Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೂಡ್ಲುಕಟ್ಟೆಯಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಪ್ರಯುಕ್ತ ʼಆಸಾಡಿ ಗಮ್ಮತ್ʼ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಮೂಡ್ಲುಕಟ್ಟೆಯಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಪ್ರಯುಕ್ತ ʼಆಸಾಡಿ ಗಮ್ಮತ್ʼ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಾಹಿತ್ಯ ಸಂಘದ ಆಶ್ರಯದಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಪ್ರಯುಕ್ತ “ಆಸಾಡಿ ಗಮ್ಮತ್” ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

    ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಥೆ ನಿರ್ದೇಶಕ ಹಾಗೂ ಕಿರುತೆರೆ ನಟ ಚೇತನ್ ನೈಲಾಡಿ ಅವರು ಆಸಾಡಿ ತಿಂಗಳ ಮಹತ್ವದ ಕುರಿತು ಮಾತನಾಡಿದರು. ಆಸಾಡಿ ಹಬ್ಬದ ಆಚರಣೆ ಮತ್ತು ರೂಢಿ ಸಂಪ್ರದಾಯಗಳ ಹಿಂದೆ ಇರುವ ವೈಜ್ಞಾನಿಕ ಅಂಶಗಳನ್ನು ವಿದ್ಯಾರ್ಥಿಗಳಿಗೆ ಸರಳ ಉದಾಹರಣೆಗಳೊಂದಿಗೆ ವಿವರಿಸಿದರು.

    ಕುಂದಾಪ್ರ ಕನ್ನಡದ ಅಸ್ಮಿತೆಯು ಅದರ ಬಳಕೆಯಲ್ಲಿದೆ. ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವ ಜನತೆಯ ಮೇಲಿದೆ ಎಂದು ಅವರು ಹೇಳಿದರು. ನಮ್ಮ ಮೂಲ ಸಂಸ್ಕೃತಿ, ಆಚಾರ, ವಿಚಾರ ಮತ್ತು ಭಾಷೆ ಅತ್ಯಂತ ಸಂಪದ್ಭರಿತ ಆಸ್ತಿ. ಹಣ ಸಂಪತ್ತನ್ನು ಯಾವಾಗ ಬೇಕಾದರೂ ಸಂಪಾದಿಸಬಹುದು. ಆದರೆ ಸಂಸ್ಕೃತಿಯು ಯಾವುದೇ ಬೆಲೆಬಾಳುವ ಆಸ್ತಿಗಿಂತಲೂ ಮೌಲ್ಯಯುತವಾದುದು. ಅದನ್ನು ರಕ್ಷಿಸಬೇಕಾದ ತುರ್ತಿನ ಬಗ್ಗೆ ಅವರು ಒತ್ತಿ ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್ ವಹಿಸಿದ್ದರು. ಸಾಹಿತ್ಯ ಸಂಘದ ಸಂಯೋಜಕರಾದ ರೇವತಿ, ವಿದ್ಯಾರ್ಥಿ ಸಂಯೋಜಕರಾದ ತೃತೀಯ ಬಿಸಿಎ ವಿದ್ಯಾರ್ಥಿಗಳಾದ ಅಕ್ಷಯ್ ಶೆಟ್ಟಿ ಮತ್ತು ಶ್ರೀರಕ್ಷಾ ಶೆಟ್ಟಿ ಉಪಸ್ಥಿತರಿದ್ದರು.

    ವಿದ್ಯಾರ್ಥಿಗಳು ಕುಂದಾಪ್ರ ಕನ್ನಡದಲ್ಲಿ ಕವನ ವಾಚನ ಮಾಡಿದರು. ಆಸಾಡಿ ಹಬ್ಬದ ಕುರಿತಂತೆ ಕುಂದಾಪುರ ಕನ್ನಡದ ಕಿರು ನಾಟಕವನ್ನು ಪ್ರಸ್ತುತಪಡಿಸಿ ಸಭಿಕರ ಮೆಚ್ಚುಗೆ ಗಳಿಸಿದರು. ತೃತೀಯ ಬಿಸಿಎ ವಿದ್ಯಾರ್ಥಿನಿಯರಾದ ಶಮಿತಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು, ರಾಧಿಕಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

    ಈ ಸಂದರ್ಭದಲ್ಲಿ ಕುಂದಾಪುರದ ಅಸ್ಮಿತೆಯನ್ನು ಬಿಂಬಿಸುವ “ಆಸಾಡಿ ಗಮ್ಮತ್” ಎಂಬ ಬಿತ್ತಿಪತ್ರವನ್ನು ಬಿಡುಗಡೆ ಮಾಡಲಾಯಿತು.

    Click Here

    Call us

    Click Here

    ಕಾರ್ಯಕ್ರಮದಲ್ಲಿ ಉಪನ್ಯಾಸಕರು ಸೇರಿದಂತೆ ಸುಮಾರು 350 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕುಂದಾಪುರ ಸಮಾಜದ ಜನಜೀವನ, ರೂಢಿ, ಸಂಪ್ರದಾಯ, ಆಚಾರ ವಿಚಾರ ಹಾಗೂ ಭಾಷೆಯ ಮಹತ್ವವನ್ನು ಎತ್ತಿ ತೋರಿಸುವಲ್ಲಿ ಈ ಕಾರ್ಯಕ್ರಮ ಪ್ರಭಾವಶಾಲಿಯಾಯಿತು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಸ್ವಚ್ಛತಾ ಹೀ ಸೇವಾ ಹಾಗೂ ಗಾಂಧಿ ಜಯಂತಿಯ ಅಂಗವಾಗಿ ಸ್ವಚ್ಛ ಹಾಗೂ ನಿರ್ಮಲ ಪರಿಸರ ಅಭಿಯಾನ

    03/10/2026

    ಬ್ರಹ್ಮಾವರ ತಾಲ್ಲೂಕು ಸಾಹಿತ್ಯ ಸಮ್ಮೇಳನದ ಆಶಯ ಗೀತೆ ಬಿಡುಗಡೆ

    03/10/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ದಿ ಆರ್ಟ್‌ ಆಫ್‌ ಆಂಕರಿಂಗ್‌ ಮಾಹಿತಿ ಕಾರ್ಯಾಗಾರ

    03/10/2026
    Leave A Reply Cancel Reply

    one × 3 =

    Call us

    Click Here

    Call us

    Call us

    Call us
    Highest Viewed Recently
    • ತೊಡಕುಗಳನ್ನು ಎದುರಿಸಿ ಸಾಗುವುದರಲ್ಲಿಯೇ ಬದುಕಿನ ಯಶಸ್ಸು ಅಡಗಿದೆ: ಎಸ್. ಪ್ರಕಾಶ್ಚಂದ್ರ ಶೆಟ್ಟಿ
    • ಕುಂದಾಪುರ: ಸ್ವಚ್ಛತಾ ಹೀ ಸೇವಾ ಹಾಗೂ ಗಾಂಧಿ ಜಯಂತಿಯ ಅಂಗವಾಗಿ ಸ್ವಚ್ಛ ಹಾಗೂ ನಿರ್ಮಲ ಪರಿಸರ ಅಭಿಯಾನ
    • ಬ್ರಹ್ಮಾವರ ತಾಲ್ಲೂಕು ಸಾಹಿತ್ಯ ಸಮ್ಮೇಳನದ ಆಶಯ ಗೀತೆ ಬಿಡುಗಡೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ದಿ ಆರ್ಟ್‌ ಆಫ್‌ ಆಂಕರಿಂಗ್‌ ಮಾಹಿತಿ ಕಾರ್ಯಾಗಾರ
    • ಕ್ರಿಯೇಟಿವ್ ಕಾಲೇಜಿನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಸಂಭ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.