Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ʼಪದವಿಯೊಂದಿಗೆ ಕೌಶಲ್ಯಾಭಿವೃದ್ಧಿ ಡಿಪ್ಲೋಮಾʼ ಕಾರ್ಯಕ್ರಮ
    ಕ್ಯಾಂಪಸ್ ಕಾರ್ನರ್

    ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ʼಪದವಿಯೊಂದಿಗೆ ಕೌಶಲ್ಯಾಭಿವೃದ್ಧಿ ಡಿಪ್ಲೋಮಾʼ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಪದವಿಯೊಂದಿಗೆ ಕೌಶಲ್ಯ ಅಭಿವೃದ್ಧಿ ಇಂದಿನ ಶಿಕ್ಷಣದ ಅಗತ್ಯ. ಪದವಿ ಪಾಠಗಳ ಜೊತೆಗೆ ಹಲವು ವಿಷಯಗಳ ಕುರಿತು ಡಿಪ್ಲೋಮಾ ಮಾಡಬಹುದಾಗಿದೆ. ಈ ಸರ್ಟಿಫಿಕೇಟ್ ಜೀವನದಲ್ಲಿ ಪದವಿ ನಂತರ ಮುನ್ನಡೆಯಲು ಸಹಕಾರಿ. ವಿದ್ಯಾರ್ಥಿಗಳಿಗೆ ಉತ್ತಮ ಸಂಪನ್ಮೂಲ ತಜ್ಞರು ತರಬೇತಿ ನೀಡಲಿದ್ದು ಈ ಪ್ರಯೋಗ ಬಹಳಷ್ಟು ಕಾಲೇಜುಗಳಲ್ಲಿ ಯಶಸ್ವಿಯಾಗಿದೆ ಎಂದು ಮಣಿಪಾಲದ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್‌ನ ಛೇರ್ಮನ್ ಬ್ರಿಗೇಡಿಯರ್ ಡಾ. ಸುರ್ಜಿತ್ ಸಿಂಗ್ ಪಾಬ್ಲಾ ಹೇಳಿದರು.

    Click Here

    Call us

    Click Here

    ಅವರು ಭಂಡಾರ್ಕಾರ್ಸ್ ಕಾಲೇಜು ಏರ್ಪಡಿಸಿದ “ಪದವಿಯೊಂದಿಗೆ ಕೌಶಲ್ಯಾಭಿವೃದ್ಧಿ ಡಿಪ್ಲೋಮಾ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾಹಿತಿ ನೀಡಿದರು. ಭಾರತೀಯ ಸೇನೆಯ ಚೀಫ್ ಎಂಜಿನಿಯರ್ ಸೇವೆಯಿಂದ ನಿವೃತ್ತರಾದ ನಂತರ ಮಣಿಪಾಲ ಶಿಕ್ಷಣ ಸಂಸ್ಥೆಗಳ ಜೊತೆಗಿನ ಎರಡು ದಶಕಗಳ ಸೇವೆಯ ಅನುಭವವನ್ನು ವಿವರಿಸಿದ ಅವರು “ಜೈಪುರದ ಭಾರತೀಯ ಸ್ಕಿಲ್ ಡೆವಲಪ್ಮೆಂಟ್ ಯುನಿವರ್ಸಿಟಿ ಸಹಿತ ಹಲವು ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳ ಹಿತಾಸಕ್ತಿಗಾಗಿ ಕೈಗೊಂಡ ಪ್ರಯೋಗಗಳು ಯಶಸ್ವಿಯಾಗಿದೆ” ಎಂದು ಹೇಳಿದರು.

    ಪದವಿ ಕಾಲೇಜುಗಳಲ್ಲಿ ಶಿಕ್ಷಕರು ಮೊದಲು ಪ್ರೇರಣೆ ಪಡೆಯಬೇಕು. ಅವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಉತ್ತೇಜಿಸಬೇಕು.ಇನ್ನಷ್ಟು ಸ್ಪೂರ್ತಿಯನ್ನು ಸಂಪನ್ಮೂಲ ವ್ಯಕ್ತಿಗಳು ನೀಡುತ್ತಾರೆ ಎಂದರು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಕಾರ್ಯದರ್ಶಿ ಡಾ. ನಾರಾಯಣ ಸಭಾಹಿತ್ ಮಾತನಾಡಿ, ಡಾ.ಸುರ್ಜಿತ್ ಸಿಂಗ್ ಪಾಬ್ಲಾ ಅವರು ಓರ್ವ ಉತ್ತಮ ಮಾರ್ಗದರ್ಶಕರಾಗಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಯಲ್ಲಿ ಯಶಸ್ಸು ಸಾಧಿಸಿದ್ದಾರೆ. ಕಾಲೇಜು ಶಿಕ್ಷಣದ ಅಭಿವೃದ್ಧಿಗೆ ರೂಪಿಸುವ ಯೋಜನೆಗಳಲ್ಲಿ ಇವರು ಪ್ರಮುಖ ಪಾತ್ರ ವಹಿಸುತ್ತಾರೆ.ವಿದ್ಯಾರ್ಥಿಗಳಿಗೆ ಪ್ರತಿ ಸೆಮಿಸ್ಟರ್ ಗೆ ಸರ್ಟಿಫಿಕೇಟ್ ಅಲ್ಲದೇ ಪದವಿ ಮುಗಿಯುವಾಗ ಡಿಪ್ಲೊಮಾ ದೊರಕಲಿದೆ. ಶಿಕ್ಷಕರು ಸಹ ಪಿ.ಹೆಚ್.ಡಿಗೆ ಪ್ರಯತ್ನಿಸಿ ಅಪ್ಗ್ರೇಡ್ ಆಗಬೇಕು ಎಂದು ಹೇಳಿದರು.

    ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಆಡಳಿತಾಧಿಕಾರಿಕಾರಿಗಳಾದ ಡಾ. ಶ್ರೀಧರ ರಂಗನಾಥ ಪೈ ಮಾತನಾಡಿ, ಅಕಾಡೆಮಿ ಕಾಲೇಜುಗಳಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಹಲವು ಅನುಕೂಲತೆಗಳಿವೆ. ಶಿಕ್ಷಕರು ಪಿಹೆಚ್ ಡಿ ಮಾಡಲು ಮಾಹೆ ಮುಕ್ತ ಅವಕಾಶ ನೀಡುತ್ತದೆ. ಶಿಕ್ಷಕರು ನೋಂದಣಿ ಮಾಡಿಕೊಂಡು ಸದಾವಕಾಶ ಉಪಯೋಗಿಸಿಕೊಳ್ಳಬೇಕು ಎಂದು ಹೇಳಿದರು.

    Click here

    Click here

    Click here

    Call us

    Call us

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರಾದ ಕೆ. ಶಾಂತಾರಾಮ ಪ್ರಭು ವಹಿಸಿದ್ದರು.

    ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ ಟಿ. ಸೋನ್ಸ್ ಮತ್ತು ವಿಶ್ವಸ್ಥ ಮಂಡಳಿಯ ಸದಸ್ಯರಾದ ರಾಜೇಂದ್ರ ತೋಳಾರ್ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಯು.ಎಸ್ ಶೆಣೈ ಉಪಸ್ಥಿತರಿದ್ದರು.

    ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಸ್ವಾಗತಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರೋಜ ಎಮ್. ವಂದಿಸಿದರು.  ಉಪನ್ಯಾಸಕಿ ಶೈಲಾ ಆರ್. ಕಾರ್ಯಕ್ರಮ ನಿರೂಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ಯಕ್ಷಗಾನ ಸಂಘ ʼಅಭಿವಿನ್ಯಾಸʼ ಕಾರ್ಯಕ್ರಮ

    26/09/2026

    ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ ಸ್ಪರ್ಧೆ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

    26/09/2026

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಓಝೋನ್ ದಿನಾಚರಣೆ ಮತ್ತು ರಸಪ್ರಶ್ನೆ ಕಾರ್ಯಕ್ರಮ

    26/09/2026
    Leave A Reply Cancel Reply

    ten − 2 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಯಕ್ಷಗಾನ ಸಂಘ ʼಅಭಿವಿನ್ಯಾಸʼ ಕಾರ್ಯಕ್ರಮ
    • ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ ಸ್ಪರ್ಧೆ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಓಝೋನ್ ದಿನಾಚರಣೆ ಮತ್ತು ರಸಪ್ರಶ್ನೆ ಕಾರ್ಯಕ್ರಮ
    • ಮರವಂತೆ: ʼವಿಶ್ವಕರ್ಮʼ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ
    • ಆರೋಗ್ಯ ಹಾಗೂ ಆತ್ಮಜ್ಞಾನ ಬೇರೆಬೇರೆಯಲ್ಲ: ಶ್ರೀ ರಾಘವೇಶ್ವರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.