ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಕುಂದಾಪುರದ ವಿ. ಕೆ. ಆರ್. ಮೆಮೋರಿಯಲ್ ಶಾಲೆ ಇವರ ಸಂಯುಕ್ತಾಶ್ರಯದಲ್ಲಿ ಕುಂದಾಪುರದಲ್ಲಿ ನಡೆದ ಕುಂದಾಪುರ ಬ್ಲಾಕ್ ಮಟ್ಟದ 14 ಮತ್ತು 17 ವರ್ಷದೊಳಗಿನ ಬಾಲಕ-ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಗಂಗೊಳ್ಳಿಯ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಶಾಲೆಯ ಆರ್ಯನ್ ವಿ.ಕೆ., ಆರ್ಯನ್ ಎಸ್. ಹಾಗೂ ವೃಷಭ್ ಶೆಣೈ ವಿಜೇತರಾಗಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಅಭಿಷೇಕ್ ಶೆಣೈ, ಹವ್ಯಾಸ್ ಹಾಗೂ ಸನ್ನಿತ್ ವಿಜೇತರಾಗಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಅನನ್ಯಾ ಪೂಜಾರಿ, ಶ್ರಾವ್ಯಾ ಖಾರ್ವಿ ಹಾಗೂ ಶ್ರೀಯಾ ಆಚಾರ್ಯ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದು, ಅನನ್ಯಾ ಪೂಜಾರಿ ಹಾಗೂ ಶ್ರಾವ್ಯಾ ಖಾರ್ವಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.











