Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ರೀಡೆಯಿಂದ ಯುವಜನರನ್ನು ಆರೋಗ್ಯಕರ ಚಟುವಟಿಕೆಗೆ ಕೊಂಡೊಯ್ಯುವುದೇ ಗುರಿ: ಶಾಸಕ ಕಿರಣ್ ಕೊಡ್ಗಿ
    ಊರ್ಮನೆ ಸಮಾಚಾರ

    ಕ್ರೀಡೆಯಿಂದ ಯುವಜನರನ್ನು ಆರೋಗ್ಯಕರ ಚಟುವಟಿಕೆಗೆ ಕೊಂಡೊಯ್ಯುವುದೇ ಗುರಿ: ಶಾಸಕ ಕಿರಣ್ ಕೊಡ್ಗಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    “ಕ್ರೀಡೆಯ ಮೂಲಕ ಯುವಜನರನ್ನು ಆರೋಗ್ಯಕರ ಚಟುವಟಿಕೆಗೆ ಕೊಂಡೊಯ್ಯುವುದೇ ನಮ್ಮ ಮುಖ್ಯ ಉದ್ದೇಶ. ಗಾಂಧಿ ಮೈದಾನದಲ್ಲಿ ನಿರ್ಮಾಣವಾಗಿರುವ ಈ ವಾಲಿಬಾಲ್ ಕೋರ್ಟ್‌ನಿಂದ ಕುಂದಾಪುರದ ಯುವ ಕ್ರೀಡಾಪಟುಗಳಿಗೆ ಉತ್ತಮ ತರಬೇತಿ ಪಡೆಯಲು ಹಾಗೂ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲು ಅವಕಾಶ ದೊರೆಯಲಿದೆ. ಸ್ಥಳೀಯ ಕ್ರೀಡಾ ಸಂಘಗಳು ಮತ್ತು ಯುವಕರು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕು” ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಕರೆ ನೀಡಿದರು.

    Click Here

    Call us

    Click Here

    ಅವರು ನಗರದ ಗಾಂಧಿ ಮೈದಾನದಲ್ಲಿ ನೂತನವಾಗಿ ನಿರ್ಮಿಸಲಾದ ವಾಲಿಬಾಲ್ ಕೋರ್ಟ್‌ನ್ನು ಉದ್ಘಾಟಿಸಿ ಮಾತನಾಡಿದರು.

    ಕಾರ್ಯಕ್ರಮದಲ್ಲಿ ಕುಂದಾಪುರ ಫ್ರೆಂಡ್ಸ್‌ನ ಗೌರವಾಧ್ಯಕ್ಷ ರಾಜೇಶ್ ಕಾವೇರಿ ಅವರು ಸ್ವಾಗತಿಸಿ, ಮಾತನಾಡಿ, “ಇಂತಹ ಕ್ರೀಡಾ ಮೂಲಸೌಕರ್ಯಗಳು ನಮ್ಮ ಊರಿನ ಯುವಕರ ಪ್ರತಿಭೆಯನ್ನು ಹೊರತರಲು ಸಹಕಾರಿಯಾಗಲಿವೆ. ಮುಂದೆಯೂ ಇದೇ ರೀತಿ ಯುವಕರ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕು” ಎಂದು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡರು.

    ಕಾರ್ಯಕ್ರಮದಲ್ಲಿ ಕುಂದಾಪುರ ಗ್ಯಾರಂಟಿ ಸಮಿತಿ ಅಧ್ಯಕ್ಷ ಹರಿಕೃಷ್ಣ ಶೆಟ್ಟಿ ಕಾನ್ಮಕ್ಕಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಭಾರತದ ವಾಲಿಬಾಲ್ ಮಾಜಿ ನಾಯಕ ನಾಗರಾಜ್ ಹೆಗ್ಡೆ, ಯೋಜನಾ ಸಬಲೀಕರಣ ಮತ್ತು ಕ್ರೀಡಾ ಅಧಿಕಾರಿ ಸತ್ಯನಾರಾಯಣ ಜಿ. ಉಪಸ್ಥಿತರಿದ್ದರು.

    ಕಾರ್ಯಕ್ರಮವನ್ನು ಭಾಸ್ಕರ್ ವಿಠಲವಾಡಿ ನಿರೂಪಿಸಿದರು. ವಾಲಿಬಾಲ್ ಮಾಜಿ ಆಟಗಾರ ಸಮೀರ್ ವಂದನಾ ಸಮರ್ಪಿಸಿದರು. ಸ್ಥಳೀಯ ಮುಖಂಡರು, ಕ್ರೀಡಾ ಸಂಘಗಳ ಪದಾಧಿಕಾರಿಗಳು, ಯುವಕರು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಆಹಾರ ಧಾನ್ಯಗಳ ಕಿಟ್ ಹಾಗೂ ಆರ್ಥಿಕ ಧನಸಹಾಯ ವಿತರಣೆ

    10/08/2026

    ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಕ್ರೋಷೆ ತರಬೇತಿ

    10/08/2026

    ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ

    10/08/2026
    Leave A Reply Cancel Reply

    three × 4 =

    Call us

    Click Here

    Call us

    Call us

    Call us
    Highest Viewed Recently
    • ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಆಹಾರ ಧಾನ್ಯಗಳ ಕಿಟ್ ಹಾಗೂ ಆರ್ಥಿಕ ಧನಸಹಾಯ ವಿತರಣೆ
    • ಕ್ರೀಡೆಯಿಂದ ಯುವಜನರನ್ನು ಆರೋಗ್ಯಕರ ಚಟುವಟಿಕೆಗೆ ಕೊಂಡೊಯ್ಯುವುದೇ ಗುರಿ: ಶಾಸಕ ಕಿರಣ್ ಕೊಡ್ಗಿ
    • ರಾಜ್ಯ ಸರ್ಕಾರದ ‘ವಿಷನ್ ಕಮಿಟಿ’ಯ ಅಧ್ಯಕ್ಷರಾಗಿ ಡಾ. ಕೃಷ್ಣಪ್ರಸಾದ್ ಕೂಡ್ಲು ನೇಮಕ
    • ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಕ್ರೋಷೆ ತರಬೇತಿ
    • ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.