Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ
    ಊರ್ಮನೆ ಸಮಾಚಾರ

    ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಮುಂದಿನ ಅಕ್ಟೋಬರ್‌ನಿಂದ ಗೃಹಲಕ್ಷ್ಮೀ ಯೋಜನೆಯ ಪರಿಷ್ಕರಣೆ ಕಾರ್ಯ ನಡೆಯಲಿದ್ದು, ಸಂಬಂಧಪಟ್ಟವರು ತಮ್ಮ ಆಧಾರ ಕಾರ್ಡ್ ಅಪ್ಲೇಟ್ ಮಾಡಿ ಇಟ್ಟುಕೊಂಡರೆ ಪರಿಷ್ಕರಣೆಗೆ ಅನುಕೂಲವಾಗಲಿದೆ. ಸದಸ್ಯರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಆಧಾಕಾರ್ಡ್ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು ಎಂದು ಕುಂದಾಪುರ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಅಧ್ಯಕ್ಷ ಎಚ್‌. ಹರಿಪ್ರಸಾದ್‌ ಶೆಟ್ಟಿ ಹೇಳಿದ್ದಾರೆ.

    Click Here

    Call us

    Click Here

    ಅವರು ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗೃಹಲಕ್ಷ್ಮೀ ಯೋಜನೆಯಲ್ಲಿ ಕುಂದಾಪುರ ತಾಲೂಕಿನಲ್ಲಿ ಸುಮಾರು 1705 ಮರಣ ಹೊಂದಿದವರ ಖಾತೆಗೆ ಸುಮಾರು 50 ಲಕ್ಷ ರೂ. ಜಮೆ ಆಗಿದ್ದು, ಈ ಪೈಕಿ 16 ಲಕ್ಷ ರೂ.ಗಳನ್ನು ಬ್ಯಾಂಕ್‌ ಖಾತೆಯಿಂದ ಡ್ರಾ ಮಾಡಿ ಕೊಂಡಿದ್ದಾರೆ. 13 ಲಕ್ಷ ರೂ.ಗಳನ್ನು ಫ್ರೀಜ್ ಮಾಡಲಾಗಿದ್ದು, 19 ಲಕ್ಷ ರೂ. ವಾಪಾಸ್ ಸಂಬಂಧಪಟ್ಟ ಇಲಾಖೆಯ ಖಾತೆಗೆ ಜಮೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

    ಗೃಹಜ್ಯೋತಿ ಪರಿಷ್ಕರಣೆ:
    ಗೃಹಜ್ಯೋತಿ ಯೋಜನೆಯಡಿ ಪರಿಷ್ಕರಣೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಬಾಕಿ ಉಳಿದ ಪುರ್ನ ನೊಂದಣಿ ಕಾರ್ಯವನ್ನು ಅತಿ ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು. ಕೆವೈಸಿ ಅಪ್ಲೇಟ್ ಆಗದಿರು ವುದರಿಂದ ಸಮಸ್ಯೆಯಾಗುತ್ತಿದೆ ಎಂದು ಮೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದರು.

    ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷರು, ಗೃಹಜ್ಯೋತಿ ಯೋಜನೆಯ ಪರಿಷ್ಕರಣೆ ನಡೆಯುತ್ತಿದ್ದು ಸಂಬಂಧಪಟ್ಟ ಇಲಾಖೆ ಯವರು ಬಹಳ ಯಶಸ್ವಿಯಾಗಿ ಪರಿಷ್ಕರಣೆ ಕಾರ್ಯ ನಡೆಸಿದ್ದಾರೆ”. ಪರಿಷ್ಕರಣೆಗೆ ಬಾಕಿ ಉಳಿದವುಗಳನ್ನು ಇಲಾಖೆಯವರು ಸ್ಥಳೀಯ ಮುಖಂಡರ ಜೊತೆ ಸೇರಿ ಮಾಡಲಿದ್ದಾರೆ ಎಂದು ತಿಳಿಸಿದರು.

    ಅನ್ನಭಾಗ್ಯ ಯೋಜನೆಯಡಿ ಪ.ಜಾತಿ/ಪ.ಕುಟುಂಬದವರಿಗೆ ಜಾತಿ ಪ್ರಮಾಣ ಪತ್ರ ಇಲ್ಲದೆ ಪಡಿತರ ನೀಡುತ್ತಿಲ್ಲ ಅರ್ಹ ಪ.ಜಾತಿ/ಪ.ಕುಟುಂಬದವರಿಗೆ ಜಾತಿ ಪ್ರಮಾಣ ಪತ್ರ ನೀಡಲು ಇಲಾಖೆ ಅಧಿಕಾರಿಗಳು ಕ್ರಮ ವಹಿಸುತ್ತಿಲ್ಲ ಮೊದಲು ಅರ್ಜಿ ಹಾಕಿದವರಿಗೆ ಮಾತ್ರ ಜಾತಿ ಪ್ರಮಾಣ ಪತ್ರ ನೀಡಲಾಗುತ್ತಿದೆ ಎಂದು ಸದಸ್ಯ ವಸುಂಧರ ಹೆಗ್ಡೆ ದೂರಿದರು.

    Click here

    Click here

    Click here

    Call us

    Call us

    ಹಾಲಾಡಿ, ಶಂಕರನಾರಾಯಣ ಭಾಗದಲ್ಲಿ ಇಂತಹ ಸಮಸ್ಯೆಗಳು ಕಾಣಿಸಿಕೊಂಡಿದ್ದು, ಪ.ಜಾತಿ/ಪ.ವರ್ಗದ ಮುಖಂಡರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲಾಗುವುದು’ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿ ಸುರೇಶ ಮಾಹಿತಿ ನೀಡಿದರು.

    ಬಸ್‌ ಸಂಚಾರಕ್ಕೆ ಆಗ್ರಹ:
    ಕೊಲ್ಲೂರಿಗೆ ಬೇರೆ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಸ್ಸುಗಳು ಬರುತ್ತಿದ್ದು ನಮ್ಮ ರಾಜ್ಯದ ಬಸ್ಸುಗಳ ಸಂಚಾರ ವಿರಳವಾಗಿದೆ. ಕೊಲ್ಲೂರಿಗೆ ಹೆಚ್ಚಿನ ಕೆಎಸ್‌ಆರ್‌ಟಿಸಿ ಬಸ್ಸುಗಳ ಸಂಚಾರ ಆರಂಭಿಸಬೇಕು ಎಂದು ಸದಸ್ಯರು ಆಗ್ರಹಿಸಿದರು.

    ಪ್ರಸ್ತುತ ಸ್ಥಿತಿಯಲ್ಲಿ ಕುಂದಾಪುರ ಡಿಪೋದಿಂದ ಯಾವುದೇ ಹೊಸ ಬಸ್‌ ಓಡಿಸುವ ಸ್ಥಿತಿ ಇಲ್ಲ. ಶಕ್ತಿ ಯೋಜನೆ ಬಂದ ಬಳಿಕ ಸರಕಾರಿ ಬಸ್ಸುಗಳಲ್ಲಿ ಹೆಚ್ಚಿನ ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಇದಕ್ಕೂ ಮೊದಲು ಜನ ಇಲ್ಲ ಎಂಬ ಕಾರಣಕ್ಕೆ ಹಲವು ಮಾರ್ಗಗಳಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸ ಲಾಗಿತ್ತು ಎಂದು ಡಿಪೋ ಮ್ಯಾನೇಜರ್ ಉದಯ ಶೆಟ್ಟಿ ಹೇಳಿದರು.

    ಆಲೂರು- ಹಕ್ಲಾಡಿ ಹೊಸ ಪರವಾನಿಗೆ, ಹೇರಿಕುದ್ರು ಬಸ್ ನಿಲ್ದಾಣದಲ್ಲಿ ಬಸ್ ನಿಲುಗಡೆ ಹಾಗೂ ಅಮಾಸೆಬೈಲಿನ ಬಸ್‌ ನಿಗದಿತ ಸಮಯಕ್ಕೆ ಓಡಿಸುವ ಕುರಿತು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಸೂಕ್ತ ತೀರ್ಮಾನ ಕೈಗೊಂಡಿದ್ದಾರೆ ಎಂದು ಅಧ್ಯಕ್ಷರು ತಿಳಿಸಿದರು.

    ಗೃಹ ಲಕ್ಷ್ಮೀ ಯೋಜನೆಯಡಿ ಸದ್ಯ ಯಾವುದೇ ಹೊಸ ಅರ್ಜಿಯನ್ನು ಸ್ವೀಕರಿಸಲಾಗುತ್ತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಇಲಾಖೆಯ ರೇಖಾ ಹೇಳಿದರು.

    ಜುಲೈ ತಿಂಗಳಿನಲ್ಲಿ ಗೃಹಲಕ್ಷ್ಮೀ ಯೋಜನೆಯಲ್ಲಿ 3.93 ಕೋಟಿ ರೂ., ಅನ್ನಭಾಗ್ಯ ಯೋಜನೆಯಲ್ಲಿ 5.55 ಕೋಟಿ ರೂ., ಯುವನಿಧಿ ಯೋಜನೆಯಲ್ಲಿ 5.34 ಲಕ್ಷ ರೂ., ಶಕ್ತಿ ಯೋಜನೆಯಲ್ಲಿ 3.23 ಕೋಟಿ ರೂ., ಗೃಹಜ್ಯೋತಿ ಯೋಜನೆಯಲ್ಲಿ 4.63 ಕೋಟಿ ರೂ. ಬಿಡುಗಡೆಯಾಗಿದೆ. ಜುಲೈ ತಿಂಗಳಲ್ಲಿ ಒಟ್ಟು 19.32 ಕೋಟಿ ರೂ. ಬಿಡುಗಡೆಯಾಗಿದ್ದು, ಇಲ್ಲಿನ ತನಕ ತಾಲೂಕಿಗೆ ಒಟ್ಟು 6,12,09, 29, 984 ರೂ. ಬಿಡುಗಡೆಯಾಗಿದೆ – ಎಚ್‌.ಹರಿಪ್ರಸಾದ್‌ ಶೆಟ್ಟಿ, ಅಧ್ಯಕ್ಷರು

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರೋಟರಿ ಕೋಟ ಸಿಟಿ ವತಿಯಿಂದ ಉಚಿತ ಹೊಲಿಗೆ ಯಂತ್ರ ವಿತರಣೆ

    19/08/2026

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸ್ವಾತಂತ್ರ್ಯೋತ್ಸವ ಸಮಾರಂಭ

    19/08/2026

    2027ರಲ್ಲಿ ವಿಶ್ವ ಕುಂದಾಪ್ರ ‌ಕನ್ನಡ ಸಾಹಿತ್ಯ ಸಮ್ಮೇಳನ: ಜ.30 – 31ರಂದು ಅದ್ದೂರಿ ಕಾರ್ಯಕ್ರಮ

    19/08/2026
    Leave A Reply Cancel Reply

    13 + seventeen =

    Call us

    Click Here

    Call us

    Call us

    Call us
    Highest Viewed Recently
    • ಹೆಜಮಾಡಿ ಟೋಲ್‌ನಲ್ಲಿ ಸ್ಥಳೀಯರಿಗೆ ರಿಯಾಯಿತಿ ಕೋರಿ ಪತ್ರ: ಜಿಲ್ಲಾಧಿಕಾರಿ ಭರವಸೆ
    • ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ
    • ರೋಟರಿ ಕೋಟ ಸಿಟಿ ವತಿಯಿಂದ ಉಚಿತ ಹೊಲಿಗೆ ಯಂತ್ರ ವಿತರಣೆ
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸ್ವಾತಂತ್ರ್ಯೋತ್ಸವ ಸಮಾರಂಭ
    • 2027ರಲ್ಲಿ ವಿಶ್ವ ಕುಂದಾಪ್ರ ‌ಕನ್ನಡ ಸಾಹಿತ್ಯ ಸಮ್ಮೇಳನ: ಜ.30 – 31ರಂದು ಅದ್ದೂರಿ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.