ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು ವಿನೂತನ ಕಾರ್ಯಕ್ರಮ ಸರಣಿಯಡಿ ಸಂಸ್ಕೃತಿ, ಸಂಸ್ಕಾರ, ಸಂಪ್ರದಾಯ ಉಳಿಸಿ ಬೆಳೆಸುವಲ್ಲಿ ವಿಶೇಷ ಪ್ರಯತ್ನ ಸತತ 122ನೇ ತಿಂಗಳ ಕಾರ್ಯಕ್ರಮ ಹಾಗೂ ಸ್ವಾತಂತ್ರ್ಯೋತ್ಸವ ಸಮಾರಂಭ ಗೊಂಬೆ ಮನೆಯಲ್ಲಿ ವಿಜೃಂಭಣೆಯಿಂದ ಜರುಗಿತು.
ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ನೇತಾಜಿ ಕಮಿಟಿ ಫ್ರೆಂಡ್ಸ್ , ಉಪ್ಪಿನಕುದ್ರು ಇವರು ಈ ಸಮಾರಂಭವನ್ನು ಆಯೋಜಿಸಿದ್ದರು. ಸೇವಾ ಕಾರ್ಯಕರ್ತ ರಾಘವೇಂದ್ರ ನೆಂಪು ಅವರು ಅಧ್ಯಕ್ಷತೆ ವಹಿಸಿದ್ದರು.
ಆರ್ ಎಸ್ ಎಸ್ ಸೇವಾ ಕಾರ್ಯಕರ್ತ ಸಂದೀಪ್ ಮಹಾರಾಜ್ ನವದೆಹಲಿ, ಬ್ಯಾಂಕ್ ಉದ್ಯೋಗಿ ಹರೀಶ್, ವಸಂತಿ ಆರ್. ಪಂಡಿತ್, ನೇತಾಜಿ ಕಮಿಟಿ ಫ್ರೆಂಡ್ಸ್ ನ ಅಧ್ಯಕ್ಷ ರಾಘವೇಂದ್ರ ಪೈ, ಅರುಣ್ ಕುಮಾರ್ ಉಪ್ಪಿನಕುದ್ರು ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಉಪಸ್ಥಿತರಿದ್ದರು.
ಅಕಾಡೆಮಿಯ ವತಿಯಿಂದ ಜಯ ಪ್ರಕಾಶ್ ಅವರನ್ನು ಸಮ್ಮಾನಿಸಲಾಯಿತು. ನಂತರ ಊರ ಹಾಗೂ ಪರವೂರ ವಿದ್ಯಾರ್ಥಿಗಳಿಂದ ನೃತ್ಯ ಹಾಗೂ ವಿವಿಧ ಮನೋರಂಜನಾ ಕಾರ್ಯಕ್ರಮ ನೆರೆದ ಪ್ರೇಕ್ಷಕರನ್ನು ರಂಜಿಸಿತು. ನಿವೃತ್ತ ಶಿಕ್ಷಕ ಉದಯ ಭಂಡಾರ್‌ಕಾರ್ ಹಟ್ಟಿಯಂಗಡಿ, ರಾಜೇಂದ್ರ ಪೈ ಹಾಗೂ ಶರ್ಮಿಳಾ ಪೂಜಾರಿಯವರು ನಿರೂಪಿಸಿ, ಅರುಣ್ ಕುಮಾರ್ ವಂದಿಸಿದರು.
















