ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಾಲೇಜಿನಲ್ಲಿ ವಿದ್ಯಾರ್ಥಿಗಳು ಸಮಯ ಮತ್ತು ಶಿಸ್ತನ್ನು ಪಾಲನೆ ಮಾಡಬೇಕು. ಕಾಲೇಜಿನಲ್ಲಿ ನಡೆದ ದೈನಂದಿನ ಪಾಠ ಪ್ರವಚನಗಳ ಬಗ್ಗೆ ಪೋಷಕರು ಮಕ್ಕಳಿಂದ ಮಾಹಿತಿ ಪಡೆದುಕೊಳ್ಳುತ್ತಿರಬೇಕು. ಕಡಿಮೆ ಅಂಕ ಪಡೆದ ಮಕ್ಕಳನ್ನು ಕಡೆಗಣಿಸದೆ ಹೆಚ್ಚು ಅಂಕಗಳಿಸುವ ನಿಟ್ಟಿನಲ್ಲಿ ಪ್ರೋತ್ಸಾಹ ನೀಡಬೇಕು. ಕ್ರೀಡೆ ಹಾಗೂ ಪಾಠೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಲು ಉತ್ತೇಜನ ನೀಡಬೇಕು. ಜಂಕ್ ಫುಡ್ ಮತ್ತು ಮೊಬೈಲ್ ಬಳಕೆಯನ್ನು ಆದಷ್ಟು ಕಡಿಮೆ ಮಾಡಬೇಕು ಎಂದು ಗಂಗೊಳ್ಳಿಯ ಎಸ್.ವಿ. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಹೇಳಿದರು.
ಅವರು ಎಸ್.ವಿ. ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಜರಗಿದ ಕಾಲೇಜಿನ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾಲೇಜಿನ ಸಂಸ್ಕೃತ ಉಪನ್ಯಾಸಕ ವೆಂಕಟೇಶಮೂರ್ತಿ ಕಾಲೇಜಿನ ಶಿಸ್ತು ಮತ್ತು ನಿಯಮಗಳ ಹಾಗೂ ಪರೀಕ್ಷಾ ಪದ್ಧತಿಗಳ ಬಗ್ಗೆ ಮಾಹಿತಿ ನೀಡಿದರು. ಉಪನ್ಯಾಸಕಿ ಪ್ರಫುಲ್ಲಾ, ವಿದ್ಯಾರ್ಥಿಗಳ ಪೋಷಕರು, ಉಪನ್ಯಾಸಕರು ಉಪಸ್ಥಿತರಿದ್ದರು.
ಅರ್ಥಶಾಸ್ತ್ರ ಉಪನ್ಯಾಸಕಿ ಸುಗುಣ ಆರ್.ಕೆ. ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.
















