Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಷ್ಟ್ರೀಯ ಹೆದ್ದಾರಿಯ ಬಾಕಿ ಉಳಿದ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಿ: ಸಂಸದ ಕೋಟ
    ಉಡುಪಿ ಜಿಲ್ಲೆ

    ರಾಷ್ಟ್ರೀಯ ಹೆದ್ದಾರಿಯ ಬಾಕಿ ಉಳಿದ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಿ: ಸಂಸದ ಕೋಟ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿ ಸಾರ್ವಜನಿಕರ ಸುರಕ್ಷತೆ, ಸುಗಮ ಸಂಚಾರ ಹಾಗೂ ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿಯ ಬಾಕಿ ಇರುವ ಸರ್ವೀಸ್ ರಸ್ತೆ ಮತ್ತು ಇತರ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ, ಸಾರ್ವಜನಿಕರ ಉಪಯೋಗಕ್ಕೆ ಅನುವು ಮಾಡಿಕೊಡಬೇಕು ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ರಾಷ್ಟ್ರೀಯ ಹೆದ್ದಾರಿಯ ಅಭಿಯಂತರರುಗಳಿಗೆ ಸೂಚನೆ ನೀಡಿದರು.

    Click Here

    Call us

    Click Here

    ಅವರು ಮಂಗಳವಾರ ಮಣಿಪಾಲ ರಜತಾದ್ರಿಯ ಸಂಸದರ ಕಚೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸಂಬಂಧಿಸಿದಂತೆ ಸರ್ವೀಸ್ ರಸ್ತೆ, ಮೇಲ್ಸೇತುವೆ ಸೇರಿದಂತೆ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ಕ್ಕೆ ಸಂಬಂಧಿಸಿದಂತೆ ಪ್ರಮುಖವಾಗಿ ಕೋಟೇಶ್ವರ ಜಂಕ್ಷನ್‌ನಿಂದ ಬೀಜಾಡಿ ಕ್ರಾಸ್ ವರೆಗಿನ ಸುಮಾರು 830 ಮೀಟರ್, ಅನ್ನಪೂರ್ಣ ಹೋಟೆಲ್‌ನಿಂದ ಬೀಜಾಡಿ–ಕುಂಭಾಶಿ–ತೆಕ್ಕಟ್ಟೆ ಭಾಗದಲ್ಲಿ ಎರಡು ಬದಿ ಸುಮಾರು 3,500 ಮೀಟರ್, ತೆಕ್ಕಟ್ಟೆ ಭಾಗದಲ್ಲಿ ಸುಮಾರು 1,020 ಮೀಟರ್, ಬ್ರಹ್ಮಾವರ ಭಾಗದಲ್ಲಿ ಸುಮಾರು 400 ಮೀಟರ್, ಸಂತೇಕಟ್ಟೆ ಭಾಗದಲ್ಲಿ ಸುಮಾರು 1,000 ಮೀಟರ್, ಉದ್ಯಾವರ ಜಂಕ್ಷನ್ ಭಾಗದಲ್ಲಿ ಸುಮಾರು 325 ಮೀಟರ್ ಸೇರಿದಂತೆ ವಿವಿಧ ಭಾಗಗಳಲ್ಲಿ ಬಾಕಿ ಉಳಿದಿರುವ ಸರ್ವೀಸ್ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಿ, ಸಾರ್ವಜನಿಕ ವಾಹನಗಳು ಪ್ರಯಾಣಿಸಲು ಮುಕ್ತ ಅವಕಾಶ ಮಾಡಿಕೊಡಬೇಕು ಎಂದರು.

    ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮೇಲ್ಸೇತುವೆ, ಅಂಡರ್‌ಪಾಸ್ ಹಾಗೂ ಇತರ ಮೂಲಸೌಕರ್ಯ ಕಾಮಗಾರಿಗಳ ಪ್ರಗತಿಯನ್ನೂ ಪರಿಶೀಲಿಸಿ ಮಾತನಾಡಿದ ಸಂಸದರು, ರಾ.ಹೆ ಯ ಕೆಲವು ಕಡೆಗಳಲ್ಲಿ ಇನ್ನೂ ಸರ್ವೀಸ್ ರಸ್ತೆ ನಿರ್ಮಾಣ ಕಾಮಗಾರಿ ಪ್ರಾರಂಭಿಸಿಲ್ಲ. ಚರಂಡಿಗಳ ಅಸಮರ್ಪಕತೆಯೂ ಕಂಡುಬರುತ್ತಿದೆ. ಸರ್ವೀಸ್ ರಸ್ತೆ ನಿರ್ಮಾಣ ಮಾಡುವಾಗ ಕಾಮಗಾರಿಗಳ ಗುಣಮಟ್ಟ ಹಾಗೂ ಸಂಚಾರ ಸುರಕ್ಷತಾ ಕ್ರಮಗಳನ್ನು ಕಾಯ್ದುಕೊಳ್ಳುವುದರೊಂದಿಗೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಸೂಚಿಸಿದರು.

    ಉಡುಪಿಯ ನಿಟ್ಟೂರು ಮತ್ತು ಬ್ರಹ್ಮಾವರದ ಮಹೇಶ್ ಹಾಸ್ಪಿಟಲ್ ಬಳಿ ಸ್ಥಳ ಪರಿಶೀಲಿಸಿ, ಸಾರ್ವಜನಿಕರ ಅಭಿಪ್ರಾಯ ಪಡೆದು ಫೂಟ್ ಓವರ್ ಬ್ರಿಡ್ಜ್ ನಿರ್ಮಾಣಕ್ಕೆ ಕೂಡಲೇ ಕ್ರಮವಹಿಸಲಾಗುವುದು. ಸಂತೆಕಟ್ಟೆ ಪೆಟ್ರೋಲ್ ಬಂಕ್‌ನಿಂದ ಅಂಬಾಗಿಲು ಜಂಕ್ಷನ್ ವರೆಗೆ ಸುಮಾರು ಒಂದು ಕಿ.ಮೀ ವ್ಯಾಪ್ತಿಯಲ್ಲಿ ಸರ್ವೀಸ್ ರಸ್ತೆ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಮರಗಳ ತೆರವು ಕಾರ್ಯ ಈಗಾಗಲೇ ಆರಂಭವಾಗಿದೆ ಎಂದು ಮಾಹಿತಿ ನೀಡಿದ ಸಂಸದರು, ಕಿನ್ನಿಮೂಲ್ಕಿ ಯಿಂದ ಅಂಬಲಪಾಡಿ ಸಂಪರ್ಕಿಸುವ ರಸ್ತೆಯು ತೀರಾ ಹಾಳಾಗಿರುವ ಕುರಿತು ಪತ್ರಿಕೆಗಳಲ್ಲಿ ವರದಿಯಾಗುತ್ತಿದ್ದು, ಈ ಸಂಬಂಧ ತುರ್ತಾಗಿ ತಾತ್ಕಾಲಿಕ ದುರಸ್ಥಿ ಕಾರ್ಯ ಕೈಗೊಳ್ಳುವಂತೆ ಅಭಿಯಂತರರುಗಳಿಗೆ ಸೂಚಿಸಿದರು.

    Click here

    Click here

    Click here

    Call us

    Call us

    ಕೇರಳ ಮಾದರಿಯನ್ನು ಗಮನದಲ್ಲಿಟ್ಟುಕೊಂಡು ಕುಂದಾಪುರದಿಂದ ತಲಪಾಡಿಯವರೆಗೆ ಅಪಘಾತ ರಹಿತ ರಸ್ತೆ ನಿರ್ಮಾಣ ಮಾಡುವ ಚಿಂತನೆ ಇದೆ. ಕಟಪಾಡಿ ಅಂಡರ್‌ಪಾಸ್‌ನ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಈಗಾಗಲೇ ಒಂದು ಬದಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿರುತ್ತದೆ. ಇದರಿಂದ ವಾಹನ ದಟ್ಟಣೆ ಉಂಟಾಗುತ್ತಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಅನಾನುಕೂಲವಾಗಿದೆ ಎಂದ ಅವರು ಇನ್ನೊಂದು ಬದಿಯ ಕಾಮಗಾರಿಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸುವುದರೊಂದಿಗೆ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದರು. 

    ಕೇಂದ್ರ ಸರ್ಕಾರದ ಸುತ್ತೋಲೆ ಹಾಗೂ ಸುಪ್ರೀಂ ಕೋರ್ಟ್ನ ಆದೇಶದಂತೆ ರಾಷ್ಟ್ರೀಯ ಹೆದ್ದಾರಿಯ ಮಧ್ಯಭಾಗದಿಂದ 75 ಮೀ. ಎರಡೂ ಬದಿಯಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣ ಮಾಡಬಾರದೆಂಬ ಸೂಚನೆ ಇದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ಕರೆದು ಕಾನೂನು ಚೌಕಟ್ಟಿನಲ್ಲಿ ಕೈಗೊಳ್ಳಬಹುದಾದ ಪರಿಹಾರ ಕ್ರಮಗಳನ್ನು ಚರ್ಚಿಸಲಾಗುವುದು ಎಂದರು.

    ಸಭೆಯಲ್ಲಿ ಎನ್.ಹೆಚ್.ಎ.ಐ ಯೋಜನಾ ನಿರ್ದೇಶಕ ಅಬ್ದುಲ್ ಜಾವೇದ್ ಆಜ್ಮಿ, ಎನ್.ಹೆಚ್.ಎ.ಐ ಕನ್ಸಲ್‌ಟೆಂಟ್ ಪ್ರೆಸಿಡೆಂಟ್ ಇಂಜಿನಿಯರ್ ಅಲೋಕ್ ಎಂ, ಎನ್.ಹೆಚ್.ಎ.ಐ ಕನ್ಸಲ್‌ಟೆಂಟ್ ಟೀಮ್ ಲೀಡರ್ ಎನ್.ಆರ್. ಗೋಸ್ವಾಮಿ, ಧ್ರುವ್ ಕನ್ಸಲ್‌ಟೆನ್ಸಿಯ ಎ.ಹೆಚ್.ಇ. ವಿಘ್ನೇಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರದ್ಯುಮ್ನ ಅಡಿಗಗೆ ಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಜಾಗತಿಕ ಗೌರವ

    19/08/2026

    ಕಾನೂನು ಪದವೀಧರರಿಗೆ ಶಿಷ್ಯವೇತನ: ಅರ್ಜಿ ಆಹ್ವಾನ

    14/08/2026

    ಇಎಸ್‌ಐ ವೇತನ ಮಿತಿಯನ್ನು 35,000ರೂ.ಗೆ ಹೆಚ್ಚಿಸಲು ಲೋಕಸಭೆಯಲ್ಲಿ ಸಂಸದ ಕೋಟ ಆಗ್ರಹ

    13/08/2026
    Leave A Reply Cancel Reply

    fourteen + 11 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ದಾಪುರ ಸ.ಮಾ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿನಿಯರು ಗಾಯನ ಸ್ಪರ್ಧೆಯಲ್ಲಿ 7ನೇ ಸ್ಥಾನ
    • ಪ್ರದ್ಯುಮ್ನ ಅಡಿಗಗೆ ಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಜಾಗತಿಕ ಗೌರವ
    • ರಾಷ್ಟ್ರೀಯ ಹೆದ್ದಾರಿಯ ಬಾಕಿ ಉಳಿದ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಿ: ಸಂಸದ ಕೋಟ
    • ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಮಣೂರು ಪಡುಕೆರೆಯ ಪ್ರೇರಣಾ ಮೊಗವೀರಗೆ ಪ್ರಥಮ ಸ್ಥಾನ
    • ರೋಟರಿ ಸಮುದಾಯ ದಳ ಕೋಟೇಶ್ವರ ಉದ್ಘಾಟನೆ ಮತ್ತು ಪದಪ್ರದಾನ ಸಮಾರಂಭ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.