ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಪ್ರಾಯೋಜಕತ್ವದಲ್ಲಿ ಇಂಟರ‍್ಯಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಎಸ್.ವಿ. ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಇಂಟರ‍್ಯಾಕ್ಟ್ ಕ್ಲಬ್‌ನ ಝೋನಲ್ ಚೇರ್ಮನ್ ನಾಗರಾಜ್ ಶೆಟ್ಟಿ ಅವರು ನೂತನ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿ ಶುಭ ಹಾರೈಸಿದರು. ರೋಟರಿ ಕ್ಲಬ್ ಗಂಗೊಳ್ಳಿಯ ಅಧ್ಯಕ್ಷೆ ಮಾಲಾಶ್ರೀ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು.
ಎಸ್.ವಿ. ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಗೋಪಾಲ್ ದೇವಾಡಿಗ, ಗಂಗೊಳ್ಳಿ ರೋಟರಿ ಕ್ಲಬ್‌ನ ಇಂಟರ‍್ಯಾಕ್ಟ್ ಚೇರ್ಮನ್ ರತ್ನಾ, ಇಂಟರ‍್ಯಾಕ್ಟ್ ಕೋ -ಆರ್ಡಿನೇಟರ್, ಶಿಕ್ಷಕಿ ಉಷಾ ಮತ್ತು ಇತರ ಶಿಕ್ಷಕರು ಉಪಸ್ಥಿತರಿದ್ಧರು.











