕೆ ಬಳಸಿಕೊಂಡು ಒಕ್ಕೂಟಕ್ಕೆ ಮೋಸ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

    ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಸಿಬ್ಬಂದಿಗಳಿಗೆ ʼಧ್ಯಾನʼ ಕುರಿತು ಕಾರ್ಯಗಾರ

    21/09/2026

    ತುಪ್ಪ ಹಾನಿಕಾರಕವಲ್ಲ, ಹೃದಯಕ್ಕೆ ಹಿತ: ಶ್ರೀ ರಾಘವೇಶ್ವರ

    21/09/2026

    ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್‌ ಸ್ಪರ್ಧೆಯಲ್ಲಿ ಇಂಪನಾಗೆ ಪ್ರಥಮ ಸ್ಥಾನ

    21/09/2026
    Leave A Reply Cancel Reply

    four × 5 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಸಿಬ್ಬಂದಿಗಳಿಗೆ ʼಧ್ಯಾನʼ ಕುರಿತು ಕಾರ್ಯಗಾರ
    • ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ಆಳ್ವಾಸ್‌ಗೆ 26 ಪದಕದೊಂದಿಗೆ 05 ನೂತನ ಕೂಟ ದಾಖಲೆ  
    • ತುಪ್ಪ ಹಾನಿಕಾರಕವಲ್ಲ, ಹೃದಯಕ್ಕೆ ಹಿತ: ಶ್ರೀ ರಾಘವೇಶ್ವರ
    • ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್‌ ಸ್ಪರ್ಧೆಯಲ್ಲಿ ಇಂಪನಾಗೆ ಪ್ರಥಮ ಸ್ಥಾನ
    • ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ರಶ್ಮಿ ಕುಸ್ತಿ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.