Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೆಜಮಾಡಿ ಟೋಲ್‌ನಲ್ಲಿ ಸ್ಥಳೀಯರಿಗೆ ರಿಯಾಯಿತಿ ಕೋರಿ ಪತ್ರ: ಜಿಲ್ಲಾಧಿಕಾರಿ ಭರವಸೆ
    ಉಡುಪಿ ಜಿಲ್ಲೆ

    ಹೆಜಮಾಡಿ ಟೋಲ್‌ನಲ್ಲಿ ಸ್ಥಳೀಯರಿಗೆ ರಿಯಾಯಿತಿ ಕೋರಿ ಪತ್ರ: ಜಿಲ್ಲಾಧಿಕಾರಿ ಭರವಸೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ರಾಷ್ಟ್ರೀಯ ಹೆದ್ದಾರಿ ಸುಂಕ ವಸೂಲಾತಿ ಕೇಂದ್ರವು ಸಾಸ್ತಾನ ಮತ್ತು ಶಿರೂರುಗಳ ಟೋಲ್‌ಗಳಲ್ಲಿ ಸ್ಥಳೀಯ ಜಿಲ್ಲಾ ಪಂಚಾಯತ್‌ ವ್ಯಾಪ್ತಿಯ ಸಾರ್ವಜನಿಕರಿಗೆ ನೀಡುತ್ತಿರುವ ರಿಯಾಯಿತಿಯನ್ನು ಹೆಜಮಾಡಿ ಭಾಗದ ಟೋಲ್ ವ್ಯಾಪ್ತಿಯ ಸ್ಥಳೀಯರಿಗೂ ನೀಡುವಂತೆ ಕೋರಿ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿಗೆ ಶಿಫಾರಸ್ಸು ಪತ್ರ ಬರೆಯುವುದಾಗಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಭರವಸೆ ನೀಡಿದ್ದಾರೆ.

    Click Here

    Call us

    Click Here

    ಅವರು ಮಂಗಳವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ ಟೋಲ್ ಸುಂಕ ವಸೂಲಾ ತಿಗೆ ಸಂಬಂಧಿಸಿದಂತೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಜಿಲ್ಲೆಯ ಸಾಸ್ತಾನ ಹಾಗೂ ಶಿರೂರುಗಳಲ್ಲಿರುವ ರಾಷ್ಟ್ರೀಯ ಹೆದ್ದಾರಿ ಸುಂಕ ವಸೂಲಾತಿ ಕೇಂದ್ರಗಲು ಸ್ಥಳೀಯ ವಾಹನಗಳಿಗೆ ಈ ಹಿಂದೆ ನೀಡುತ್ತಿರುವ ರಿಯಾಯಿತಿಯನ್ನು ಮುಂದುವರಿಸಿದ್ದು, ಹೆಜಮಾಡಿ ವ್ಯಾಪ್ತಿಯಲ್ಲಿ ಮಾತ್ರ ಈ ನಿಯಮ ಪಾಲನೆಯಾಗುತ್ತಿಲ್ಲ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ ಎಂದು ಜಿಲ್ಲಾಧಿಕಾರಿ ನುಡಿದರು.

    ಸಾಸ್ತಾನದಲ್ಲಿ 10 ಕಿ.ಮೀ ವ್ಯಾಪ್ತಿಯಲ್ಲಿ ಸ್ಥಳೀಯರಿಗೆ ವಿನಾಯಿತಿ ನೀಡಲಾಗಿದೆ. ಈ ಮಾದರಿಯನ್ನೇ ಹೆಜಮಾಡಿ ಯಲ್ಲಿ ಅನುಸರಿಸಿದ್ದಲ್ಲಿ ಸ್ಥಳೀಯರಿಗೆ ಅನುಕೂಲವಾಗಲಿದೆ ಎಂಬ ಬೇಡಿಕೆಯನ್ನು ಸ್ಥಳೀಯರು ಸಲ್ಲಿಸಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತದ ವತಿಯಿಂದ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ವಿನಾಯಿತಿ ನೀಡು ವಂತೆ ಮನವಿ ಸಲ್ಲಿಸಲಾಗುವುದು ಎಂದರು.

    ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಟೋಲ್‌ವ್ಯಾಪ್ತಿಯಲ್ಲಿ ವಾಸವಿರುವ ಸ್ಥಳೀಯ ಸಾರ್ವಜನಿಕರು ತಮ್ಮ ದೈನಂದಿನ ಕಾರ್ಯಚಟುವಟಿಕೆಗಳಿಗೆ ದಿನದಲ್ಲಿ ಹಲವು ಬಾರಿ ಟೋಲ್ ಮೂಲಕ ಹಾದುಹೋಗುವಾಗ ಪ್ರತಿ ಬಾರಿಯೂ ಶುಲ್ಕ ಪಾವತಿ ಮಾಡಲು ಅನಾನುಕೂಲತೆ ಉಂಟಾಗುತ್ತದೆ. ಟೋಲ್ ಪ್ಲಾಜಾ ಸುತ್ತಮುತ್ತಲಿನ ಸ್ಥಳೀಯ ವಾಹನಗಳಿಗೆ ಹಾಗೂ ನಿಗದಿತ ವ್ಯಾಪ್ತಿಯಲ್ಲಿ ಬರುವ ನೋಂದಾಯಿತ ವಾಹನಗಳಿಗೆ ಸುಂಕ ವಿನಾಯಿತಿ ಅಥವಾ ಮಾಸಿಕ ಪಾಸ್ ಸೌಲಭ್ಯ ದಾಹ ರಲ್ಲಿ ಅವರುಗಳಿಗೆ ಅನುಕೂಲವಾಗಲಿದೆ ಎಂಬ ಬೇಡಿಕೆ ಇದೆ ಎಂದರು.

    Click here

    Click here

    Click here

    Call us

    Call us

    ಸರ್ವಿಸ್ ರಸ್ತೆ ಕಾಮಗಾರಿ ತ್ವರಿತಗೊಳಿಸಿ:
    ಈಗಾಗಲೇ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆಲವು ಕಡೆಗಳಲ್ಲಿ ಸರ್ವೀಸ್ ರಸ್ತೆಗಳನ್ನು ನಿರ್ಮಾಣ ಮಾಡಲು ಪ್ರಾಧಿಕಾರದಿಂದ ಅನುಮತಿ ದೊರಕಿದ್ದು, ಇವುಗಳ ಕಾಮಗಾರಿಗಳನ್ನು ಶೀಘ್ರ ದಲ್ಲಿಯೇ ಪ್ರಾರಂಭಿಸಿ, ಪೂರ್ಣಗೊಳಿಸಬೇಕು ಎಂದವರು ರಾ.ಹೆದ್ದಾರಿ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು

    ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸರ್ವೀಸ್ ರಸ್ತೆ, ರಸ್ತೆ ರಿಪ್ಲೆಕ್ಟರ್‌ಗಳ ಅಳವಡಿಕೆ, ದಾರಿದೀಪ ಅಳವಡಿಕೆ, ರಸ್ತೆಯಲ್ಲಿರುವ ಹೊಂಡ-ಗುಂಡಿ ದುರಸ್ಥಿ ಒಳಚರಂಡಿ ಕಾಮಗಾರಿ, ಜಂಕ್ಷನ್‌ಗಳಲ್ಲಿ ಸರಿಯಾದ ಸೂಚನಾ ಫಲಕ ಅಳವಡಿಸುವುದು ಸೇರಿದಂತೆ ವಿವಿಧ ಸುರಕ್ಷತಾ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡಲ್ಲಿ ಅಪಘಾತಗಳಿಗೆ ಕಡಿವಾಣ ಹಾಕಬಹುದು. ಇದಕ್ಕೆ ಒತ್ತು ನೀಡಿ ಎಂದು ಸ್ವರೂಪ ಟಿ.ಕೆ. ಹೆದ್ದಾರಿ ವಿಭಾಗದ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗ ಸೂಚಿಸಿದರು.

    ಸಾರ್ವಜನಿಕರ ಆಗ್ರಹ:
    ಸಭೆಯಲ್ಲಿ ಉಪಸ್ಥಿತರಿದ್ದ ಹೆಜಮಾಡಿ ಟೋಲ್ ಸಮೀಪದ ಸಾರ್ವಜನಿಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಮಾಜಿ ಜನಪ್ರತಿನಿಧಿಗಳು, ತಮ್ಮ ದೈನಂದಿನ ಕೆಲಸ ಕಾರ್ಯಗಳಿಗೆ ದಿನದಲ್ಲಿ ಹಲವಾರು ಬಾರಿ ಟೋಲ್‌ನ್ನು ದಾಟಿ ಹೋಗುವುದು ಅನಿವಾರ್ಯವಾಗಿದ್ದು, ಪ್ರತೀ ಬಾರಿಯೂ ಶುಲ್ಕ ಪಾವತಿ ಮಾಡುವುದು ಕಷ್ಟಸಾಧ್ಯ ಸಾಸ್ತಾನಕ್ಕೆ ನೀಡುವ ವಿನಾಯಿತಿಯನ್ನು ನಮಗೂ ನೀಡಬೇಕು ಎಂದು ಒತ್ತಾಯಿಸಿದರು.

    ರಾ.ಹೆದ್ದಾರಿಯ ಕೆಲವೊಂದು ವ್ಯಾಪ್ತಿಯಲ್ಲಿ ಸರ್ವಿಸ್ ರೋಡ್‌ ನಿರ್ಮಾಣ ಮಾಡಬೇಕು. ರಸ್ತೆ ದೀಪ ಅಳವಡಿಕೆ, ಟೋಲ್ ಸಿಬ್ಬಂದಿಗಳು ಸಾರ್ವಜನಿಕ ರೊಂದಿಗೆ ಸಹನೆಯಿಂದ ವರ್ತಿಸುವಂತೆ ಅವರು ಅಹವಾಲುಗಳನ್ನು ಸಲ್ಲಿಸಿದರು.

    ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಲೋಕೋಪ ಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಕಿರಣ್ ಎಸ್. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಯೋಜನಾ ನಿರ್ದೇಶಕ ಅಬ್ದುಲ್ ಜಾವೇದ್, ಅಭಿಯಂತರರು, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರದ್ಯುಮ್ನ ಅಡಿಗಗೆ ಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಜಾಗತಿಕ ಗೌರವ

    19/08/2026

    ರಾಷ್ಟ್ರೀಯ ಹೆದ್ದಾರಿಯ ಬಾಕಿ ಉಳಿದ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಿ: ಸಂಸದ ಕೋಟ

    19/08/2026

    ಕಾನೂನು ಪದವೀಧರರಿಗೆ ಶಿಷ್ಯವೇತನ: ಅರ್ಜಿ ಆಹ್ವಾನ

    14/08/2026
    Leave A Reply Cancel Reply

    nineteen − 16 =

    Call us

    Click Here

    Call us

    Call us

    Call us
    Highest Viewed Recently
    • ಹೆಜಮಾಡಿ ಟೋಲ್‌ನಲ್ಲಿ ಸ್ಥಳೀಯರಿಗೆ ರಿಯಾಯಿತಿ ಕೋರಿ ಪತ್ರ: ಜಿಲ್ಲಾಧಿಕಾರಿ ಭರವಸೆ
    • ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ
    • ರೋಟರಿ ಕೋಟ ಸಿಟಿ ವತಿಯಿಂದ ಉಚಿತ ಹೊಲಿಗೆ ಯಂತ್ರ ವಿತರಣೆ
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸ್ವಾತಂತ್ರ್ಯೋತ್ಸವ ಸಮಾರಂಭ
    • 2027ರಲ್ಲಿ ವಿಶ್ವ ಕುಂದಾಪ್ರ ‌ಕನ್ನಡ ಸಾಹಿತ್ಯ ಸಮ್ಮೇಳನ: ಜ.30 – 31ರಂದು ಅದ್ದೂರಿ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.