Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎಲೆಯಲ್ಲಿ ಅನ್ನವನ್ನು ಬಿಟ್ಟರೆ ವ್ಯರ್ಥ, ಹೆಚ್ಚಾಗಿ ತಿಂದರೆ ಅನರ್ಥ: ಶ್ರೀ ರಾಘವೇಶ್ವರ
    ಊರ್ಮನೆ ಸಮಾಚಾರ

    ಎಲೆಯಲ್ಲಿ ಅನ್ನವನ್ನು ಬಿಟ್ಟರೆ ವ್ಯರ್ಥ, ಹೆಚ್ಚಾಗಿ ತಿಂದರೆ ಅನರ್ಥ: ಶ್ರೀ ರಾಘವೇಶ್ವರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗೋಕರ್ಣ:
    ಪಂಚ ಭೂತಗಳ ಮೇಲೆ ನಾವೂ ನಿಯಂತ್ರಣವನ್ನು ಸಾಧಿಸಬಹುದು. ಪ್ರಕೃತಿ ನಮಗೆ ಕೊಟ್ಟದ್ದನ್ನು ಕಾಲ ಹಾಗೂ ದೇಶಕ್ಕೆ ತಕ್ಕಂತೆ ಮತ್ತು ಶಾಸ್ತ್ರ ನಿಯಮದಂತೆ ಆಹಾರವನ್ನು ಸೇವಿಸಿದರೆ ಹಾಗೂ ನಿಯಮ ಬದ್ಧವಾದ ಉಪವಾಸದಿಂದ ಸಾಮಾನ್ಯನೂ ಕೂಡ ಅಗ್ನಿಜಯವನ್ನು ಸಾಧಿಸಬಹುದು ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.

    Click Here

    Call us

    Click Here

    ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಶುಕ್ರವಾರ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಮಹಾನ್ ವ್ಯಕ್ತಿಗಳ ಜೀವನದಲ್ಲಿಯೂ ಕಷ್ಟಗಳು ಬರುತ್ತವೆ ಎಂದ ಶ್ರೀಗಳು, ನಳ – ದಮಯಂತಿಯ ಚರಿತ್ರೆಯ ಮೂಲಕ ನಳನಿಗೆ ಅಗ್ನಿಯ ಮೇಲಿದ್ದ ಪ್ರಭಾವ ಹಾಗೂ ಬಲವನ್ನು ವಿವರಿಸಿ, ನಳನು ಸಂಕಷ್ಟಗಳ ಸರಮಾಲೆಯ ಮಧ್ಯದಲ್ಲಿದ್ದಾಗ ಆತನ ಮಹತ್ವ ಮತ್ತು ಸಾಮರ್ಥ್ಯ ಜಗತ್ತಿನ ಮುಂದೆ ಪ್ರಕಟವಾಯಿತು. ಪಂಚಭೂತಗಳ ಮೇಲೆ ನಳನು ಸಾಧಿಸಿಕೊಂಡಿದ್ದ ನಿಯಂತ್ರಣದಿಂದ ಇದು ಸಾಧ್ಯವಾಯಿತು ಎಂದು ಅಭಿಪ್ರಾಯಪಟ್ಟರು.

    ತೇಗು ಬಂದ ನಂತರ ಊಟವನ್ನು ನಿಲ್ಲಿಸಬೇಕು ಎನ್ನಲಾಗಿದೆ. ಆದರೆ ಆ ಸಮಯದಲ್ಲಿ ಎಲೆಯ ಮೇಲೆ ಉಳಿದಿರುವ ಆಹಾರವನ್ನು ಹಾಗೆಯೇ ಬಿಡಬೇಕೇ? ಎಂಬ ಪ್ರಶ್ನೆಗೆ ಉತ್ತರಿಸಿದ ಶ್ರೀಗಳು, ನಮ್ಮ ದೇಹಕ್ಕೆ ಅಗತ್ಯಕ್ಕಿಂತ ಹೆಚ್ಚಿನ ಆಹಾರವನ್ನು ಎಲೆಗೆ ಹಾಕಿಸಿಕೊಳ್ಳಬಾರದು. ಬಡಿಸುವವರಿಗೂ ಈ ಬಗ್ಗೆ ಪರಿವು ಅಗತ್ಯ. ಬಾಳೆ ಎಲೆಯಲ್ಲಿ ಊಟವನ್ನು ಬಿಟ್ಟರೆ ಅದು ವ್ಯರ್ಥ. ಆದರೆ ಹೆಚ್ಚಾದ ಆಹಾರವನ್ನು ನಾವು ಸೇವಿಸಿದರೆ ಅದು ಅನರ್ಥಕ್ಕೆ ಕಾರಣ. ಒಂದೊಮ್ಮೆ ಎಲೆಯಲ್ಲಿ ಆಹಾರವನ್ನು ವ್ಯರ್ಥ ಮಾಡಿದರೆ ಅದು ನಿಜವಾಗಿ ವ್ಯರ್ಥವಲ್ಲ. ಅದು ಬೇರೆ ಯಾವುದೋ ಜೀವಿಯ ಪಾಲಿಗೆ ಆಹಾರವಾಗುತ್ತದೆ ಎಂದು ತಿಳಿಸಿದರು.

    ಜೀವನದಲ್ಲಿ ಆರೋಗ್ಯ, ಶಾಂತಿ ಮತ್ತು ಆಧ್ಯಾತ್ಮಿಕ ಬೆಳವಣಿಗೆ ಬೇಕಾದರೆ ಆಹಾರದ ಬಗ್ಗೆ ಜವಾಬ್ದಾರಿ ಇರಬೇಕು, ಜಠರಾಗ್ನಿಯನ್ನು ಕಾಪಾಡಬೇಕು ಮತ್ತು ಅನ್ನವನ್ನು ದೇವಸ್ವರೂಪವೆಂದು ಭಾವಿಸಿ ಗೌರವಿಸಬೇಕು ಎಂದು ಸಮಾಜಕ್ಕೆ ಕರೆ ನೀಡಿದರು.

    ಶ್ರೀಕ್ಷೇತ್ರ ಹಟ್ಟಿಯಂಗಡಿಯ ಧರ್ಮದರ್ಶಿಗಳಾದ ವೇ.ಮೂ. ಬಾಲಚಂದ್ರ ಭಟ್ಟ ಕುಟುಂಬದವರು ಗುರುಭಿಕ್ಷಾ ಸೇವೆಯನ್ನು ಸಮರ್ಪಿಸಿದರು. ಜೆ.ಡಿ.ಎಸ್ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷ ಸೂರಜ್ ನಾಯ್ಕ ಸೋನಿ, ಶೇಖರ ನಾಯ್ಕ ಶ್ರೀಗಳ ಆಶೀರ್ವಾದ ಪಡೆದರು. ಮಂಜುನಾಥ ಸುವರ್ಣಗದ್ದೆ, ಶಾಂತಾರಾಮ ಹೆಗಡೆ ಕೊಂಡದಕುಳಿ, ದಿನಪ್ರಧಾನರಾಗಿ ಆರ್.ಎಸ್. ಹೆಗಡೆ ಹರಗಿ ದಂಪತಿಗಳು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ನಾಮಧಾರಿ ಸಮಾಜದಿಂದ ಸ್ವರ್ಣಪಾದುಕಾ ಪೂಜೆ:
    ಪಾರಂಪರಿಕವಾಗಿ ಶ್ರೀರಾಮಚಂದ್ರಾಪುರ ಮಠಕ್ಕೆ ನಡೆದುಕೊಳ್ಳುತ್ತಿರುವ ನಾಮಧಾರಿ ಸಮಾಜದ ಗುರುಬಂಧುಗಳಿಂದ ಸ್ವರ್ಣಪಾದುಕಾ ಪೂಜೆ ನಡೆಯಿತು. ಪೂಜೆಯನ್ನು ಸ್ವೀಕರಿಸಿ ಸಮಾಜವನ್ನು ಆಶೀರ್ವದಿಸಿದ ಶ್ರೀಗಳು, ಪರಸ್ಪರ ಗುರು ಶಿಷ್ಯರ ಭೇಟಿ ಆಗಾಗ ನಡೆದಾಗ ಬಾಂಧವ್ಯ ಗಟ್ಟಿಯಾಗಲು ಸಾಧ್ಯ. ಗುರುಪರಂಪರೆಯ ಅನುಗ್ರಹ ಈ ಸಮಾಜದ ಮೇಲೆ ಸದಾ ಇರಲಿದ್ದು, ಸಮಾಜದ ಆಗುಹೋಗುಗಳ ಜೊತೆಗೆ ಶ್ರೀಮಠ ಸದಾ ಇರಲಿದೆ ಎಂದರು. ನಾಮಧಾರಿ ಸಮಾಜದ ಕುಮಟಾ ತಾಲೂಕಾ ಅಧ್ಯಕ್ಷ ಅರುಣಕುಮಾರ ಜಿ. ನಾಯ್ಕ, ಶೇಖರ ನಾಯ್ಕ, ಹರೀಶ ನಾಯ್ಕ, ಅಶೋಕ ನಾಯ್ಕ ಸೇರಿದಂತೆ ಸಮಾಜ ಬಂಧುಗಳು ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟ: ಅಡಿಕೆ ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

    22/08/2026

    ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಸರಕಾರಿ ಸೇವೆಯಿಂದ ಅಮಾನತು

    21/08/2026

    ಬಾಳ್ಕುದ್ರು: ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

    21/08/2026
    Leave A Reply Cancel Reply

    ten + seven =

    Call us

    Click Here

    Call us

    Call us

    Call us
    Highest Viewed Recently
    • ಎಲೆಯಲ್ಲಿ ಅನ್ನವನ್ನು ಬಿಟ್ಟರೆ ವ್ಯರ್ಥ, ಹೆಚ್ಚಾಗಿ ತಿಂದರೆ ಅನರ್ಥ: ಶ್ರೀ ರಾಘವೇಶ್ವರ
    • ಎಂ.ಜಿ.ಎಂ ಸಂಧ್ಯಾ ಕಾಲೇಜು: ವಾಣಿಜ್ಯ ಮತ್ತು ನಿರ್ವಹಣಾ ಕ್ಲಬ್ ಉದ್ಘಾಟನೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ
    • ಕೋಟ: ಅಡಿಕೆ ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು
    • ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಸರಕಾರಿ ಸೇವೆಯಿಂದ ಅಮಾನತು
    • ಬಾಳ್ಕುದ್ರು: ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.