ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಗೂಡ್ಸ್ ವಾಹನ ಢಿಕ್ಕಿಯಾಗಿ ಗಾಯಗೊಂಡ ಘಟನೆ ಕೋಟೇಶ್ವರದಲ್ಲಿ ಸಂಭವಿಸಿದೆ.
ಕೋಟೇಶ್ವರ ನಿವಾಸಿ ಮಧುಕರ್ ಶೇರಿಗಾರ್ ಗಾಯಗೊಂಡವರು. ಅವರನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











