ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶೈಕ್ಷಣಿಕ ವಾತಾವರಣದಲ್ಲಿ ವಿದ್ಯಾರ್ಜನೆ ಮಾಡುವ ಸಂದರ್ಭದಲ್ಲಿ ಸಾಮರಸ್ಯ ಬಹಳ ಮುಖ್ಯ. ಪ್ರಥಮ ವರ್ಷದ ಪದವಿಗೆ ಸೇರಿದ ನಿಮಗೆ ಭವಿಷ್ಯದಲ್ಲಿ ಜೀವನಕ್ಕೆ ಅಗತ್ಯವಾದ ಮೌಲ್ಯಗಳನ್ನು ಅಳವಡಿಸಿಕೊಳ್ಳಿ. ಬದುಕಿನ ಕೊನೆಯವರೆಗೆ ಬರುವ ಶಿಕ್ಷಣವನ್ನು ಕಲಿತು ಬದುಕಿರಿ ಎಂದು ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಳ ಪದವಿ-ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗೋಪಾಲಕೃಷ್ಣ ಜಿ. ಬಿ. ಹೇಳಿದರು.
ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯು ಪ್ರಥಮ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಫ್ರೆಶರ್ಸ್ ಡೇ’ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ, ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು.
ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಕಾರ್ಯದರ್ಶಿ ವಿಕಾಸ್ ಶೆಟ್ಟಿ ಸ್ವಾಗತಿಸಿ, ಎಸ್ಕ್ಯೂಎಸಿ ಪ್ರತಿನಿಧಿ ಖುಷಿ ಶೆಟ್ಟಿ ವಂದಿಸಿ, ಸಾಂಸ್ಕೃತಿಕ ಕಾರ್ಯದರ್ಶಿ ಅಭಿಷೇಕ್ ಪ್ರಾರ್ಥಿಸಿ, ಸಿಂಚನ ನಿರೂಪಿಸಿದರು. ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮನ್ನು ಶರಣ್ಯ ಶೆಟ್ಟಿ ನಿರೂಪಿಸಿದರು.
















