Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ಯಶಸ್ವಿ ಪೋಷಕ – ಶಿಕ್ಷಕರ ಸಭೆ
    ಊರ್ಮನೆ ಸಮಾಚಾರ

    ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ಯಶಸ್ವಿ ಪೋಷಕ – ಶಿಕ್ಷಕರ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಶಿಸ್ತು, ವೈಯಕ್ತಿಕ ಬೆಳವಣಿಗೆ ಹಾಗೂ ಭವಿಷ್ಯದ ಗುರಿಗಳ ಕುರಿತು ಚರ್ಚಿಸುವ ಮಹತ್ವದ ಉದ್ದೇಶದೊಂದಿಗೆ ಬಾರ್ಕೂರಿನ ಸುಜ್ಞಾನ ನ್ಯಾಷನಲ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಪೋಷಕ-ಶಿಕ್ಷಕರ ಸಭೆಯು ಅತ್ಯಂತ ಯಶಸ್ವಿಯಾಗಿ ನೆರವೇರಿತು.

    Click Here

    Call us

    Click Here

    ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ನಡೆದ ಸಭೆಯಲ್ಲಿ ವಿದ್ಯಾರ್ಥಿಗಳ ಹಾಜರಾತಿ, ಕಲಿಕಾ ಪ್ರಗತಿ, ವೈಯಕ್ತಿಕ ಸಾಮರ್ಥ್ಯ ಹಾಗೂ ಶೈಕ್ಷಣಿಕ ಗುರಿಗಳ ಕುರಿತು ಪೋಷಕರು ಮತ್ತು ಶಿಕ್ಷಕರ ನಡುವೆ ಅರ್ಥಪೂರ್ಣ ವಿಚಾರ ವಿನಿಮಯ ನಡೆಯಿತು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, “ಶಿಸ್ತು ಜೀವನಕ್ಕೆ ಸರಿಯಾದ ದಾರಿ ತೋರಿಸಿದರೆ, ಹೊಂದಾಣಿಕೆಯು ಜೀವನವನ್ನು ಸುಂದರಗೊಳಿಸುತ್ತದೆ. ಶಿಸ್ತು ಮತ್ತು ಹೊಂದಾಣಿಕೆಗಳು ಉತ್ತಮ ಸಂಬಂಧಗಳನ್ನು ಕಟ್ಟುವ ಸೇತುವೆಯಾಗಿದ್ದು, ವಿದ್ಯಾರ್ಥಿಗಳು ಸ್ಪಷ್ಟ ಗುರಿ ರೂಪಿಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗಬೇಕು,” ಎಂದು ಕರೆ ನೀಡಿದರು.

    ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಟ್ರಸ್ಟ್‌ನ ಖಜಾಂಚಿ ಭರತ್ ಶೆಟ್ಟಿ ಮಾತನಾಡಿ,”ಸಾಧನೆಯ ಹಾದಿಯಲ್ಲಿ ಅಸಾಧ್ಯವೆಂಬುದು ಯಾವುದೂ ಇಲ್ಲ. ಯಶಸ್ಸಿಗೆ ದೃಢಸಂಕಲ್ಪ, ಪ್ರಾಮಾಣಿಕ ಪ್ರಯತ್ನ ಹಾಗೂ ನಿರಂತರ ಪರಿಶ್ರಮ ಮುಖ್ಯ. ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ನಂಬಿ ಸವಾಲುಗಳನ್ನು ಧೈರ್ಯದಿಂದ ಎದುರಿಸಬೇಕು,” ಎಂದು ಪ್ರೇರೇಪಿಸಿದರು.

    ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ಆಚಾರ್ಯ ಅವರು ಸ್ಫೂರ್ತಿದಾಯಕ ಕಥೆಯ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಸತತ ಪ್ರಯತ್ನ ಹಾಗೂ ಸೋಲಿನಿಂದ ಕಲಿಯುವ ಮನೋಭಾವದ ಅಗತ್ಯವನ್ನು ಪ್ರತಿಪಾದಿಸಿದರು. ಪ್ರತಿಯೊಬ್ಬ ವಿದ್ಯಾರ್ಥಿಯ ಕಲಿಕಾ ಅಗತ್ಯಗಳನ್ನು ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡುವುದು ಸಂಸ್ಥೆಯ ಮೊದಲ ಆದ್ಯತೆ ಎಂದು ಅವರು ತಿಳಿಸಿದರು.

    Click here

    Click here

    Click here

    Call us

    Call us

    ಸಭೆಯಲ್ಲಿ ಪೋಷಕರು ಶಿಕ್ಷಕರೊಂದಿಗೆ ನೇರವಾಗಿ ಸಂವಾದ ನಡೆಸಿ, ತಮ್ಮ ಮಕ್ಕಳ ಶೈಕ್ಷಣಿಕ ಬೆಳವಣಿಗೆ ಹಾಗೂ ಸುಧಾರಿಸಬೇಕಾದ ಕ್ಷೇತ್ರಗಳ ಕುರಿತು ಮಾಹಿತಿ ಪಡೆದುಕೊಂಡರು. ಈ ಸಭೆಯ ಪ್ರಮುಖ ಆಕರ್ಷಣೆಯೆಂದರೆ ಎರಡೂ ದಿನಗಳಲ್ಲಿ ಶೇಕಡಾ 100 ರಷ್ಟು ಪೋಷಕರು ಭಾಗವಹಿಸಿರುವುದು. ಇದು ಸಂಸ್ಥೆಯ ಮೇಲಿರುವ ಪೋಷಕರ ನಂಬಿಕೆ ಹಾಗೂ ಮಕ್ಕಳ ಭವಿಷ್ಯದ ಬಗೆಗಿನ ಕಾಳಜಿಗೆ ಸಾಕ್ಷಿಯಾಯಿತು.

    ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ತನುಜಾ ಮತ್ತು ವಿಜಯಲಕ್ಷ್ಮಿ ಸ್ವಾಗತಿಸಿದರು. ನೈನಾ ಜೆ. ಶೆಟ್ಟಿ ಅಚ್ಚುಕಟ್ಟಾಗಿ ಕಾರ್ಯಕ್ರಮ ನಿರೂಪಿಸಿದರೆ, ಸಹನಾ ಮತ್ತು ತನ್ವಿ ಧನ್ಯವಾದ ಸಮರ್ಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹೊಸಂಗಡಿ ಸ.ಪ.ಪೂ ಕಾಲೇಜಿನಲ್ಲಿ ಮಣ್ಣಿನ ಮಡಿಲಲ್ಲಿ ಒಂದ್ ದಿನ – ಹೂಂಟಿ ಗದ್ದೆಗೆ ಆಟ

    15/08/2026

    ಲಾವಣ್ಯ ಸುವರ್ಣ ಮಹೋತ್ಸವ ವರ್ಷ: ಅಧ್ಯಕ್ಷರಾಗಿ ಗಣೇಶ್ ಕಾರಂತ್, ಕಾರ್ಯದರ್ಶಿಯಾಗಿ ಉದಯ್ ಆಚಾರ್ಯ ಆಯ್ಕೆ

    15/08/2026

    ಸೈಂಟ್ ಥಾಮಸ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    15/08/2026
    Leave A Reply Cancel Reply

    1 × one =

    Call us

    Click Here

    Call us

    Call us

    Call us
    Highest Viewed Recently
    • ಹೊಸಂಗಡಿ ಸ.ಪ.ಪೂ ಕಾಲೇಜಿನಲ್ಲಿ ಮಣ್ಣಿನ ಮಡಿಲಲ್ಲಿ ಒಂದ್ ದಿನ – ಹೂಂಟಿ ಗದ್ದೆಗೆ ಆಟ
    • ಲಾವಣ್ಯ ಸುವರ್ಣ ಮಹೋತ್ಸವ ವರ್ಷ: ಅಧ್ಯಕ್ಷರಾಗಿ ಗಣೇಶ್ ಕಾರಂತ್, ಕಾರ್ಯದರ್ಶಿಯಾಗಿ ಉದಯ್ ಆಚಾರ್ಯ ಆಯ್ಕೆ
    • ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ಯಶಸ್ವಿ ಪೋಷಕ – ಶಿಕ್ಷಕರ ಸಭೆ
    • ಸೈಂಟ್ ಥಾಮಸ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
    • ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.