Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸುಜ್ಞಾನ ಕಾಲೇಜಿನಲ್ಲಿ ಸೈಬರ್ ಜಾಗೃತಿ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಸುಜ್ಞಾನ ಕಾಲೇಜಿನಲ್ಲಿ ಸೈಬರ್ ಜಾಗೃತಿ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ದಿನದಿಂದ ದಿನಕ್ಕೆ ತಂತ್ರಜ್ಞಾನ ಬೆಳೆದಂತೆ ಸೈಬರ್ ಅಪರಾಧಗಳ ಸಂಖ್ಯೆಯೂ ಹೆಚ್ಚುತ್ತಿದೆ. ಇಂದಿನ ಯುವಜನತೆ ಮೊಬೈಲ್ ಚಟಕ್ಕೆ ಬಿದ್ದು ತಮ್ಮ ಬದುಕಿನ ಅಮೂಲ್ಯ ಕ್ಷಣಗಳನ್ನು ಕಳೆದುಕೊಳ್ಳುತ್ತಿರುವುದು ಆತಂಕಕಾರಿ ಸಂಗತಿ. ಸೋಶಿಯಲ್ ಮೀಡಿಯಾಗಳ ಹುಸಿ ಆಕರ್ಷಣೆಗೆ ಒಳಗಾಗಿ ಬಲಿಬೀಳುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ವಿದ್ಯಾರ್ಥಿಗಳು ಆನ್‌ಲೈನ್ ಜಗತ್ತಿನ ಅಪಾಯಗಳ ಬಗ್ಗೆ ಸದಾ ಎಚ್ಚರದಿಂದಿರಬೇಕು ಎಂದು ಸೈಬರ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸ್‌ ಕಾನ್‌ ಸ್ಟೇಬಲ್ ಪವನ್‌ ಕುಮಾರ್ ಎಂ. ಹೇಳಿದರು.

    Click Here

    Call us

    Click Here

    ಅವರು ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಮತ್ತು ಸೈಬರ್ ಕ್ರೈಂ ಪೊಲೀಸ್ ಠಾಣೆ ಇವುಗಳ ಜಂಟಿ ಸಹಯೋಗದೊಂದಿಗೆ ಯಡಾಡಿ ಮತ್ಯಾಡಿಯ ಸುಜ್ಞಾನ ಪಿಯು ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಇತ್ತೀಚಿನ ಸೈಬರ್‌ ಅಪರಾಧಗಳ ಪ್ರವೃತ್ತಿಗಳು ಮತ್ತು ಮುನ್ನೆಚ್ಚರಿಕಾ ಕ್ರಮಗಳು”ಎಂಬ  ಸೈಬರ್ ಜಾಗೃತಿ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಮಾತನಾಡಿದರು.

    ಸೈಬರ್ ಅಪರಾಧಗಳ ಜಾಲ ಮತ್ತು ಅದರಿಂದ ಪಾರಾಗುವ ಮಾರ್ಗಗಳ ಕುರಿತು ವಿದ್ಯಾರ್ಥಿಗಳಿಗೆ ಕೂಲಂಕುಷ ಮಾಹಿತಿ ನೀಡಿದ ಪವನ್ ಕುಮಾರ್‌ ಎಂ, “ಇತ್ತೀಚಿನ ದಿನಗಳಲ್ಲಿ ಮನೆಯಲ್ಲೇ ಕುಳಿತು ಲಕ್ಷ ಲಕ್ಷ ಸಂಪಾದಿಸಬಹುದು ಎನ್ನುವ ‘ಆನ್‌ಲೈನ್ ಉದ್ಯೋಗದ ಆಮಿಷ’, ಸುಲಭ ಕಂತುಗಳಲ್ಲಿ ತಕ್ಷಣ ಹಣ ನೀಡುವ ‘ಸಾಲದ ಅಪ್ಲಿಕೇಶನ್‌ಗಳು’ ಹಾಗೂ ದಿಢೀರ್ ಶ್ರೀಮಂತರಾಗುವ ‘ಹೂಡಿಕೆ ಆಮಿಷಗಳು’ ಹೆಚ್ಚಾಗಿ ಜನರನ್ನು ಮರಳು ಮಾಡುತ್ತಿವೆ. ಅಪರಿಚಿತ ಲಿಂಕ್‌ಗಳನ್ನು ಕ್ಲಿಕ್ ಮಾಡುವುದು, ಒಟಿಪಿ (OTP) ಮತ್ತು ಖಾಸಗಿ ಮಾಹಿತಿಗಳನ್ನು ಯಾರೊಂದಿಗೂ ಹಂಚಿಕೊಳ್ಳುವುದು ಅತ್ಯಂತ ಅಪಾಯಕಾರಿ. ಡಿಜಿಟಲ್ ಜಗತ್ತಿನಲ್ಲಿ ಪ್ರತಿಯೊಂದು ಹೆಜ್ಜೆಯನ್ನೂ ಎಚ್ಚರಿಕೆಯಿಂದ ಇಡಬೇಕು ಎಂದು ವಿವರವಾಗಿ ತಿಳಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ರಮೇಶ್ ಶೆಟ್ಟಿ ಅವರು, “ವಿದ್ಯಾರ್ಥಿ ಜೀವನ ಎಂಬುದು ವ್ಯಕ್ತಿತ್ವ ರೂಪಿಸಿಕೊಳ್ಳುವ ಅತ್ಯಂತ ಅಮೂಲ್ಯವಾದ ಕಾಲಘಟ್ಟ. ಈ ವಯಸ್ಸಿನಲ್ಲಿ ತಂತ್ರಜ್ಞಾನವನ್ನು ಜ್ಞಾನಾರ್ಜನೆಗೆ ಹಾಗೂ ಕಲಿಕೆಗೆ ಮಾತ್ರ ಬಳಸಿಕೊಳ್ಳಬೇಕೇ ಹೊರತು, ಮೊಬೈಲ್ ಹಾಗೂ ಸೋಶಿಯಲ್ ಮೀಡಿಯಾಗಳ ಗೀಳಿಗೆ ಬಿದ್ದು ಅಮೂಲ್ಯ ಸಮಯವನ್ನು ವ್ಯರ್ಥ ಮಾಡಿಕೊಳ್ಳಬಾರದು. ನಿಮ್ಮ ಭವಿಷ್ಯಕ್ಕೆ ಯಾವುದು ಮುಖ್ಯ, ಯಾವುದು ಗೌಣ ಎನ್ನುವುದನ್ನು ವಿವೇಚಿಸುವ ಪ್ರಬುದ್ಧತೆಯನ್ನು ಬೆಳೆಸಿಕೊಳ್ಳಿ. ಸಾಮಾಜಿಕ ಜಾಲತಾಣಗಳ ಕೃತಕ ಜಗತ್ತಿಗಿಂತ ನೈಜ ಅಧ್ಯಯನ ಮತ್ತು ಗುರಿ ತಲುಪುವತ್ತ ಹೆಚ್ಚಿನ ಗಮನ ಹರಿಸಿ,” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

    ಸಂಸ್ಥೆಯ ಖಜಾಂಚಿ ಭರತ್ ಶೆಟ್ಟಿ ಮಾತನಾಡಿ, “ಸೋಶಿಯಲ್ ಮೀಡಿಯಾಗಳ ವ್ಯಸನಕ್ಕೆ ಸಿಲುಕಿ ನಿಮ್ಮ ಉಜ್ವಲ ಬದುಕನ್ನು ಹಾಳುಮಾಡಿಕೊಳ್ಳಬೇಡಿ. ಸಾಮಾಜಿಕ ಜಾಲತಾಣಗಳು ನಿಮ್ಮನ್ನು ನಿಯಂತ್ರಿಸಲು ಬಿಡಬೇಡಿ; ಬದಲಾಗಿ ಉತ್ತಮ ಉದ್ದೇಶಕ್ಕಾಗಿ, ಜ್ಞಾನವರ್ಧನೆಗಾಗಿ ಮಾತ್ರ ನೀವು ತಂತ್ರಜ್ಞಾನವನ್ನು ಬಳಸಿ,” ಎಂದು ಸಲಹೆ ನೀಡಿದರು.

    Click here

    Click here

    Click here

    Call us

    Call us

    ವೇದಿಕೆಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಪ್ರಾಂಶುಪಾಲರಾದ ರಂಜನ್ ಶೆಟ್ಟಿ ಉಪಸ್ಥಿತರಿದ್ದರು.ಇಂಗ್ಲಿಷ್ ವಿಭಾಗದ ಮುಖ್ಯಸ್ಥ ವಿನಯ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

    ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿಎಂಎ ಇಂಟರ್‌ಮೀಡಿಯಟ್ ಫಲಿತಾಂಶ: ಡಾ. ಬಿ.ಬಿ. ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಂದ ರಾಷ್ಟ್ರಮಟ್ಟದ ಸಾಧನೆ

    07/08/2026

    ಗಂಗೊಳ್ಳಿ ಎಸ್‌ವಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಟೇಬಲ್‌ ಟೆನ್ನಿಸ್‌ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

    07/08/2026

    ಮರಕ್ಕೆ ಕಟ್ಟಿ ಯುವಕನಿಗೆ ಹಲ್ಲೆ- ಮೂವರ ಬಂಧನ: ಜಾತಿ ನಿಂದನೆ ಪ್ರಕರಣದಲ್ಲೂ ಆರೋಪಿ ಬಂಧನ

    07/08/2026
    Leave A Reply Cancel Reply

    7 − one =

    Call us

    Click Here

    Call us

    Call us

    Call us
    Highest Viewed Recently
    • ಸುಜ್ಞಾನ ಕಾಲೇಜಿನಲ್ಲಿ ಸೈಬರ್ ಜಾಗೃತಿ ಕಾರ್ಯಕ್ರಮ
    • ಸಿಎಂಎ ಇಂಟರ್‌ಮೀಡಿಯಟ್ ಫಲಿತಾಂಶ: ಡಾ. ಬಿ.ಬಿ. ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಂದ ರಾಷ್ಟ್ರಮಟ್ಟದ ಸಾಧನೆ
    • ಗಂಗೊಳ್ಳಿ ಎಸ್‌ವಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಟೇಬಲ್‌ ಟೆನ್ನಿಸ್‌ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಮರಕ್ಕೆ ಕಟ್ಟಿ ಯುವಕನಿಗೆ ಹಲ್ಲೆ- ಮೂವರ ಬಂಧನ: ಜಾತಿ ನಿಂದನೆ ಪ್ರಕರಣದಲ್ಲೂ ಆರೋಪಿ ಬಂಧನ
    • ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಆಮ್ಲಜನಕ ಪೂರೈಕೆ ಯಂತ್ರ, ರಿಕ್ಲೈನರ್ ಹಾಸಿಗೆ ಹಾಗೂ ಗಾಲಿ ಕುರ್ಚಿ ಹಸ್ತಾಂತರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.