ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಉಡುಪಿ ಜಿಲ್ಲಾಡಳಿತ ವತಿಯಿಂದ 30ಕ್ಕೂ ಮಿಕ್ಕಿ ವಿವಿಧ ಇಲಾಖೆಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಸರಕಾರಿ ನೌಕರರನ್ನು ಗುರುತಿಸಿ ನೀಡುವ ಸರ್ವೋತ್ತಮ ಪ್ರಶಸ್ತಿಗೆ ಕೋಡಿ ಹಾಗೂ ಕೋಟತಟ್ಟು ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ರವೀಂದ್ರರಾವ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶನಿವಾರ ಉಡುಪಿ ಜಿಲ್ಲಾ ಆಡಳಿತದ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ವಿವಿಧ ಜನಪ್ರತಿನಿಧಿಗಳು ಸಭೆಯ ಉಪಸ್ಥಿತಿಯಲ್ಲಿ ಗೌರವ ಸನ್ಮಾನ ನೀಡಲಾಯಿತು.











