Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ
    ಊರ್ಮನೆ ಸಮಾಚಾರ

    ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೆಂಗಳೂರು:
    ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಮಳೆಗಾಲದ ಅಧಿವೇಶನದಲ್ಲಿ ರಾಜ್ಯದಲ್ಲಿ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ  ಪ್ರದೇಶದ 7ನೇ ಕರಡು ಅಧಿಸೂಚನೆ ಹೊರಡಿಸಿರುವುದು ಸರಕಾರದ ಗಮನದಲ್ಲಿರುವ ಹಾಗೂ ಕರಡು ಅಧಿಸೂಚನೆಯ ಬಗ್ಗೆ ಸ್ಥಳೀಯ ಗ್ರಾಮ ನಿವಾಸಿಗಳು ಮತ್ತೊಮ್ಮೆ ಅತಂಕಿತರಾಗಿರುವುದರಿಂದ ಜನರ ಜೀವನೋಪಾಯ ಮತ್ತು ಅಭಿವೃದ್ಧಿ ವಿಚಾರಗಳ ಸ್ಪಷ್ಟನೆ ಬಗ್ಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸರಾದ ಗುರುರಾಜ್ ಗಂಟಿಹೊಳೆ ಅವರು ಪ್ರಶ್ನೆ ಕೇಳಿದ್ದಾರೆ.

    Click Here

    Call us

    Click Here

    ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದ ರಾಜ್ಯ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರಾದ ರಾಮಲಿಂಗರೆಡ್ಡಿ ಅವರು  ಭಾರತ  ಸರಕಾರವು ದಿನಾಂಕ 27.07.2026ರಂದು ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಸಂಬಂಧಿಸಿದಂತೆ 7ನೇ ಕರಡು ಅನುಸೂಚನೆಯನ್ನು ಹೊರಡಿಸಿರುವ ವಿಚಾರ ಸರ್ಕಾರದ ಗಮನಕ್ಕೆ ಬಂದಿರುತ್ತದೆ ಹಾಗೂ ಪ್ರಸ್ತುತ ಕಸ್ತೂರಿ ರಂಗನ್ ವರದಿ ಅಧರಿಸಿ  ಕೇಂದ್ರ ಸರ್ಕಾರವು 27ನೇ ಜುಲೈ 2026ರಂದು ಹೊರಡಿಸಿರುವ 7ನೇ  ಕರಡು ಅಧಿಸೂಚನೆಯನ್ನು ಸರ್ಕಾರದ ಹಂತದಲ್ಲಿರುತ್ತದೆ ಎಂದು ಉತ್ತರಿಸಿದ್ದಾರೆ..

    ಹಿಂದಿನ 6 ನೇ ಅಧಿಸೂಚನೆಯನ್ನು ಸಾರಸಗಟ ತಳ್ಳಿ ಹಾಕಿದ ನಿಲುವನ್ನು ಪುನರುಚ್ಚರಿಸಿದ ರಾಜ್ಯ ಸರಕಾರ:
    ಡಾ.ಕೆ. ಕಸ್ತೂರಿರಂಗನ್ ನೇತೃತ್ವದ ಸಮಿತಿ ವರದಿಯಲ್ಲಿ ಪರಿಸರ ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲ್ಪಟ್ಟಿರುವ ಪ್ರದೇಶಗಳು ಈಗಾಗಲೇ ರಕ್ಷಿತ ಪ್ರದೇಶಗಳು ಅಧಿಸೂಚಿತ ಅರಣ್ಯಗಳು ಅಥವಾ ಪರಿಸರ ಸೂಕ್ಷ್ಮ ಪ್ರದೇಶಗಳೆಂದು ಘೋಷಿಸಲ್ಪಟ್ಟು ಸರ್ಕಾರದ ರಕ್ಷಣೆ ಅಡಿಯಲ್ಲಿದ್ದು,ಈ ಪ್ರದೇಶಗಳ ಮೇಲೆ ಹೆಚ್ಚಿನ ನಿರ್ಬಂಧಗಳನ್ನು ವಿಧಿಸುವುದು ಸಂರಕ್ಷಣೆಯ ಉದ್ದೇಶಗಳಿಗೆ ಪ್ರತಿಕೂಲವಾಗುವುದಾಗಿ ಹಾಗೂ ಜನರ ಜೀವನೋಪಾಯಕ್ಕೆ ಪ್ರತಿಕೂಲ ಪರಿಣಾಮ ಉಂಟಾಗಬಹುದು ಎಂದು ರಾಜ್ಯ ಸಚಿವ ಸಂಪುಟ ಸಭೆಗಳಲ್ಲಿ ಸದರಿ ವರದಿ ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಹೊರಡಿಸಿರುವ ಹಿಂದಿನ ಕರಡು ಅಧಿಸೂಚನೆಗಳನ್ನು ಸಂಪೂರ್ಣವಾಗಿ ನಿರಾಕರಿಸಲು ನಿರ್ಣಯಿಸಲಾಗಿರುತ್ತದೆ.

    ರಾಜ್ಯ ಸಚಿವ ಸಂಪುಟ ಸಭೆಗಳ ನಿರ್ಣಯಗಳನ್ನು ಅನುಸರಿಸಿ ಡಾ. ಕಸ್ತೂರಿರಂಗನ್ ಸಮಿತಿಯ ವರದಿಯ ಶಿಫಾರಸುಗಳನ್ನು ನಿರಾಕರಿಸಿ ಸದರಿ ವರದಿ ಅನುಷ್ಠಾನದ ಸಂಬಂಧ ಹೊರಡಿಸಿದ ಕರಡು ಅಧಿ ಸೂಚನೆಗಳನ್ನು ತಿರಸ್ಕರಿಸುವ ರಾಜ್ಯ ಸರ್ಕಾರದ ಸ್ಪಷ್ಟ ನಿಲುವನ್ನು 30-09-2024 ರಂತೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿರುತ್ತದೆ ಎಂಬುದನ್ನು ಇದೇ ಸಂದರ್ಭದಲ್ಲಿ ಶಾಸಕರ ಪ್ರಶ್ನೆಗೆ ಪೂರಕವಾಗಿ ಸಚಿವರು ಸ್ಪಷ್ಟನೆಯನ್ನು ನೀಡಿರುತ್ತಾರೆ.

    ಒಂದು ಬಾರಿಗೆ ಭೌತಿಕ ಸರ್ವೇಯನ್ನು ಸರಕಾರದ ಮೂಲಕ ಕೈಗೊಳ್ಳಲು ಸರಕಾರಕ್ಕೆ ಶಾಸಕರ ಆಗ್ರಹ:
    ಈ ಹಿಂದಿನ 6 ಅಧಿಸೂಚನೆ ಸೇರಿದಂತೆ ಪ್ರಸ್ತುತ 7ನೇ ಅಧಿಸೂಚನೆಯೂ ಕೂಡ ವೈಮಾನಿಕ ಸಮೀಕ್ಷೆಯ ಆಧಾರದ ಮೂಲಕ  ಕೈಗೊಳ್ಳಲಾಗಿದ್ದು, ಅಧಿಸೂಚನೆಯಲ್ಲಿ ಗ್ರಾಮಗಳಲ್ಲಿ ಬರಬಹುದಾದ ಪ್ರದೇಶಗಳ ಅಕ್ಷಾಂಶ ಹಾಗೂ ರೇಖಾಂಶಗಳ ವಿವರಗಳನ್ನು ನಮೂದಿಸಿದ್ದರೂ ಪ್ರಸ್ತುತ ಸದರಿ ಗಡಿ ರೇಖೆ  ಯಾವ ಭಾಗದಲ್ಲಿ ಹಾದು ಹೋಗುತ್ತದೆ ಎಂಬ ಬಗ್ಗೆ ಸ್ಥಳೀಯ ಗ್ರಾಮಸ್ಥರಿಗೆ ಮಾಹಿತಿಗಳು ಇಲ್ಲದೆ ಇರುವ ಕಾರಣ ಹಾಗೂ ಈ ಬಗ್ಗೆ ನಿರಂತರವಾಗಿ ಆತಂಕವನ್ನು ತೋರ್ಪಡಿಸುತ್ತಿರುವುದರಿಂದ ಕರಡು  ಅಧಿ ಸೂಚನೆಯಲ್ಲಿ ಇರುವ ಗ್ರಾಮಗಳ ಭೌತಿಕ ಸಮೀಕ್ಷೆಯನ್ನು ಒಂದು ಬಾರಿಗೆ ರಾಜ್ಯ ಸರ್ಕಾರದ ಮೂಲಕ ಕೈಗೊಂಡು ಗ್ರಾಮೀಣ ಜನರಿಗೆ ಸ್ಪಷ್ಟ ಮಾಹಿತಿಯೊಂದಿಗೆ ಅವರಲ್ಲಿರುವ ಆತಂಕ ನಿವಾರಣೆ ಮಾಡಿ ತದನಂತರ ಕ್ಷೇತ್ರಿಯ ಜನ ಜೀವನೋಪಾಯದ ಪೂರಕ ಸಂಪೂರ್ಣ ಮಾಹಿತಿಯೊಂದಿಗೆ ಕೇಂದ್ರ ಸರಕಾರದೊಂದಿಗೆ ಈ ವಿಚಾರದಲ್ಲಿ ಸಮನ್ವಯ ಸಾಧಿಸಲು ಹಾಗೂ ಹಕ್ಕು ಮಂಡಿಸಲು ಪೂರಕ ವಾತಾವರಣ ಸೃಷ್ಟಿಸಲು ಆಗುವುದರಿಂದ ಅಧಿಸೂಚಿತ ಗ್ರಾಮಗಳಲ್ಲಿ ಸರಕಾರದ ಮೂಲಕ ಒಂದು ಬಾರಿಗೆ ಭೌತಿಕ ಸರ್ವೇ ನಡೆಸಲು ಕ್ರಮ ವಹಿಸಬೇಕೆಂದು ಇದೇ ಸಂದರ್ಭದಲ್ಲಿ ಶಾಸಕರು ಸರಕಾರವನ್ನು ಆಗ್ರಹ ಪಡಿಸಿದ್ದಾರೆ.

    Click here

    Click here

    Click here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ

    20/08/2026

    ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ

    20/08/2026

    ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು

    20/08/2026
    Leave A Reply Cancel Reply

    1 × 4 =

    Call us

    Click Here

    Call us

    Call us

    Call us
    Highest Viewed Recently
    • ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ
    • 56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ
    • ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ
    • ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು
    • ಸಾಸ್ತಾನದಿಂದ ಶ್ರೀ ಕ್ಷೇತ್ರ ತಿರುಪತಿಗೆ 16ನೇ ವರ್ಷದ ಬೃಹತ್ ಪಾದಯಾತ್ರೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.