Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಾಗತಿಕ ಭಾಷಾ ಜಾತ್ರೆಯಾಗಿ ಕುಂದಾಪ್ರ ಕನ್ನಡ ಹಬ್ಬ ಆಚರಣೆ – ಬೃಹತ್ ಘೋಷಣೆ
    ಊರ್ಮನೆ ಸಮಾಚಾರ

    ಜಾಗತಿಕ ಭಾಷಾ ಜಾತ್ರೆಯಾಗಿ ಕುಂದಾಪ್ರ ಕನ್ನಡ ಹಬ್ಬ ಆಚರಣೆ – ಬೃಹತ್ ಘೋಷಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ‘ವಿಶ್ವ ಕುಂದಾಪ್ರ ಕನ್ನಡ ಸಮ್ಮೇಳನ-2027’ – ಮುಂದಿನ ಜನವರಿ 30-31ರಂದು ಅದ್ಧೂರಿ ಕಾರ್ಯಕ್ರಮ

    Click Here

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೆಂಗಳೂರು:
    ರಾಜಧಾನಿ ಬೆಂಗಳೂರಿನ ಕುಂದಾಪ್ರ ಕನ್ನಡ ಪ್ರತಿಷ್ಠಾನ ರಿ. ಕಳೆದ ಎಂಟು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವ ‘ವಿಶ್ವ ಕುಂದಾಪ್ರ ಕನ್ನಡ ಹಬ್ಬ’ ಈ ಸಲ ಜಾಗತಿಕ ಸ್ವರೂಪ ತಳೆದಿದ್ದು, ‘ವಿಶ್ವ ಕುಂದಾಪ್ರ ಕನ್ನಡ ಸಮ್ಮೇಳನ-2027’ ಎಂಬ ಹೆಸರಿನಲ್ಲಿ ಅದ್ಧೂರಿಯಾಗಿ ಆಚರಣೆ ಆಗಲಿದೆ.

    ವಿಜಯನಗರದ ಬಂಟರ ಸಂಘದಲ್ಲಿ ಶನಿವಾರ ಆಯೋಜಿಸಿದ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’ಯಲ್ಲಿ ಹಲವು ಅತಿಥಿ ಗಣ್ಯರ ಸಮ್ಮುಖದಲ್ಲಿ ಈ ಬಗ್ಗೆ ಬೃಹತ್ ಘೋಷಣೆ ಮಾಡಲಾಯಿತು.

    ‘ವಿಶ್ವದ ಎಲ್ಲ ಕಡೆಯಲ್ಲಿ ನಡೆಯುತ್ತಿರುವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಬೃಹತ್ ಪ್ರಮಾಣದಲ್ಲಿ ಒಂದೇ ಕಡೆ ಆಯೋಜಿಸಿದರೆ ಹೇಗೆ ಎಂಬ ಕಲ್ಪನೆ-ಕನಸಿನಲ್ಲಿ ಈ ಸಾಹಸಕ್ಕೆ ಮುಂದಾಗಿದ್ದೇವೆ’ ಎಂದು ಕುಂದಾಪ್ರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷ ಡಾ. ದೀಪಕ್ ಶೆಟ್ಟಿ ಬಾರ್ಕೂರು ಘೋಷಿಸಿದ್ದಾರೆ.

    ಅರಮನೆ ಮೈದಾನದ ರಾಯಲ್ ತ್ರಿಪುರವಾಸಿನಿಯಲ್ಲಿ 2027ರ ಜನವರಿ 30-31ರಂದು ಹಿಂದೆಂದಿಗಿಂತಲೂ ಅದ್ಭುತ ರೀತಿಯಲ್ಲಿ ‘ವಿಶ್ವ ಕುಂದಾಪ್ರ ಕನ್ನಡ ಸಮ್ಮೇಳನ-2027’ ನಡೆಯಲಿದ್ದು, ಇದರಲ್ಲಿ ಸುಮಾರು ಮೂರು ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು.

    Click here

    Click here

    Click here

    Call us

    Call us

    ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು, ನಾಯಕ ನಟ ನಿರಂಜನ ಸುಧೀಂದ್ರ, ನಟ-ನಿರ್ಮಾಪಕ ಪ್ರಮೋದ್ ಶೆಟ್ಟಿ, ಚಿತ್ರಸಾಹಿತಿ ಪ್ರಮೋದ್ ಮರವಂತೆ, ಎ.ಎಸ್. ಕೇಟರರ್ಸ್‌ನ ಸತೀಶ್ ಶೆಟ್ಟಿ ಮತ್ತು ಅಮರನಾಥ ಶೆಟ್ಟಿ, ಹೆಗ್ಗುಂಜೆ ಮುಂತಾದ ಗಣ್ಯರ ಸಮ್ಮುಖದಲ್ಲಿ ವಿಭಿನ್ನ ರೀತಿಯಲ್ಲಿ ವಿಶ್ವ ಕುಂದಾಪ್ರ ಕನ್ನಡ ಸಮ್ಮೇಳನ-2027ರ ಬೃಹತ್ ಘೋಷಣೆ ಮಾಡಲಾಯಿತು.

    ಕುಂದಾಪ್ರ ಕನ್ನಡ ಪ್ರತಿಷ್ಠಾನದ ಗೌರವಾಧ್ಯಕ್ಷ ಉದಯಕುಮಾರ್ ಹೆಗ್ಡೆ, ಉಪಾಧ್ಯಕ್ಷ ನರಸಿಂಹ ಬೀಜಾಡಿ, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಾಂಚನ್, ಖಜಾಂಚಿ ವಿಜಯ್ ಶೆಟ್ಟಿ ಹಾಲಾಡಿ, ಜಂಟಿ ಕಾರ್ಯದರ್ಶಿ ಅಜಿತ್ ಶೆಟ್ಟಿ ಉಳ್ತೂರು ಮುಂತಾದವರು ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರೋಟರಿ ಕೋಟ ಸಿಟಿ ವತಿಯಿಂದ ಉಚಿತ ಹೊಲಿಗೆ ಯಂತ್ರ ವಿತರಣೆ

    19/08/2026

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸ್ವಾತಂತ್ರ್ಯೋತ್ಸವ ಸಮಾರಂಭ

    19/08/2026

    ಸಿದ್ದಾಪುರ ಸ.ಮಾ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿನಿಯರು ಗಾಯನ ಸ್ಪರ್ಧೆಯಲ್ಲಿ 7ನೇ ಸ್ಥಾನ

    19/08/2026
    Leave A Reply Cancel Reply

    fourteen + 12 =

    Call us

    Click Here

    Call us

    Call us

    Call us
    Highest Viewed Recently
    • ರೋಟರಿ ಕೋಟ ಸಿಟಿ ವತಿಯಿಂದ ಉಚಿತ ಹೊಲಿಗೆ ಯಂತ್ರ ವಿತರಣೆ
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸ್ವಾತಂತ್ರ್ಯೋತ್ಸವ ಸಮಾರಂಭ
    • ಜಾಗತಿಕ ಭಾಷಾ ಜಾತ್ರೆಯಾಗಿ ಕುಂದಾಪ್ರ ಕನ್ನಡ ಹಬ್ಬ ಆಚರಣೆ – ಬೃಹತ್ ಘೋಷಣೆ
    • ಸಿದ್ದಾಪುರ ಸ.ಮಾ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿನಿಯರು ಗಾಯನ ಸ್ಪರ್ಧೆಯಲ್ಲಿ 7ನೇ ಸ್ಥಾನ
    • ಪ್ರದ್ಯುಮ್ನ ಅಡಿಗಗೆ ಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಜಾಗತಿಕ ಗೌರವ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.