ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಬಾಲ ನ್ಯಾಯ ಕಾಯ್ದೆಯನ್ವಯ ನೋಂದಣಿಯಾಗಿರುವ ಸಂಸ್ಥೆ/ವಸತಿ ನಿಲಯಗಳನ್ನು ಹೊರತುಪಡಿಸಿ 6 ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರೇತರ ಸಂಸ್ಥೆಗಳು, ನಾಗರಿಕ ಸಮಾಜ ಸಂಸ್ಥೆಗಳು, ಟ್ರಸ್ಟ್, ಧಾರ್ಮಿಕ, ಖಾಸಗಿ, ವೈಯಕ್ತಿಕವಾಗಿ ನಡೆಸಲ್ಪಡುವ ಯಾವುದೇ ಔಪಚಾರಿಕ, ಅನೌಪಚಾರಿಕ ಶೈಕ್ಷಣಿಕ ವಸತಿ ನಿಲಯ, ವಸತಿ ಶಾಲೆ, ಕಾಲೇಜುಗಳನ್ನು ಕಡ್ಡಾಯವಾಗಿ ನೋಂದಾಯಿಸಬೇಕಾಗಿದ್ದು, ಅರ್ಜಿ ನಮೂನೆಗಳನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಇವರಿಂದ ಪಡೆದು ಸೆಪ್ಟೆಂಬರ್ 4 ರ ಒಳಗಾಗಿ ಭರ್ತಿ ಮಾಡಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ ದೂ.ಸಂ: 0820-2574978 ಅನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.











