Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕರಡು ಮತದಾರರ ಪಟ್ಟಿ ಆಗಸ್ಟ್ 24ರಂದು ಪ್ರಕಟ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಕರಡು ಮತದಾರರ ಪಟ್ಟಿ ಆಗಸ್ಟ್ 24ರಂದು ಪ್ರಕಟ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ 2026 (ಎಸ್‌ಐಆರ್‌) ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ಆಗಸ್ಟ್ 24ರಂದು ಸೋಮವಾರ ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದ್ದಾರೆ.

    Click Here

    Call us

    Click Here

    ಅವರು ಬುಧವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ 2026ರ ಕರಡು ಮತದಾರರ ಪಟ್ಟಿ ಪ್ರಕಟಣೆ ಮತ್ತು ಪ್ರಕಟಣೆಯ ನಂತರದ ಚಟುವಟಿಕೆಗಳಿಗೆ ಸಂಬಂಧಿಸಿದಂತೆ, ನೋಂದಾಯಿತ ಹಾಗೂ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಪರಿಷ್ಕೃತ ಎಸ್‌ಐಆರ್-2026 ವೇಳಾಪಟ್ಟಿಯಂತೆ ಆ.17ಕ್ಕೆ ಎನ್ಯುಮರೇಷನ್ ನಮೂನೆಗಳನ್ನು ಮನೆಮನೆಗೆ ತೆರಳಿ ಸಂಗ್ರಹಿಸುವ ಪ್ರಕ್ರಿಯೆ ಪೂರ್ಣಗೊಂಡಿದ್ದು, ಆ.24ರಂದು ಬೆಳಿಗ್ಗೆ 11:00 ಗಂಟೆಗೆ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಹಾಗೂ ಪಟ್ಟಿ ಪ್ರಕಟಗೊಂಡ ನಂತರ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಗೆ ಒಂದು ಮುದ್ರಿತ ಪ್ರತಿ ಹಾಗೂ ಒಂದು ಸಾಫ್ಟ್ ಕಾಪಿ ಪಟ್ಟಿಯನ್ನು ನೀಡಲಾಗುವುದು ಎಂದರು.

    ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಮೊದಲ ಹಂತ ಮುಗಿದಿದ್ದು, ಜಿಲ್ಲೆಯ ಒಟ್ಟು 10,63,876 ಮತದಾರರ ಪೈಕಿ 10,00,545 ಮತದಾರರ ಗಣತಿ ನಮೂನೆಯನ್ನು ಡಿಜಿಟಲೈಸ್ ಮಾಡಲಾ ಗಿದೆ. ಉಳಿದಂತೆ ಎಎಸ್‌ಡಿಡಿಒ ಪಟ್ಟಿಯಲ್ಲಿರುವ ಮೃತಪಟ್ಟ 21,262, ಶಾಶ್ವತವಾಗಿ ಸ್ಥಳಾಂತರಗೊಂಡ 29,361, ಗೈರು ಹಾಜರಾದ 4,145, ದ್ವಿಪ್ರತಿಯಲ್ಲಿ ಕಾರ್ಡ್ ಪಡೆದುಕೊಂಡ 8,374 ಹಾಗೂ ಇತರೆ 189 ಮಂದಿ ಮತದಾರರು ಸೇರಿದಂತೆ ಒಟ್ಟು 63,331 ಮತದಾರರು ವಿವಿಧ ಕಾರಣಗಳಿಂದ ಮತದಾರರ ಕರಡು ಪಟ್ಟಿಯಿಂದ ಹೊರಗುಳಿಯಲಿ ದ್ದಾರೆ ಎಂದರು.

    ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಾದ್ಯಂತ ಒಟ್ಟು 10,63,876 ಮತದಾರರ ಪೈಕಿ 97,697 ಮತದಾರರು (ಶೇ. 9.18) ವಿಚಾರಣಾ ಹಂತಕ್ಕೆ ಒಳಪಡಲಿದ್ದಾರೆ ಹಾಗೂ ಇಆರ್‌ಒ/ಎಇಆರ್‌ಒ ಹಂತದಲ್ಲಿ ಕನಿಷ್ಠ 7 ದಿನಗಳ ಮುಂಚಿತವಾಗಿ ವಿಚಾರಣೆಯ ನೋಟೀಸ್ ಜಾರಿ ಮಾಡಲಾಗುತ್ತದೆ.

    Click here

    Click here

    Click here

    Call us

    Call us

    ಈ ಸಂಬಂಧ ಬಿಎಲ್‌ಒಗಳು ಮನೆ ಮನೆಗೆ ತೆರಳಿ ನೋಟೀಸ್ ತಲುಪಿಸಿ, ಸ್ವೀಕೃತಿ ಪಡೆದು, ಸ್ವೀಕರಿಸಿದವರ ಭಾವಚಿತ್ರದೊಂದಿಗೆ ಅವರ ಆ್ಯಪ್‌ನಲ್ಲಿ ಅದನ್ನು ಅಪ್ಲೋಡ್ ಮಾಡಲಿದ್ದಾರೆ. ನಿಗದಿಪಡಿಸಿದ ಸ್ಥಳಗಳಲ್ಲಿ ವಿಚಾರಣೆ ನಡೆಸಿ ಸೂಕ್ತ ದಾಖಲೆಗಳನ್ನು ಪರಿಶೀಲಿಸಿದ ನಂತರ ಇಆರ್‌ಒಗಳು ಪಟ್ಟಿಗೆ ಮರು ಸೇರ್ಪಡೆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳಾದ ಭಾರತೀಯ ಜನತಾ ಪಕ್ಷದ ಚಂದ್ರಶೇಖರ ಪ್ರಭು, ಜೆಡಿಎಸ್‌ನ ಜಯರಾಮ್ ಆಚಾರ್ಯ, ಕಾಂಗ್ರೆಸ್ ಪಕ್ಷದ ಬಿ. ವಿಜಯ ನಾಯರಿ, ಅಬ್ದುಲ್ ಅಝೀಜ್ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೈ ಭಾರತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

    20/08/2026

    ಡಾ. ಶಿವರಾಮ ಕಾರಂತ ಜನ್ಮದಿನಾಚರಣೆ: ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ

    19/08/2026

    ಹೆಜಮಾಡಿ ಟೋಲ್‌ನಲ್ಲಿ ಸ್ಥಳೀಯರಿಗೆ ರಿಯಾಯಿತಿ ಕೋರಿ ಪತ್ರ: ಜಿಲ್ಲಾಧಿಕಾರಿ ಭರವಸೆ

    19/08/2026
    Leave A Reply Cancel Reply

    3 × 4 =

    Call us

    Click Here

    Call us

    Call us

    Call us
    Highest Viewed Recently
    • ಕರಡು ಮತದಾರರ ಪಟ್ಟಿ ಆಗಸ್ಟ್ 24ರಂದು ಪ್ರಕಟ: ಜಿಲ್ಲಾಧಿಕಾರಿ
    • ರೋಟರಿ ಕ್ಲಬ್ ಸಾಂಸ್ಕೃತಿಕ ಸ್ಪರ್ಧೆ: ಯುವ-ಜನ-ಮನ ರ‍್ಯಾಲಿಯಲ್ಲಿ ಡಾ. ಬಿ.ಬಿ. ಹೆಗ್ಡೆ ಕಾಲೇಜು ಪ್ರಥಮ
    • ಮಹಿಳಾ ಸಬಲೀಕರಣಕ್ಕೆ ಅರ್ಹತೆ, ಆತ್ಮವಿಶ್ವಾಸವೇ ಬಲ: ಶ್ಯಾಮಲಾ ಎಸ್. ಕುಂದರ್
    • ಮೈ ಭಾರತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ
    • ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳ ಕಮಾಲ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.