ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಗಂಗೊಳ್ಳಿಯ ಪ್ರಸಿದ್ಧ ಗುತ್ತಿಗೆದಾರ, ಧಾರ್ಮಿಕ ಮುಂದಾಳು ಶ್ರೀನಿವಾಸ ಎಂ. (62) ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.
ಕೊಡುಗೈ ದಾನಿಯಾಗಿ ಇವರು ಎಲ್ಲರಿಗೂ ಪ್ರೀತಿಪಾತ್ರರಾಗಿದ್ದರು. ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ಅಧ್ಯಕ್ಷರಾಗಿ, ಶ್ರೀ ರಾಘವೇಂದ್ರ ಆರಾಧನಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ, ಗಂಗೊಳ್ಳಿಯ ಸೇವಾ ಸಂಘ ಶ್ರೀ ಶಾರದೋತ್ಸವ ಸಮಿತಿ, ತರುಣ ಕಲಾವೃಂದ ಸೇರಿದಂತೆ ಅನೇಕ ಸಂಘ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಜನಮನ್ನಣೆ ಗಳಿಸಿದ್ದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಕ್ರೀಯ ಸದಸ್ಯರಾಗಿ, ಬಿಜೆಪಿಯ ಕಾರ್ಯಕರ್ತರಾಗಿ ಅಪಾರ ಸೇವೆ ಸಲ್ಲಿಸಿದ್ದರು. ಪ್ರಸಿದ್ಧ ಕಟ್ಟಡ ಗುತ್ತಿಗೆದಾರರಾಗಿದ್ದ ಇವರು ಶೈಕ್ಷಣಿಕ, ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ಜನಾನುರಾಗಿದ್ದರು.
ಅವರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.
















