Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡೇವಿಡ್ ಕೊಲೆ ಪ್ರಕರಣ – ಬೈಂದೂರು, ಭಟ್ಕಳದಲ್ಲಿ  ಮೂವರು ಆರೋಪಿಗಳ ಬಂಧನ
    ಉಡುಪಿ ಜಿಲ್ಲೆ

    ಡೇವಿಡ್ ಕೊಲೆ ಪ್ರಕರಣ – ಬೈಂದೂರು, ಭಟ್ಕಳದಲ್ಲಿ  ಮೂವರು ಆರೋಪಿಗಳ ಬಂಧನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ
    : ಕಾಪು ತಾಲೂಕಿನ ಮುದರಂಗಡಿ ಪೇಟೆಯಲ್ಲಿ ಶುಕ್ರವಾರ ಹಾಡಹಗಲೇ ನಡೆದ ಕೊಲೆ ಪ್ರಕರಣದಲ್ಲಿ ಉಡುಪಿ ಪೊಲೀಸರು ಮಿಂಚಿನ ಕಾರ್ಯಾಚರಣೆಯಲ್ಲಿ ಶನಿವಾರ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ನಡೆದು ಕೆಲವೇ ಗಂಟೆಯೊಳಗೆ ಪೊಲೀಸರು ತಂಡವು ಎಲ್ಲಾ ಮೂವರು ಸುಪಾರಿ ಹಂತಕರನ್ನು ಬಂಧಿಸಿದ್ದಾರೆ.

    Click Here

    Call us

    Click Here

    ಆರೋಪಿಗಳನ್ನು ಉತ್ತರ ಪ್ರದೇಶದ ರಾಜು (42), ಉತ್ತರಾಖಂಡ ರಾಜ್ಯದ ಅಜಯ್ ರಸ್ತೋಗಿ ಯಾನೆ ಅನ್ನೋಲ್ (23) ಮತ್ತು ಬಿಹಾರ ರಾಜ್ಯದ ಜಿಯಾಹುಲ್ ವಜೂಲ್ ಶೇಖ್ ಅಲಿಯಾಸ್ ದೀಪಕ್ (38) ಎಂದು ಗುರುತಿಸಲಾಗಿದೆ.

    ಘಟನೆ ವಿವರ:
    ಕಾಪು ತಾಲೂಕು ಮುದರಂಗಡಿಯ ಸೆಂಗ್ ಕ್ಷೇವಿಯರ್ ಚರ್ಚ್‌ನ ಕಾಂಪ್ಲೆಕ್ಸ್‌ನಲ್ಲಿ ಡೇವಿಡ್ ಡಿಸೋಜಾ (55) ಎಂಬವರು ಪ್ರಿನ್ಸ್ ಎಂಟರ್‌ಪ್ರೈಸಸ್ ಎಂಬ ಹೆಸರಿನ ಉದ್ಯಮದ ಕಚೇರಿ ಹೊಂದಿದ್ದು, ಶುಕ್ರವಾರ ಕಚೇರಿಗೆ ಬಂದು ಬಳಿಕ ತನ್ನ ಥಾರ್ ವಾಹನದ ಬಳಿ ಹೋದಾಗ ದುಷ್ಕರ್ಮಿಯೊಬ್ಬ ಪಿಸ್ತೂಲ್ ನಿಂದ ತಲೆಗೆ ಗುಂಡು ಹಾರಿಸಿದ್ದ. ಬಳಿಕ ಆರೋಪಿಗಳು ಪರಾರಿಯಾಗಿದ್ದ.

    ಬಸ್‌ನಲ್ಲಿ ಪರಾರಿಯಾಗಿದ್ದ ಆರೋಪಿಗಳು:
    ಮುದರಂಗಡಿಯಿಂದ ಬೈಕ್‌ನಲ್ಲಿ ಪರಾರಿಯಾಗಿದ್ದ ಆರೋಪಿಗಳು ಬೈಕನ್ನು ಎರ್ಮಾಳ್ ನಲ್ಲಿ ಬಿಟ್ಟು ಬಳಿಕ ಬಸ್ ಮೂಲಕ ಭಟ್ಕಳ ಕಡೆಗೆ ಹೋಗಿದ್ದರು. ಇದರ ಬಗ್ಗೆ ಖಚಿತ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಹೀಗಾಗಿ ಪೊಲೀಸ್ ತಂಡವು ಬೈಂದೂರಿನ ಒತ್ತಿನೆಣೆ ಎಂಬಲ್ಲಿ ಬಸ್ ನಿಲ್ಲಿಸಿ ತಪಾಸಣೆ ಮಾಡುವ ಸಮಯದಲ್ಲಿ ಆರೋಪಿಗಳು ಬಸ್‌ನಿಂದ ಇಳಿದು ಓಡಿಹೋಗಿದ್ದಾರೆ.

    ಅವರನ್ನು ಬೆನ್ನಟ್ಟಿ ಹಿಡಿಯುವ ಸಮಯದಲ್ಲಿ ಪ್ರಮುಖ ಆರೋಪಿ ರಾಜು ಕಾಪು ಪೊಲೀಸ್ ಠಾಣಾ ಪಿ.ಎಸ್.ಐ. ತೇಜಸ್ವಿ ಇವರನ್ನು ದೂಡಿ ಹಾಕಿ, ಆತನ ಕೈಯ್ಯಲ್ಲಿದ್ದ ಪಿಸ್ತೂಲಿನಿಂದ ಗುಂಡು ಹಾರಿಸಿದ್ದಾನೆ. ಈ ವೇಳೆ ತೇಜಸ್ವಿ ಅವರು ಆತನ ಕಾಲಿಗೆ ಗುಂಡು ಹೊಡೆದು ಆತನನ್ನು ಮತ್ತು ಆತನ ವಶದಲ್ಲಿದ್ದ ಪಿಸ್ತೂಲನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    Click here

    Click here

    Click here

    Call us

    Call us

    ಉತ್ತರ ಪ್ರದೇಶ ಮೂಲದ ರಾಜು ಎಂಬಾತನೇ ಡೇವಿಡ್ ಡಿಸೋಜಾಗೆ ಗುಂಡು ಹಾರಿ ಕೊಲೆ ಮಾಡಿದ ಆರೋಪಿ. ಈತನ ವಿರುದ್ಧ ಪೊಲೀಸರಿಗೆ ಗುಂಡು ಹಾರಿಸಿ ಗಾಯಗೊಳಿಸಿದ ಬಗ್ಗೆ ಕೊಲೆ ಯತ್ನ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಪ್ರಕರಣ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಈ ವೇಳೆ ಉಳಿದ ಇಬ್ಬರು ಆರೋಪಿಗಳು ಪರಾರಿಯಾಗಿದ್ದರು. ಈ ಪೈಕಿ ಅಜಯ್ ರಸ್ತೋಗಿ ಯಾನೆ ಅನ್ನೋಲ್ ನನ್ನು ಕುಮಟಾ ಪೊಲೀಸರ ಸಹಕಾರದಿಂದ ಕುಮಟಾದಲ್ಲಿ ಮತ್ತು ಜಿಯಾಹುಲ್ ವಜೂಲ್ ಶೇಖ್ ನನ್ನು ಭಟ್ಕಳ ಪೊಲೀಸರ ಸಹಕಾರದಿಂದ ಭಟ್ಕಳದಲ್ಲಿ ಶನಿವಾರ ಬೆಳಗ್ಗೆ ಬಂಧಿಸಲಾಗಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಿಶ್ವ ಹಿರಿಯ ನಾಗರಿಕರ ದಿನಾಚರಣೆ: ಪೂರ್ವಭಾವಿ ಸಭೆ

    22/09/2026

    ಉಡುಪಿ: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

    22/09/2026

    ಡಿಪ್ಲೋಮ ಇನ್ ಕೋ-ಆಪರೇಟಿವ್ ಮೇನೇಜ್‌ಮೆಂಟ್ ಕೋರ್ಸ್‌ನಲ್ಲಿ ಶ್ರೀಧರ್ ಸಾಸ್ತಾನ ಅವರು ‘ಎ’ ಶ್ರೇಣಿಯಲ್ಲಿ ತೇರ್ಗಡೆ

    21/09/2026
    Leave A Reply Cancel Reply

    eighteen − 12 =

    Call us

    Click Here

    Call us

    Call us

    Call us
    Highest Viewed Recently
    • ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಕ್ರಿಕೆಟ್‌ ಪಂದ್ಯಾಟದಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ
    • ಉಪ್ಪುಂದ ದೇವಾಡಿಗರ ಸಂಘದ ಮಹಿಳಾ ಘಟಕದಿಂದ ಅರಿಶಿನ ಕುಂಕುಮ ಹಾಗೂ ಆರೋಗ್ಯ ಮಾಹಿತಿ ಕಾರ್ಯಾಗಾರ
    • ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ
    • ಮಿಶ್ರತಳಿ ಹಾಲಿನ ಉತ್ಪನ್ನಗಳಿಗೂ ದೇಶಿ ಗೋವಿನ ಉತ್ಪನ್ನಗಳಿಗೂ ವ್ಯತ್ಯಾಸವಿದೆ: ಶ್ರೀ ರಾಘವೇಶ್ವರ
    • ಕುಂದಾಪುರ ತಾಲೂಕನ್ನು ಬರ ಪೀಡಿತ ಎಂದು ಘೋಷಣೆ ಮಾಡಲು ಆಗ್ರಹ: ಕೆ. ವಿಕಾಸ್ ಹೆಗ್ಡೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.