Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ ಜಿಲ್ಲಾಧಿಕಾರಿ ಅವರಿಂದ ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಗೆ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ
    ಊರ್ಮನೆ ಸಮಾಚಾರ

    ಉಡುಪಿ ಜಿಲ್ಲಾಧಿಕಾರಿ ಅವರಿಂದ ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಗೆ ಅಗರಬತ್ತಿ ತಯಾರಿಕೆ ತರಬೇತಿ ವೀಕ್ಷಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬ್ರಹ್ಮಾವರ:
    ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್‌ಸೆಟ್) ಸಂಸ್ಥೆ, ಬ್ರಹ್ಮಾವರ ವತಿಯಿಂದ ನಡೆಯುತ್ತಿರುವ ಅಗರಬತ್ತಿ ತಯಾರಿಕೆ ತರಬೇತಿಯನ್ನು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ. ಅವರು ವೀಕ್ಷಿಸಿ, ತರಬೇತಿಯ ಪ್ರಗತಿಯ ಕುರಿತು ಪರಿಶೀಲಿಸಿದರು.

    Click Here

    Call us

    Click Here

    ಜಿಲ್ಲಾಧಿಕಾರಿಯವರ ಆಶಯದಂತೆ ದೇವಸ್ಥಾನಗಳಲ್ಲಿ ದೇವರಿಗೆ ಅರ್ಪಿಸಿದ ಹೂವುಗಳನ್ನು ಮರುಬಳಕೆ ಮಾಡಿಕೊಂಡು ಸುಗಂಧಭರಿತ ಅಗರಬತ್ತಿಯನ್ನು ತಯಾರಿಸಿ, ಸೂಕ್ತ ಬ್ರ್ಯಾಂಡಿಂಗ್ ಹಾಗೂ ಮಾರುಕಟ್ಟೆ ವ್ಯವಸ್ಥೆಯನ್ನು  ಕಲ್ಪಿಸುವುದು ಮತ್ತು ಸ್ವ ಉದ್ಯೋಗದ ಮೂಲಕ ಮಹಿಳಾ ಸಬಲೀಕರಣಕ್ಕೆ ಉತ್ತೇಜನ ನೀಡುವುದು ಈ 12 ದಿನಗಳ ತರಬೇತಿಯ ಪ್ರಮುಖ ಉದ್ದೇಶವಾಗಿದೆ.

    ಈ ನಿಟ್ಟಿನಲ್ಲಿ ಮಹಿಳೆಯರು ಸ್ವಯಂಪ್ರೇರಿತರಾಗಿ ಮುಂದೆ ಬಂದು ತರಬೇತಿಯಲ್ಲಿ ಭಾಗವಹಿಸುತ್ತಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು. ನಂತರ ಅವರು ತರಬೇತಿಯಲ್ಲಿ ಭಾಗವಹಿಸುತ್ತಿರುವ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿ, ಅವರ ತರಬೇತಿ ಅನುಭವಗಳನ್ನು ಆಲಿಸಿದರು. ಶಿಬಿರಾರ್ಥಿಗಳು ತಯಾರಿಸಿದ ಅಗರಬತ್ತಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

    ತರಬೇತಿಯನ್ನು ಸಂಪೂರ್ಣವಾಗಿ ಸದುಪಯೋಗಪಡಿಸಿಕೊಂಡು, ತರಬೇತಿಯ ಉದ್ದೇಶವನ್ನು ಯಶಸ್ವಿಯಾಗಿ ಸಾಕಾರಗೊಳಿಸುವ ಮೂಲಕ ಸ್ವಾವಲಂಬಿ ಉದ್ಯಮಿಗಳಾಗಿ ಬೆಳೆಯುವಂತೆ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

    ಈ ಸಂದರ್ಭದಲ್ಲಿ ವಿ ಕೇರ್ ಸೊಸೈಟಿ ವ್ಯವಸ್ಥಾಪಕರ ರಾಘವೇಂದ್ರ, ಹೇರೂರು ಕಂದಾಯ ಅಧಿಕಾರಿ ಗಿರೀಶ್ ಹಾಗೂ ರುಡ್‌ಸೆಟ್ ಸಂಸ್ಥೆಯ ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ಯಕ್ಷಗಾನ ಸಂಘ ʼಅಭಿವಿನ್ಯಾಸʼ ಕಾರ್ಯಕ್ರಮ

    26/09/2026

    ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ ಸ್ಪರ್ಧೆ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

    26/09/2026

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಓಝೋನ್ ದಿನಾಚರಣೆ ಮತ್ತು ರಸಪ್ರಶ್ನೆ ಕಾರ್ಯಕ್ರಮ

    26/09/2026
    Leave A Reply Cancel Reply

    sixteen − twelve =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಯಕ್ಷಗಾನ ಸಂಘ ʼಅಭಿವಿನ್ಯಾಸʼ ಕಾರ್ಯಕ್ರಮ
    • ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ ಸ್ಪರ್ಧೆ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಓಝೋನ್ ದಿನಾಚರಣೆ ಮತ್ತು ರಸಪ್ರಶ್ನೆ ಕಾರ್ಯಕ್ರಮ
    • ಮರವಂತೆ: ʼವಿಶ್ವಕರ್ಮʼ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ
    • ಆರೋಗ್ಯ ಹಾಗೂ ಆತ್ಮಜ್ಞಾನ ಬೇರೆಬೇರೆಯಲ್ಲ: ಶ್ರೀ ರಾಘವೇಶ್ವರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.