ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು, ಅ.15: ತಾಲೂಕು ಆಡಳಿತ ವತಿಯಿಂದ ಇಲ್ಲಿನ ಗಾಂಧಿ ಮೈದಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ತಾಲೂಕಿನ ಕಾರ್ಯನಿರ್ವಾಹಕ ದಂಢಾಧಿಕಾರಿ ಹಾಗೂ ಮಾನ್ಯ ತಹಶೀಲ್ದಾರರಾದ ರವಿರಾಜ್ ದೀಕ್ಷತ್ ಧ್ವಜಾರೋಗಣ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗುರುರಾಜ್ ಗಂಟಿಹೊಳೆ ಅವರು ವಹಿಸಿದ್ದರು. ಈ ವೇಳೆ ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮೋಹನ್ ಪೂಜಾರಿ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.
ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಯಾದ ನಾಗೇಶ್ ನಾಯಕ್ ಸ್ವಾಗತಿಸಿದರು. ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿರುವ ಅಜೇಯ ಭಂಡರ್ಕರ್ ಅವರು ಧನ್ಯವಾದ ಸಮರ್ಪಣೆ ಮಾಡಿದರು. ಬೈಂದೂರು ಸ.ಮಾ.ಹಿ.ಪ್ರಾ ಶಾಲೆಯ ಗಣಪತಿ ಹೋಬಳಿದಾರ್ ನಿರ್ವಹಣೆ ಮಾಡಿದರು.











