ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನ ವೀರರಾಜೇಂದ್ರ ಹೆಗ್ಡೆ ಸಭಾಭವನದಲ್ಲಿ ಶಿಕ್ಷಕ-ರಕ್ಷಕ ಸಭೆ ಇತ್ತೀಚಿಗೆ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಸಂಚಾಲಕರಾದ ಅನುಪಮ ಎಸ್. ಶೆಟ್ಟಿ ಮಾತನಾಡಿ, ಶಿಕ್ಷಕರು ಮತ್ತು ಪಾಲಕರು ಒಟ್ಟಾಗಿ ಕಾರ್ಯ ನಿರ್ವಹಿಸಿದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗು ವೈಯಕ್ತಿಕ ಬೆಳವಣಿಗೆ ಉತ್ತಮ ವಾತಾವರಣ ನಿರ್ಮಾಣವಾಗುತ್ತದೆ. ಆದ್ದರಿಂದ ಇಂತಹ ಸಭೆಯು ವಿದ್ಯಾರ್ಥಿ ಕೇಂದ್ರಿತ ಶಿಕ್ಷಣದ ಪ್ರಮುಖ ಅಂಗವಾಗಿದ್ದರಿಂದ ಪಾಲಕರು ತಮ್ಮ ಕುಟುಂಬದ ಜವಬ್ದಾರಿಯೊಂದಿಗೆ ಮಕ್ಕಳ ಶೈಕ್ಷಣಿಕ ಪ್ರಗತಿ, ಹಾಜರಾತಿ, ವರ್ತನೆ ಕುರಿತು ಶಿಕ್ಷಕರೊಂದಿಗೆ ಚರ್ಚಿಸಿದಾಗ ಮಾತ್ರ ಮಕ್ಕಳು ಅತ್ಯುತ್ತಮ ವಿದ್ಯಾರ್ಥಿಗಳಾಗಿ ರೂಪುಗೊಳ್ಳುತ್ತಾರೆ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ದಯಾನಂದ ಎನ್. ಅವರು ಕಾಲೇಜಿನ ನಿಯಮಾವಳಿ ಮತ್ತು ಕಾಲೇಜಿನಲ್ಲಿ ಲಭ್ಯವಿರುವ ವಿವಿಧ ಸೌಲಭ್ಯಗಳ ಕುರಿತು ತಿಳಿಸಿದರು. ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ರವಿಚಂದ್ರ ಅವರು ವಿಶ್ವವಿದ್ಯಾನಿಲಯದ ನಿಯಮಾವಳಿ ಮತ್ತು ಕಾಲೇಜಿನ ಪಠ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.
ಕಾಲೇಜಿನ ಆಡಳಿತಾಧಿಕಾರಿ ಡಾ. ಮೋಹನ ಕೆ.ಎನ್. ಹೆತ್ತವರ ಜವಬ್ದಾರಿಗಳ ಬಗ್ಗೆ ಮಾತನಾಡಿದರು. ಐ.ಕ್ಯೂ.ಎ.ಸಿ ಘಟಕದ ಅಧಿಕಾರಿ ಸಂದೀಪ್ ಕೆ. ಸ್ವಾಗತಿಸಿದರು. ಕಾಲೇಜಿನ ಶಿಕ್ಷಕ- ರಕ್ಷಕ ಸಂಘಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಡಾ. ದಯಾನಂದ ಎನ್, ಉಪಾಧ್ಯಕ್ಷರಾಗಿ ಮಂಜುನಾಥ ಮೊಗವೀರ, ಕಾರ್ಯದರ್ಶಿಯಾಗಿ ಪುರುಷೋತ್ತಮ ಸದಸ್ಯರಾಗಿ ಶೋಭಾ, ವನಿತಾ, ಮಹಾಬಲ, ಶಶಿಕಲಾ ಅವರನ್ನು ಸರ್ಮಾನುಮತದಿಂದ ಆಯ್ಕೆ ಮಾಡಲಾಯಿತು.
ಉಪನ್ಯಾಸಕಿ ಪ್ರಮೀಳಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮ ಸಂಯೋಜಕರಾದ ಡಾ. ವಿಶ್ವನಾಥ ಆಚಾರ್ಯ ವಂದಿಸಿದರು.
















