ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026 ಕಾರ್ಯವು ಸಮರ್ಪಕವಾಗಿ ನಡೆಯುತ್ತಿದ್ದು ಈವರೆಗೆ ಜಿಲ್ಲೆಯಾದ್ಯಂತ 100% ರಷ್ಟು ಏನ್ಯೂಮರೇಷನ್ ನಮೂನೆಗಳನ್ನು ವಿತರಿಸಲಾಗಿದೆ. ನಿಖರ ಮತ್ತು ದೋಷರಹಿತ ಮತದಾರರ ಪಟ್ಟಿಯನ್ನು ತಯಾರಿಸಲು ಈ ಪ್ರಕ್ರಿಯೆಯು ಅತ್ಯಂತ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ನಿಮಗೆ ತಲುಪಿಸಲಾಗಿರುವ ನಮೂನೆಗಳಲ್ಲಿರುವ ವಿವರಗಳನ್ನು ಪರಿಶೀಲಿಸಿ, ಎಲ್ಲಾ ಮಾಹಿತಿಯನ್ನು ತಪ್ಪಿಲ್ಲದಂತೆ ಭರ್ತಿ ಮಾಡಿ ಭರ್ತಿ ಮಾಡಿದ ನಮೂನೆಗಳನ್ನು ನಿಮ್ಮ ವ್ಯಾಪ್ತಿಯ ಬೂತ್ ಮಟ್ಟದ ಗಳಿಗೆ ಹಿಂತಿರುಗಿಸಬೇಕು.
ನಮೂನೆಗಳನ್ನು ಭರ್ತಿ ಮಾಡುವಲ್ಲಿ ಯಾವುದೇ ತೊಂದರೆ ಅಥವಾ ಗೊಂದಲಗಳಿದ್ದರೆ, ಹತ್ತಿರದ BLO Facilitation Centre (BFC) ಮತ್ತು Voter facilitation Centre (VFC) ಗೆ ಭೇಟಿ ನೀಡಿದಲ್ಲಿ ಅಲ್ಲಿನ ಸಿಬ್ಬಂದಿಗಳು ನಮೂನೆಗಳನ್ನು ಭರ್ತಿ ಮಾಡುವ ಕುರಿತು ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ.
ಹೆಚ್ಚಿನ ಮಾಹಿತಿ ಅಥವಾ ನಿಮ್ಮ ವ್ಯಾಪ್ತಿಯ BLO ಮತ್ತು BLO Facilitation Centre ಗಳ ವಿವರಗಳನ್ನು ಜಿಲ್ಲಾಡಳಿತದ ಅಧಿಕೃತ ವೆಬ್ ಸೈಟ್ https://udupi.nic.in/en/special-intensive-revision -2026/ ಅನ್ನು ಸಂಪರ್ಕಿಸಬಹುದಾಗಿದೆ.
ಇಂದಿನವರೆಗೆ ಜಿಲ್ಲೆಯಲ್ಲಿ ನಡೆದಿರುವ ಎಸ್.ಐ.ಆರ್ ಪ್ರಗತಿ ಹೀಗಿದೆ:
ಜಿಲ್ಲೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸುವ ಪ್ರಕ್ರಿಯೆಯಲ್ಲಿ ಶೇ.100 ಪ್ರಗತಿ ಸಾಧಿಸಿದ್ದು, ಒಟ್ಟು 10,00,260 ಗಣತಿ ನಮೂನೆಯನ್ನು ಡಿಜಿಟಲೀಕರಣಗೊಳಿಸಲಾಗಿರುತ್ತದೆ. 21,215 ಮತದಾರರು ಮೃತಪಟ್ಟಿರುವುದು ಮನೆ ಭೇಟಿಯ ವೇಳೆ ಕಂಡು ಬಂದಿರುತ್ತದೆ. 29,532 ಮತದಾರರು ಖಾಯಂ ಆಗಿ ಬೇರೆ ಕಡೆಗೆ ವರ್ಗಾವಣೆಗೊಂಡಿದ್ದು, 8317 ಮತದಾರರು ತಮ್ಮ ದಾಖಲಾತಿ ಮಾಡಿರುತ್ತಾರೆ. ಉಡುಪಿ ಜಿಲ್ಲೆಯಲ್ಲಿ ಶೇ. 100 ರಷ್ಟು ಡಿಜಿಟಲೀಕರಣ ಹಾಗೂ ASDD ಪರಿಶೀಲನೆಯನ್ನು ಒಟ್ಟು 1112 ಮತಗಟ್ಟೆಗಳು ಪೂರ್ಣಗೊಳಿಸಿರುತ್ತಾರೆ.
ASDD ಪಟ್ಟಿಯನ್ನು ಜಿಲ್ಲೆಯ ಅಧಿಕೃತ ವೆಬ್‌ಸೈಟ್ https://udupi.nic.in/en/special-intensive-revision -2026/ ನಲ್ಲಿ ಪ್ರಕಟಿಸಲಾಗಿದೆ. ಕೂಡಲೇ ಎಲ್ಲರೂ ASDD ಪಟ್ಟಿಯನ್ನು ವೀಕ್ಷಿಸಿ ಏನಾದರೂ ಬದಲಾವಣೆಗಳು ಅಥವಾ ತಿದ್ದುಪಡಿಗಳು ಇದ್ದಲ್ಲಿ ಸಂಬಂಧಪಟ್ಟ ಬೂತ್ ಮಟ್ಟದ ಅಧಿಖಾರಿಗಳಿಗೆ ಹಾಗೂ ಮತದಾರರ ನೋಂದಣಾಧಿಕಾರಿಯವರ ಗಮನಕ್ಕೆ ಆಗಸ್ಟ್ 17 ರ ಪಳಗೆ ತರಬಹುದಾಗಿದೆ.
ಎನುಮರೇಷನ್ ನಮೂನೆಗಳನ್ನು ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ಪ್ರಕ್ರಿಯೆಯು ಆಗಸ್ಟ್ 17 ರ ವರೆಗೆ ನಡೆಯಲಿದ್ದು, ಇದುವರೆಗೆ ನಮೂನೆಗಳನ್ನು ಭರ್ತಿ ಮಾಡದ ನಾಗರಿಕರು ಕೂಡಲೇ ಭರ್ತಿ ಮಾಡಿ ಸಂಬಂಧಿಸಿದ BLO ಅವರಿಗೆ ನೀಡಬೇಕೆಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
















