ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಅಚ್ಲಾಡಿ ಮೂಡುಕೆರೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಅಗತ್ಯಗಳಿಗೆ ಸ್ಪಂದಿಸಿದ ರೋಟರಿ ಕ್ಲಬ್ ಕೋಟ ಬ್ರಿಗೇಡ್, ಶಾಲಾ ಮಕ್ಕಳಿಗೆ ಯುನಿಫಾರ್ಮ್‌ಗಳನ್ನು ಕೊಡುಗೆಯಾಗಿ ವಿತರಿಸಲಾಯಿತು.
ದಾನಿಗಳಾದ ದಯಾನಂದ ಆಚಾರ್ಯ ಹಾಗೂ ಸುರೇಶ್ ಆಚಾರ್ಯ ಅವರು ನೀಡಿದ ಯುನಿಫಾರ್ಮ್‌ಗಳನ್ನು ರೋಟರಿ ಕ್ಲಬ್ ಕೋಟ ಬ್ರಿಗೇಡ್ ಅಧ್ಯಕ್ಷ ಪ್ರಕಾಶ್ ಪೂಜಾರಿ ಬನ್ನಾಡಿ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರೋಟರಿ ವಲಯ 2ರ ಅಸಿಸ್ಟೆಂಟ್ ಗವರ್ನರ್ ಸುಧಾಕರ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಶಿಕ್ಷಣ ಕ್ಷೇತ್ರಕ್ಕೆ ನೆರವು ನೀಡುವ ಮೂಲಕ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವುದು ಮಹತ್ವದ ಸೇವೆಯಾಗಿದ್ದು, ರೋಟರಿ ಕ್ಲಬ್ ಕೋಟ ಬ್ರಿಗೇಡ್ ಈ ನಿಟ್ಟಿನಲ್ಲಿ ಮಾಡುತ್ತಿರುವ ಸೇವಾ ಕಾರ್ಯ ಶ್ಲಾಘನೀಯವಾಗಿದೆ ಎಂದು ಹೇಳಿದರಲ್ಲದೆ ದಾನಿಗಳ ಸಹಕಾರದಿಂದ ಶಾಲಾ ಮಕ್ಕಳ ಅಗತ್ಯಗಳಿಗೆ ಸ್ಪಂದಿಸಿರುವುದು ಇತರರಿಗೂ ಮಾದರಿಯಾಗಿದ್ದು, ಇಂತಹ ಸಮಾಜಮುಖಿ ಕಾರ್ಯಗಳು ನಿರಂತರವಾಗಿ ನಡೆಯಲಿ ಎಂದು ಆಶಿಸಿದರು. ವಲಯ 2ರ ಲರ್ನಿಂಗ್ ಫೇಸಿಲೇಟರ್ ಸುರೇಶ್ ಬೇಳೂರು ಹಾಗೂ ಮಾಜಿ ಸಹಾಯಕ ಗವರ್ನರ್ ಚಂದ್ರಶೇಖರ್ ಮೆಂಡನ್ ಗೌರವ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಕೋಟ ಬ್ರಿಗೇಡ್ ಸದಸ್ಯರಾದ ಉದಯ್ ಹೆಗ್ಡೆ, ಶಾನಾಡಿ, ವೆಂಕಟೇಶ್ ಆಚಾರ್ಯ, ಪ್ರಕಾಶ್ ಹಂದಟ್ಟು ಹಾಗೂ ಪ್ರಥ್ವಿನ್ ಸಿ. ಮೆಂಡನ್, ಎಸ್‌ಡಿಎಂಸಿ ಅಧ್ಯಕ್ಷ ಚಂದ್ರಶೇಖರ ದೇವಾಡಿಗ, ಸ್ಥಳೀಯರಾದ ಲಯನ್ ಜಯಕರ ಹೆಗ್ಡೆ, ಭಾಸ್ಕರ್ ಶೆಟ್ಟಿ ಹಾಗೂ ರಾಜೇಶ್ ಗಾಣಿಗ ಅಚ್ಲಾಡಿ ಉಪಸ್ಥಿತರಿದ್ದರು.ಶಾಲೆಯ ಮುಖ್ಯ ಶಿಕ್ಷಕಿ ಸಂಧ್ಯಾ ಪ್ರಕಾಶ್ ಹಾಗೂ ಸಹ ಶಿಕ್ಷಕಿ ರಜನಿ ಶೆಟ್ಟಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮಕ್ಕಳ ಶೈಕ್ಷಣಿಕ ಅಗತ್ಯವನ್ನು ಮನಗಂಡು ಯುನಿಫಾರ್ಮ್‌ಗಳನ್ನು ಕೊಡುಗೆಯಾಗಿ ನೀಡಿದ ದಾನಿಗಳಾದ ದಯಾನಂದ ಆಚಾರ್ಯ ಹಾಗೂ ಸುರೇಶ್ ಆಚಾರ್ಯ ಮತ್ತು ಈ ಸೇವಾ ಕಾರ್ಯವನ್ನು ಸಂಘಟಿಸಿದ ರೋಟರಿ ಕ್ಲಬ್ ಕೋಟ ಬ್ರಿಗೇಡ್‌ಗೆ ಶಾಲಾ ಶಿಕ್ಷಕರು ಹಾಗೂ ಎಸ್‌ಡಿಎಂಸಿ ಸದಸ್ಯರು ಅಭಿನಂದನೆ ಸಲ್ಲಿಸಿದರು.
















