Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ
    ಊರ್ಮನೆ ಸಮಾಚಾರ

    ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ, ಅ.15:
     ದೇಶದಾದ್ಯಂತ ಇಂದು 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು ಇದರ ಅಂಗವಾಗಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲೂ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

    Click Here

    Call us

    Click Here

    ಮುಖ್ಯ ಅತಿಥಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಮಾಜಿ ಸೈನಿಕ ಸದಾಶಿವ ಪ್ರಭು ಧ್ವಜಾರೋಹಣವನ್ನು ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ನಾವೆಲ್ಲರೂ ಇಂದು ನೆಮ್ಮದಿಯಿಂದ ಜೀವನ ಮಾಡುತ್ತಿದ್ದೇವೆಂದರೆ ಅದಕ್ಕೆ ಸಾವಿರಾರು ಮಂದಿ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನದಿಂದಾಗಿ. ಇಂದಿನ ಪೀಳಿಗೆಯು ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ದೇಶದ ಪ್ರಗತಿಗೆ ಕೊಡುಗೆಯನ್ನು ನೀಡಬೇಕು ಆಗ ಮಾತ್ರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಕ್ಕೆ ನ್ಯಾಯವನ್ನು ಒದಗಿಸಿದಂತಾಗುತ್ತದೆ. ಗಡಿ ಕಾಯುವ ಸೈನಿಕನಿಂದಾಗಿ ನಾವೆಲ್ಲರೂ ಈ ದೇಶದಲ್ಲಿ ಸುರಕ್ಷಿತವಾಗಿ ಜೀವನ ನಡೆಸಲು ಸಾಧ್ಯ. ಪ್ರಾಮಾಣಿಕ,ನಿಷ್ಠೆ, ಶಿಸ್ತು ಮತ್ತು ಶ್ರದ್ಧೆಯಿಂದ ದುಡಿದು ತಮ್ಮದೇ ಕ್ಷೇತ್ರದಲ್ಲಿ ಕೊಡುಗೆಗಳನ್ನು ನೀಡುವುದರ ಮೂಲಕ ಸ್ವಾತಂತ್ರ್ಯದ ಆಶೋತ್ತರಗಳನ್ನು ಈಡೇರಿಸಬೇಕು. ಯುವಜನತೆ ಮಾದಕ ವಸ್ತುಗಳಿಂದ ದೂರವಿದ್ದು ಸಾಮಾಜಿಕ ಮಾಧ್ಯಮಗಳನ್ನು ಧನಾತ್ಮಕವಾಗಿ ಬಳಸಿಕೊಂಡಾಗ ಈ ದೇಶವು ಇನ್ನು ಹೆಚ್ಚಿನ ಪ್ರಗತಿಯನ್ನು ಸಾಧಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ  ಸಂಸ್ಥಾಪಕರುಗಳಾದ ವಿದ್ವಾನ್ ಗಣಪತಿ ಭಟ್, ಅಶ್ವತ್ ಎಸ್. ಎಲ್. ಆದರ್ಶ ಎಂ.ಕೆ. ಗಣಪತಿ ಭಟ್ ಕೆ. ಎಸ್. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ಕಾರ್ಯಕ್ರಮವನ್ನು ಆಂಗ್ಲ ಭಾಷಾ ಉಪನ್ಯಾಸಕರಾದ ರಾಜೇಶ್ ಶೆಟ್ಟಿ ನಡೆಸಿಕೊಟ್ಟರು. ಉಪನ್ಯಾಸಕ ವರ್ಗ ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿಗಳು ಧ್ವಜಾರೋಹಣ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

    ಧ್ವಜಾರೋಹಣ ಕಾರ್ಯಕ್ರಮದ ಬಳಿಕ ಕರಾವಳಿಯ ಪ್ರಸಿದ್ಧ ಗಾಯಕರಿಂದ ದೇಶಭಕ್ತಿಯನ್ನು ಪಸರಿಸುವ ಕ್ರಿಯೇಟಿವ್ ಸವಿಗಾನ ಸಂಗೀತ ಕಾರ್ಯಕ್ರಮ ನೆರವೇರಿತು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಷ್ಯಾದ ಬ್ರಿಕ್ಸ್ ಪರಿಸರ ಸಮ್ಮೇಳನದಲ್ಲಿ ವಿವೇಕ್ ಆಳ್ವ ಉಪನ್ಯಾಸ

    12/09/2026

    ಬೈಂದೂರು ಕಾಮಾಕ್ಷಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ – ಶೇ.14 ಡಿವಿಡೆಂಡ್ ಘೋಷಣೆ

    12/09/2026

    ಐಎಂಜೆಐಎಸ್‌ಸಿಯಲ್ಲಿ ಹಣಕಾಸು ಸಾಕ್ಷರತೆ ಮತ್ತು ಬುದ್ಧಿವಂತ ಹೂಡಿಕೆ ಕುರಿತು ವೆಬಿನಾರ್

    12/09/2026
    Leave A Reply Cancel Reply

    4 × three =

    Call us

    Click Here

    Call us

    Call us

    Call us
    Highest Viewed Recently
    • ರಷ್ಯಾದ ಬ್ರಿಕ್ಸ್ ಪರಿಸರ ಸಮ್ಮೇಳನದಲ್ಲಿ ವಿವೇಕ್ ಆಳ್ವ ಉಪನ್ಯಾಸ
    • ಬೈಂದೂರು ಕಾಮಾಕ್ಷಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ – ಶೇ.14 ಡಿವಿಡೆಂಡ್ ಘೋಷಣೆ
    • ಸನ್ಮತಿ ಪತ್ರಿಕೆ ಬಿಡುಗಡೆ – ತಿಂಗಳ ಅಂಗಳ ಸಂವಾದ ಕಾರ್ಯಕ್ರಮ
    • ಐಎಂಜೆಐಎಸ್‌ಸಿಯಲ್ಲಿ ಹಣಕಾಸು ಸಾಕ್ಷರತೆ ಮತ್ತು ಬುದ್ಧಿವಂತ ಹೂಡಿಕೆ ಕುರಿತು ವೆಬಿನಾರ್
    • ಬಸ್ರೂರು ಶ್ರೀ ಶಾರದಾ ಕಾಲೇಜು: ಆರುಣ್ಯ 2026ರ ಸಮಾರೋಪ ಸಮಾರಂಭ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.