ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ “ಬೆಳಕು – ಸರಣಿ 1” ಕಾರ್ಯಕ್ರಮದ ಅಂಗವಾಗಿ ಎಸ್‌ಎಸ್‌ಸಿ (SSC) ಅಭಿವಿನ್ಯಾಸ ಕಾರ್ಯಕ್ರಮವನ್ನು ಜುಲೈ 31ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಲಾಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಬ್ರಹ್ಮಾವರ ಪೊಲೀಸ್ ಠಾಣೆಯ ಪ್ರೊಬೇಷನರಿ ಪಿಎಸ್‌ಐ ಆಶ್ರಿತಾ ಎ. ಶೆಟ್ಟಿ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಎಸ್‌ಎಸ್‌ಸಿ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಹಾಗೂ ವಿವಿಧ ವೃತ್ತಿ ಅವಕಾಶಗಳ ಕುರಿತು ಮಾರ್ಗದರ್ಶನ ನೀಡಿದರು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಶಿಸ್ತು, ಸಮಯ ನಿರ್ವಹಣೆ, ನಿರಂತರ ಅಧ್ಯಯನ ಹಾಗೂ ಆತ್ಮವಿಶ್ವಾಸ ಅತ್ಯಂತ ಮುಖ್ಯವೆಂದು ಅವರು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಸಂಯೋಜಕ ಶರತ್ ಕುಮಾರ್ ಉಪಸ್ಥಿತರಿದ್ದರು.
ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ವಿ. ಭಟ್ ವಂದಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ತನುಜಾ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿನಿ ಸಿಂಚನಾ ಪ್ರಾರ್ಥಿಸಿದರು.
















