Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಅರ್ಥಪೂರ್ಣ ಹಾಗೂ ಸಂಭ್ರಮ – ಸಡಗರದಿಂದ ಆಚರಿಸಲು ಅಗತ್ಯವಿರುವ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    Click Here

    Call us

    Click Here

    ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಸ್ವಾತಂತ್ರ್ಯಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಆಗಸ್ಟ್ 15 ರಂದು ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಲಾಗುವುದು. ಸಚಿವರು ಅಂದು ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿ, ನಂತರ ಸ್ವಾತಂತ್ರ್ಯಯೋತ್ಸವ ಸಂದೇಶ ನೀಡಲಿದ್ದಾರೆ ಎಂದರು.

    ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪೊಲೀಸ್, ನಕ್ಸಲ್ ನಿಗ್ರಹಪಡೆ, ಕರಾವಳಿ ಕಾವಲು ಪೊಲೀಸ್, ಅಗ್ನಿಶಾಮಕ, ಅರಣ್ಯ, ಗೃಹ ರಕ್ಷಕದಳ, ಎನ್.ಸಿ.ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ಮತ್ತಿತರ ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಲಿದ್ದು, ಪಥಸಂಚಲನಕ್ಕೆ ಸಂಬಂಧಿಸಿದಂತೆ ಅಗತ್ಯ ಪೂರ್ವ ತಯಾರಿ ಮಾಡಿಕೊಳ್ಳುವಂತೆ ತಿಳಿಸಿದರು.

    ಕಾರ್ಯಕ್ರಮದಲ್ಲಿ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ಸ್ವಚ್ಛತೆ, ಪರಿಸರ ಸಂರಕ್ಷಣೆ, ಸ್ವಾಸ್ಥಯ್ಯ ಉಡುಪಿ, ಪ್ರವಾಸೋದ್ಯಮ ಕುರಿತು ಸಂದೇಶ ಸಾರುವ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳಿಂದ ಗಣ್ಯರನ್ನು ಸನ್ಮಾನ ಮಾಡಲಾಗುವುದು ಹಾಗೂ ಸವಲತ್ತುಗಳನ್ನು ಸಹ ವಿತರಿಸಲಾಗುವುದು ಎಂದ ಅವರು, ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ಜನಪ್ರತಿನಿಧಿಗಳಿಗೆ, ಗಣ್ಯವ್ಯಕ್ತಿಗಳಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಹಾಗೂ ಅವರ ಕುಟಂಬದವರಿಗೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದರು.

    ಕಾರ್ಯಕ್ರಮದಲ್ಲಿ ವೇದಿಕೆಯ ಸುರಕ್ಷತೆ, ಆಸನದ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ಪೂರೈಕೆ, ಶೌಚಾಲಯ ಸೇರಿದಂತೆ ಮತ್ತಿತರ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದ ಅವರು, ಕ್ರೀಡಾಂಗಣದಲ್ಲಿ ತುರ್ತು ಆರೋಗ್ಯ ಸೇವೆಗೆ ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ಕೈಗೊಳ್ಳುವಂತೆ ಸೂಚನೆ ನೀಡಿದರು.

    Click here

    Click here

    Click here

    Call us

    Call us

    ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಚರಿಸಲು ವಿವಿಧ ಉಪ ಸಮಿತಿಗಳನ್ನು ರಚಿಸಿ, ಸಂಬAಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಕಾರ್ಯಭಾರ ಹಂಚಿಕೆ ಮಾಡಿ, ಉಪಸಮಿತಿಗಳು ತಮಗೆ ವಹಿಸಿರುವ  ಕಾರ್ಯಗಳು ಸಮರ್ಪಕವಾಗಿ ಹಾಗೂ ಅಚ್ಚುಕಟ್ಟಾಗಿ ಮಾಡುವಂತೆ ಸೂಚನೆ ನೀಡಿದ ಅವರು, ಸಾರ್ವಜನಿಕರು ರಾಷ್ಟ್ರೀಯ ಹಬ್ಬವಾದ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.

    ಸಭೆಯಲ್ಲಿ ಪೌರಾಯುಕ್ತ ಮಹಾಂತೇಶ ಹಂಗರಗಿ, ಡಿ.ಹೆಚ್.ಓ ಬಸವರಾಜ್ ಹುಬ್ಬಳ್ಳಿ, ವಾರ್ತಾಧಿಕಾರಿ ಮಂಜುನಾಥ್ ಬಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮ್‌ರಾವ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರಕೃತಿ ವಿಕೋಪದಿಂದ ಜನಸಾಮಾನ್ಯರಿಗೆ ತೊಂದರೆ ಉಂಟಾದಲ್ಲಿ ಕೂಡಲೇ ಸ್ಪಂದಿಸಿ: ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್

    08/08/2026

    ಕಳಪೆ ಆಮದು ಅಡಿಕೆಯ ಸಮಸ್ಯೆ; ರಾಜ್ಯದ ಅಡಿಕೆ ಬೆಳೆಗಾರರ ನೆರವಿಗೆ ಬರಲು ಕೇಂದ್ರಕ್ಕೆ ಸಂಸದ ಕೋಟ ಒತ್ತಾಯ

    05/08/2026

    ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗೆ ಅನುಕೂಲ ವಾತಾವರಣ ಕಲ್ಪಿಸಿ: ಜಿಲ್ಲಾಧಿಕಾರಿ ಕರೆ

    05/08/2026
    Leave A Reply Cancel Reply

    1 × two =

    Call us

    Click Here

    Call us

    Call us

    Call us
    Highest Viewed Recently
    • ಗಾಲಿ ಕುರ್ಚಿಯಲ್ಲಿ ಬಂದ ಭಾಗ್ಯಶ್ರೀ ಕುಲಾಲ್‌ಗೆ ಆಳ್ವಾಸ್ ಪ್ರಗತಿಯಲ್ಲಿ ಉದ್ಯೋಗದ ಹೊಸ ದಾರಿ
    • ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ
    • ಪ್ರಕೃತಿ ವಿಕೋಪದಿಂದ ಜನಸಾಮಾನ್ಯರಿಗೆ ತೊಂದರೆ ಉಂಟಾದಲ್ಲಿ ಕೂಡಲೇ ಸ್ಪಂದಿಸಿ: ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್
    • ಸ್ನೇಹ ಸಂಗಮ: 14ನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
    • ಆಳ್ವಾಸ್ ಪ್ರಗತಿ 16ನೇ ಆವೃತ್ತಿಗೆ ಚಾಲನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.