ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ) ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು ಕಲ್ಯಾಣಪುರ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ- ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಫಾನ್ ಚಿನ್ನದ ಪದಕವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಯರಾದ ವೃಷ್ಟಿ ಮತ್ತು ಸನ್ನಿಧಿ ಬೆಳ್ಳಿ ಪದಕವನ್ನು ಪಡೆದಿದ್ದಾರೆ.
ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.











