Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಕ್ರಮ ಗಣಿಗಾರಿಕೆಗೆ ಸಹಕಾರ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಪಡಿಸಿದ ಶಾಸಕ ಗಂಟಿಹೊಳೆ
    ಊರ್ಮನೆ ಸಮಾಚಾರ

    ಅಕ್ರಮ ಗಣಿಗಾರಿಕೆಗೆ ಸಹಕಾರ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಪಡಿಸಿದ ಶಾಸಕ ಗಂಟಿಹೊಳೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೆಂಗಳೂರು:
    ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಮಳೆಗಾಲದ ಅಧಿವೇಶನದಲ್ಲಿ ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ದಾಖಲಾದ ಅಕ್ರಮ ಗಣಿಗಾರಿಕೆ ಪ್ರಕರಣಗಳು ಹಾಗೂ ತಪ್ಪಿತಸ್ಥರ  ಮತ್ತು ಅಕ್ರಮ ಗಣಿಗಾರಿಕೆಗೆ ಸಹಕಾರ ನೀಡಿದ ಅಧಿಕಾರಿಗಳ ವಿರುದ್ಧ ಕೈಗೊಂಡ ಕ್ರಮದ ಬಗ್ಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಪ್ರಶ್ನೆ ಕೇಳಿದ್ದಾರೆ.

    Click Here

    Call us

    Click Here

    ಚುಕ್ಕೆ ರಹಿತ ಪ್ರಶ್ನೆಗೆ ಉತ್ತರಿಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವರಾದ ಎಸ್. ಎಸ್ ಮಲ್ಲಿಕಾರ್ಜುನ್ ರವರು ರಾಜ್ಯದಲ್ಲಿ 2024-25 ನೇ ಸಾಲಿನಿಂದ 2026-27 ನೇ ಸಾಲಿನ ಜುಲೈವರೆಗೆ ಅಕ್ರಮ ಗಣಿಗಾರಿಕೆ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪ್ರಕರಣಗಳನ್ನು ಪತ್ತೆ ಹಚ್ಚಿದ್ದು ತಪ್ಪಿತಸ್ಥರ ವಿರುದ್ಧ ಎಂಎಂ (ಡಿ&ಆರ್ )ಕಾಯ್ದೆ 1957 ಮತ್ತು ಕರ್ನಾಟಕ ಉಪಖನಿಜ ರಿಯಾಯಿತಿ ನಿಯಮಗಳು 1994ರ ನಿಯಮಗಳಂತೆ ಮೊಕದ್ದಮೆಗಳನ್ನು ದಾಖಲಿಸಿ ದಂಡವನ್ನು ವಿಧಿಸಿ ಸಂಗ್ರಹಿಸಲಾಗಿದೆ.

    ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನದಿ ಪಾತ್ರದಲ್ಲಿನ ಮರಳು,ಕೆಂಪು ಕಲ್ಲು,ಕಟ್ಟಡ ಕಲ್ಲು ಇತ್ಯಾದಿ ಉಪಖನಿಜಗಳನ್ನು ಅನಧಿಕೃತವಾಗಿ ಗಣಿಗಾರಿಕೆ ಹಾಗೂ ಸಾಗಾಣಿಕೆ ಮಾಡುತ್ತಿರುವುದು ಸರಕಾರದ ಗಮನಕ್ಕೆ ಬಂದಿರುತ್ತದೆ. ಅನಧಿಕೃತ ಗಣಿಗಾರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಅಧಿಕಾರಿಗಳ ನಿರ್ಲಕ್ಷದ ಬಗ್ಗೆ ಅಥವಾ ಅಕ್ರಮದಾರರ ಜೊತೆ ಸಹಭಾಗಿತ್ವವಾಗಿರುವ ಯಾವುದೇ ಪ್ರಕರಣಗಳು ಕಂಡುಬಂದಿರುವುದಿಲ್ಲ.ಅಕ್ರಮ ಗಣಿಗಾರಿಕೆ ತಡೆಗಟ್ಟುವಲ್ಲಿ ವಿಫಲರಾದ ಅಧಿಕಾರಿಗಳನ್ನು ಸರ್ಕಾರದಿಂದಅಮಾನತುಗೊಳಿಸಿ ಶಿಸ್ತು ಕ್ರಮ ಜರುಗಿಸಲು ಕ್ರಮವಹಿಸಲಾಗುತ್ತಿದೆ ಅದರಂತೆ ಕಳೆದ ಮೂರು ವರ್ಷಗಳಲ್ಲಿ ಅಕ್ರಮ ಗಣಿಗಾರಿಕೆ ನಿಯಂತ್ರಿಸುವಲ್ಲಿ ವಿಫಲರಾಗಿರುವ ಆರು ಜನ ಇಲಾಖೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಿ ಇಲಾಖಾ ವಿಚಾರಣೆಕೈಗೆತ್ತಿಕೊಳ್ಳಲಾಗಿರುತ್ತದೆ ಎಂದಿದ್ದಾರೆ.

    ಗಣಿಗಾರಿಕೆಯಿಂದ ಸಾರ್ವಜನಿಕ ಮೂಲ ಸೌಕರ್ಯ ಹಾನಿಯ ಬಗ್ಗೆ ಅಧ್ಯಯನ ಕೈಗೊಳ್ಳಲು ಒತ್ತಾಯ:
    ಗಣಿಗಾರಿಕೆಯಿಂದ ಪರಿಸರ ಕೃಷಿ ಭೂಮಿ ಜಲಮೂಲಗಳು ಹಾಗೂ ಸಾರ್ವಜನಿಕರ ರಸ್ತೆಗಳ ಮೇಲೆ ಉಂಟಾಗುತ್ತಿರುವ ಹಾನಿಗಳ ಬಗ್ಗೆ ಸರ್ಕಾರದಿಂದ ಅಧ್ಯಯನ ಮಾಡುವ ಬಗ್ಗೆ ಕೇಳಿರುವ ಪೂರಕ ಪ್ರಶ್ನೆಗೆ ಗಣಿಗಾರಿಕೆಯಿಂದ ಪರಿಸರ ಕೃಷಿ ಭೂಮಿ ಜಲಮೂಲಗಳು ಹಾಗೂ ಸಾರ್ವಜನಿಕರ ರಸ್ತೆಗಳ ಮೇಲೆ ಉಂಟಾಗುತ್ತಿರುವ ಹಾನಿಗಳ ಬಗ್ಗೆ ಸರ್ಕಾರದಿಂದ ಯಾವುದೇ ಅಧ್ಯಯನ ಆಗಿರುವುದಿಲ್ಲ ಎಂದು ಸಚಿವರು ಇದೇ ಸಂದರ್ಭದಲ್ಲಿ ಶಾಸಕರ ಪ್ರಶ್ನೆಗೆ ಉತ್ತರಿಸಿದ್ದಾರೆ.

    ಅಂಕಿ ಅಂಶ:
    * ರಾಜ್ಯದಲ್ಲಿ ಕಳೆದ ಮೂರು ವರ್ಷದಲ್ಲಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ದಾಖಲಾಗಿರುವ ಒಟ್ಟು ಪ್ರಕರಣಗಳ ಸಂಖ್ಯೆ- 2311

    Click here

    Click here

    Click here

    Call us

    Call us

    * ಇದರ ಪೈಕಿ ದಾಖಲಾಗಿರುವ ಮೊಕದ್ದಮೆಗಳ ಸಂಖ್ಯೆ 781

    * ಅಕ್ರಮ ಗಣಿಗಾರಿಕೆ ಸಂಬಂಧಿಸಿ ದಂತೆ ವಸೂಲಿ ಮಾಡಲಾಗಿರುವ ದಂಡನೆ ರೂ. 26.75 ಕೋಟಿ.

    * ಅಕ್ರಮ ಗಣಿಗಾರಿಕೆ ತಡೆಗಟ್ಟುವಲ್ಲಿ ವಿಫಲರಾಗಿ ಇಲಾಖೆ ವಿಚಾರಣೆ ಎದುರಿಸುತ್ತಿರುವ ಅಧಿಕಾರಿಗಳು 06

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ದೇಶೀ ನಾಯಿಗಳ ಉಚಿತ ಸಂತಾನ ಹರಣ ಚಿಕಿತ್ಸಾ ಶಿಬಿರಕ್ಕೆ ಚಾಲನೆ

    06/10/2026

    ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳು ಬಾಕ್ಸಿಂಗ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    06/10/2026

    ಕುಂದಾಪುರ: ಸೈಬರ್‌ ಅಪರಾಧ – ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

    05/10/2026
    Leave A Reply Cancel Reply

    twelve − 2 =

    Call us

    Click Here

    Call us

    Call us

    Call us
    Highest Viewed Recently
    • ದೇಶೀ ನಾಯಿಗಳ ಉಚಿತ ಸಂತಾನ ಹರಣ ಚಿಕಿತ್ಸಾ ಶಿಬಿರಕ್ಕೆ ಚಾಲನೆ
    • ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳು ಬಾಕ್ಸಿಂಗ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ
    • ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಗೆ ಅರ್ಜಿ ಆಹ್ವಾನ
    • ಕುಂದಾಪುರ: ಸೈಬರ್‌ ಅಪರಾಧ – ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ
    • ಡಾ. ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ವಿವಿಧ ಸ್ಪರ್ಧೆಗಳ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.