ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಜನ ಜಾಗೃತಿಗಾಗಿ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನಾಚರಣೆ ಅಂಗವಾಗಿ ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದ ವತಿಯಿಂದ ಸಾರ್ವಜನಿಕರಿಗಾಗಿ ಮಾಹಿತಿ ಕರಪತ್ರ ಬಿಡುಗಡೆ ಸಮಾರಂಭದಲ್ಲಿ ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಘವೇಂದ್ರ ರಾವ್ ಅವರು ಜಂತು ಹುಳುಗಳಿಂದ 18 ವರ್ಷಗಳ ಒಳಗಿನ ಮಕ್ಕಳಿಗೆ ಆಗುವ ಆರೋಗ್ಯ ತೊಂದರೆಗಳ ಬಗ್ಗೆ ಮಾಹಿತಿ ನೀಡಿದರು.
ರೋಟರಿ ಅಧ್ಯಕ್ಷ ಕುಸುಮಾ ಮನೋಜ್, ಜ್ಯೋತಿ ಉದಯ್ ಕುಮಾರ್, ಕಾರ್ಯದರ್ಶಿ ರಾಜಾರಾಮ ಐತಾಳ, ನೈನಾ ಜೆ. ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.











