ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಐಎಂಜೆ ವಿದ್ಯಾ ಸಂಸ್ಥೆಯಗಳಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ MUTBI, ಮಣಿಪಾಲದ ಸಿ ಈ ಓ ಡಾ. ಸಂತೋಷ್ ರಾವ್ ಅವರು ವಿಕಸಿತ ಭಾರತ – 2047ರ ಪರಿಕಲ್ಪನೆಯನ್ನು ವಿವರಿಸಿದರು. ಭಾರತವು ಸ್ವಾತಂತ್ರ್ಯದ 100 ವರ್ಷಗಳನ್ನು ಪೂರೈಸುವ 2047ರ ವೇಳೆಗೆ ಆರ್ಥಿಕವಾಗಿ ಬಲಿಷ್ಠ, ತಾಂತ್ರಿಕವಾಗಿ ಮುಂದುವರಿದ, ಆತ್ಮನಿರ್ಭರ ಹಾಗೂ ಸಮಗ್ರವಾಗಿ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಬೇಕು ಎಂಬುದು ವಿಕಸಿತ ಭಾರತದ ದೃಷ್ಟಿಕೋನವಾಗಿದೆ ಎಂದು ಅವರು ತಿಳಿಸಿದರು.
ಈ ಗುರಿಯನ್ನು ಸಾಧಿಸುವಲ್ಲಿ ಯುವಜನತೆ ಪ್ರಮುಖ ಪಾತ್ರ ವಹಿಸಲಿದ್ದು, ಶಿಕ್ಷಣ, ಕೌಶಲ್ಯಾಭಿವೃದ್ಧಿ, ನಾವೀನ್ಯತೆ, ಉದ್ಯಮಶೀಲತೆ, ಸಂಶೋಧನೆ ಮತ್ತು ಸಾಮಾಜಿಕ ಹೊಣೆಗಾರಿಕೆಯ ಮೂಲಕ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಐಎಂಜೆ ವಿದ್ಯಾಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕರಾದ ಡಾ. ಎಸ್ ಎನ್ ಭಟ್ ರವರು ಮಾತನಾಡಿ ಒಂದುವೇಳೆ ನಮ್ಮಲ್ಲಿ ವಿಷಯಾಧಾರಿತ ಬಿನ್ನಬಿಪ್ರಾಯವಿದ್ದರೂ ನಮ್ಮ ಮಾತೃಭೂಮಿಯ ಅಭಿವೃದ್ಧಿಯ ವಿಷಯದಲ್ಲಿ ಸರ್ವರೂ ಒಟ್ಟಾಗಿ ಪ್ರಯತ್ನಿಸಬೇಕೆಂದು ಹೇಳಿದರು. ಯುವಶಕ್ತಿಯೇ ಭಾರತದ ಸಂಪತ್ತು, ದೇಶದ ಉನ್ನತಿಯಲ್ಲಿ ಅವರಾಪಾತ್ರ ದೊಡ್ದದು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮಕ್ಕೆ ಐಎಂಜೆ ವಿದ್ಯಾಸಂಸ್ಥೆಗಳ ಛೇರ್ಮನ್ ಸಿದ್ಧಾರ್ಥ ಜೆ. ಶೆಟ್ಟಿ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಎಂಐಟಿ ಕುಂದಾಪುರದ ಪ್ರಾಂಶುಪಾಲರಾದ ಡಾ . ರಾಮಕೃಷ್ಣ ಹೆಗಡೆ, ಐಎಂಜೆಐಎಸ್‌ಸಿ ಪ್ರಾಂಶುಪಾಲೆ ಡಾ. ಪ್ರತಿಭಾ ಎಂ. ಪಟೇಲ್, ಎಂಸಿಎನ್ ಉಪಪ್ರಾಂಶುಪಾಲೆ ರೂಪಶ್ರೀ ಕೆ., ಎಸ್ಐಎಂಜೆಸಿಎ ಎಚ್.ಎಸ್. ಪ್ರಾಂಶುಪಾಲೆ ಹೇಮಲತಾ ಕೋಟ್ಯಾನ್, ವಿದ್ಯಾ ಅಕಾಡೆಮಿ ಪ್ರಾಂಶುಪಾಲೆ ಅರುಣಾ ಭೇರಿ,ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ರಾಜೇಶ್ವರಿ ಅವರು ನಿರ್ವಹಿಸಿದರು. ಐಎಂಜೆಎಎಚ್ಎಸ್ ಉಪ ಪ್ರಾಂಶುಪಾಲೆ ಸೌಜನ್ಯ ಶೆಟ್ಟಿಗಾರ್ ಅವರು ಮುಖ್ಯ ಅಥಿತಿ ಅವರನ್ನು ಸಭೆಗೆ ಪರಿಚಯಿಸಿದರು.
ಕಾರ್ಯಕ್ರಮದ ಕೊನೆಯಲ್ಲಿ ಸುಷ್ಮಾ ಅವರು ವಂದನಾರ್ಪಣೆ ಸಲ್ಲಿಸಿದರು. ದೇಶಭಕ್ತಿ, ರಾಷ್ಟ್ರ ನಿರ್ಮಾಣದ ಜವಾಬ್ದಾರಿ ಮತ್ತು ವಿಕಸಿತ ಭಾರತದ ಸಂಕಲ್ಪದೊಂದಿಗೆ ಐಎಂಜೆ ಸಂಸ್ಥೆಯ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
















