ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಕಾಳಾವರ ವರದರಾಜ ಎಂ. ಶೆಟ್ಟಿ ಪದವಿ ಕಾಲೇಜಿನಲ್ಲಿ ಐಕ್ಯೂಎಸಿ ಘಟಕ ಮತ್ತು ಮಾದಕ ದ್ರವ್ಯ ವಿರೋಧಿ ಘಟಕದ ಆಶ್ರಯದಲ್ಲಿ ಮಾದಕ ಪದಾರ್ಥಗಳ ಬಳಕೆಯಿಂದ ಆರೋಗ್ಯ ಮತ್ತು ಸಮಾಜದ ಮೇಲಾಗುವ ದುಷ್ಪರಿಣಾಮಗಳನ್ನು ತಿಳಿಸಿ ಜಾಗೃತಿಯನ್ನು ಮೂಡಿಸುವ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು.
ಕುಂದಾಪುರ ಆರಕ್ಷಕ ಠಾಣೆಯ ಎ.ಎಸ್.ಐ ಶಾಂತರಾಜ ಬಿ.ಕೆ. ಯವರು ಮಾದಕ ಪದಾರ್ಥಗಳ ಬಳಕೆಯಿಂದ ತಾನು ಕೆಡುವುದಲ್ಲದೆ ತನ್ನ ಕುಟುಂಬ ಮತ್ತು ಸಮಾಜದ ಮೇಲೆ ಅನೇಕ ಕೆಟ್ಟ ಪರಿಣಾಮಗಳಾಗಿ ಬದುಕು ದುರ್ಲಭವಾಗುತ್ತದೆ. ಅದರಿಂದ ದೂರವಿರುವುದಲ್ಲದೆ ನಮಗೆ ಮಾಹಿತಿ ನೀಡಿ ಸಹಕರಿಸಬೇಕೆಂದು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ನಾಗರಾಜ ವೈದ್ಯ ಎಂ. ವಹಿಸಿದ್ಧರು. ಮಾದಕ ದ್ರವ್ಯ ವಿರೋಧಿ ಘಟಕದ ಆಶ್ರಯದಲ್ಲಿ ಹಮ್ಮಿಕೊಂಡ ಈ ಕಾರ್ಯಕ್ರಮವನ್ನು ವಾಣಿಜ್ಯಶಾಸ್ತ್ರ ಸಹಾಯಕ ಪ್ರಾದ್ಯಾಪಕರಾದ ತಂಗಮ್ಮ ಎ.ಎ. ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸುಬ್ರಹ್ಮಣ್ಯ ಎ. ಸ್ವಾಗತಿಸಿ, ಶೃತಿ ಆಚಾರ್ಯ ಎನ್. ಕೊನೆಯಲ್ಲಿ ವಂದಿಸಿದರು.











