ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ತೆಕಟ್ಟೆಯ ವಿಶ್ವವಿನಾಯಕ ಸಿಬಿಎಸ್‌ಸಿ ಸ್ಕೂಲ್‌ನಲ್ಲಿ ಶನಿವಾರ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ರಾಜು ಮೊಗವೀರ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ 80ನೇ ಸ್ವಾತಂತ್ರ್ಯ ದಿನದ ಶುಭಾಶಯಗಳನ್ನು ಕೋರಿದರು.
Genz ಮತ್ತು Gen Alpha ಇದರ ಬಗ್ಗೆ ಮಕ್ಕಳಿಗೆ ತಿಳಿ ಹೇಳಿದರು. ಅಲ್ಲದೆ ಇಂದಿನ ಯುಗದಲ್ಲಿ ಯುವ ಪೀಳಿಗೆ ಕರ್ತವ್ಯದ ಬಗ್ಗೆ ಸವಿಸ್ತಾರವಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ಆಡಳಿತ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ವಿವಿರಾಜ ಹೆಗ್ಡೆ ಶುಭ ಕೋರಿದರು.
ಶಾಲಾ ಪ್ರಾಂಶುಪಾಲರಾದ ಸಂದೀಪ್ ಪುತ್ರನ್ ಮಾತನಾಡಿ, ಸ್ವತಂತ್ರ ಭಾರತದಲ್ಲಿ ಸರ್ವ ಜನಾಂಗದವರು ಏಕತಾ ಮನೋಭಾವದಿಂದ ಹಾಗೂ ಮೌಲ್ಯಯುತ ಶಿಕ್ಷಣದಿಂದ ದೇಶ ಕಟ್ಟುವ ಕೆಲಸವಾಗಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು, ಪೋಷಕರು, ಹಳೆ ವಿದ್ಯಾರ್ಥಿಗಳು ಶಾಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶಾಲಾ ವತಿಯಿಂದ ವಿದ್ಯಾರ್ಥಿಗಳಿಗೆ ಕೆಸರುಗದ್ದೆಯಲ್ಲಿ ಭತ್ತದ ನಾಟಿ ನೆಡುವ ಕಾರ್ಯಕ್ರಮವನ್ನು ಆಯೋಜಿಸಲು ಸಹಕರಿಸಿದ ಶ್ರೀಮತಿ ಲಲಿತಾ ರವರಿಗೆ ಸನ್ಮಾನಿಸಲಾಯಿತು
ಶಾಲಾ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೆರವೇರಿಸಿದರು. ವಿದ್ಯಾರ್ಥಿಗಳಾದ ಯಕ್ಷತ್ ಶೆಟ್ಟಿ ಸ್ವಾಗತಿಸಿ, ಪರಿಚಯಿಸಿದರು. ಸಾನ್ವಿ ಜಿ. ಶೆಟ್ಟಿ ವಂದಿಸಿದರು. ಶ್ರೀಷ್ಮಾ ಪಿ. ಮತ್ತು ಅದಿತಿ ಜಿ.ಎಸ್. ಕಾರ್ಯಕ್ರಮ ನಿರೂಪಿಸಿದರು.
















